ಆ್ಯಪ್ನಗರ

ನ್ಯಾ.ಎಲ್‌.ನಾರಾಯಣಸ್ವಾಮಿ ಹಿಮಾಚಲ ಪ್ರದೇಶ ಸಿಜೆ

ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಎಲ್‌...

Vijaya Karnataka 31 Aug 2019, 5:00 am
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಎಲ್‌. ನಾರಾಯಣಸ್ವಾಮಿ ಅವರನ್ನು ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಲು ಸುಪ್ರೀಂಕೋರ್ಟ್‌ ಕೊಲಿಜಿಯಂ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ.
Vijaya Karnataka Web lnsj


ಸಿಜೆಐ ರಂಜನ್‌ ಗೊಗೊಯ್‌ ನೇತೃತ್ವದ ಕೊಲಿಜಿಯಂನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದನ್ನು ಸುಪ್ರೀಂಕೋರ್ಟ್‌ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಈ ಶಿಫಾರಸನ್ನು ಅನುಮೋದಿಸಿ ಕೇಂದ್ರ ಸರಕಾರ ರಾಷ್ಟ್ರಪತಿಯವರಿಗೆ ಕಳುಹಿಸಿಕೊಡಲಿದೆ. ರಾಷ್ಟ್ರಪತಿಯವರು ಅಂಕಿತ ಹಾಕಿದ ಮೇಲೆ ಅಧಿಕೃತ ಆದೇಶ ಹೊರಬೀಳಲಿದೆ.

ಚಿತ್ರದುರ್ಗ ಜಿಲ್ಲೆಯ ನ್ಯಾ. ಎಲ್‌.ನಾರಾಯಣಸ್ವಾಮಿ 1987ರಲ್ಲಿ ಹೈಕೋರ್ಟ್‌ನಲ್ಲಿ ವಕೀಲಿಕೆ ಆರಂಭಿಸಿದರು. 1995ರಿಂದ 99ರವರೆಗೆ ಸರಕಾರಿ ಪ್ಲೀಡರ್‌ ಆಗಿದ್ದರು. 2007ರ ಜು.4ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2009ರ ಏ.18ರಂದು ಕಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ನ್ಯಾ. ದಿನೇಶ್‌ ಮಹೇಶ್ವರಿ ಸುಪ್ರೀಂಕೋರ್ಟ್‌ಗೆ ಪದನ್ನೋತಿ ಪಡೆದ ಹಿನ್ನೆಲೆಯಲ್ಲಿ 2019ರ ಜ.17ರಿಂದ ಮೇ 9ರವರೆಗೆ ರಾಜ್ಯ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ ನಾರಾಯಣಸ್ವಾಮಿ ಕರ್ತವ್ಯ ನಿರ್ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ