ಆ್ಯಪ್ನಗರ

ಎಚ್‌ಐವಿ ಸೋಂಕಿತರಿಗೆ ಚಿಕಿತ್ಸೆ: ರಾಜ್ಯಕ್ಕೆ ಪ್ರಶಸ್ತಿ

ಎಚ್‌ಐವಿ ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ಹಾಗೂ ಆರೈಕೆ ವಿಚಾರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ...

Vijaya Karnataka 17 Jan 2019, 5:00 am
ಬೆಂಗಳೂರು: ಎಚ್‌ಐವಿ ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ಹಾಗೂ ಆರೈಕೆ ವಿಚಾರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಲಭಿಸಿದೆ.
Vijaya Karnataka Web hiv


ಒಡಿಶಾದ ಭುವನೇಶ್ವರದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಜ್ಯದ ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಡಾ.ಸುರೇಶ್‌ ಶಾಸ್ತ್ರಿಯವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಆವಿಷ್ಕಾರ ಹಾಗೂ ರಾಜ್ಯಗಳು ಕೈಗೊಂಡ ಉಪಕ್ರಮ ವಿಭಾಗದಲ್ಲಿ ಕರ್ನಾಟಕಕ್ಕೆ ಈ ಪ್ರಶಸ್ತಿ ದಕ್ಕಿದೆ.

ಕೆಲ ವರ್ಷಗಳಿಂದ ರಾಜ್ಯ ಸರಕಾರ ಎಚ್‌ಐವಿ ಪೀಡತರಿಗೆ ಎಆರ್‌ಟಿ ಕೇಂದ್ರ ಸ್ಥಾಪಿಸಿ ಚಿಕಿತ್ಸೆಯನ್ನು ಒದಗಿಸಿದೆ. ಈ ಕೇಂದ್ರಗಳಲ್ಲಿ ನುರಿತ ವೈದ್ಯರು ಹಾಗೂ ವೈದ್ಯ ಸಿಬ್ಬಂದಿ ಸೋಂಕಿತರಿಗೆ ಬೇಕಿರುವ ಎಲ್ಲಾ ಚಿಕಿತ್ಸೆ ನೀಡುತ್ತಿದೆ. ಸದ್ಯ ರಾಜ್ಯ ಏಡ್ಸ್‌ ನಿಯಂತ್ರಣ ಸೊಸೈಟಿ(ಕೆಎಸ್‌ಎಸಿಎಸ್‌)ನಲ್ಲಿ 3 ಲಕ್ಷ ಸೋಂಕಿತರು ಹೆಸರು ನೋಂದಾಯಿಸಿಕೊಂಡಿದ್ದು, 1.7 ಲಕ್ಷ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಾ.ಶಾಸ್ತ್ರಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ