ಆ್ಯಪ್ನಗರ

ಬಜೆಟ್‌ನಲ್ಲಿ ಉಕ, ಅಲ್ಪಸಂಖ್ಯಾತರ ಕಡೆಗಣನೆ: ಎಚ್‌ಡಿಕೆ, ಸಿದ್ದರಾಮಯ್ಯಗೆ ಎಚ್‌.ಕೆ. ಪಾಟೀಲ್ ಪತ್ರ

ಸಮ್ಮಿಶ್ರ ಸರಕಾರ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್‌ ಕುರಿತು ಕಾಂಗ್ರೆಸ್‌ನ ಹಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದ ಬೆನ್ನಲ್ಲೇ, ಅಲ್ಪಸಂಖ್ಯಾತರನ್ನು ಬಜೆಟ್‌ನಲ್ಲಿ ಕಡೆಗಣಿಸಲಾಗಿದೆ ಎಂದು ಕ ಎಚ್‌. ಕೆ. ಪಾಟೀಲ್ ಸಿಎಂ ಎಚ್‌ಡಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

Vijaya Karnataka Web 6 Jul 2018, 6:51 pm
ಬೆಂಗಳೂರು: ಸಮ್ಮಿಶ್ರ ಸರಕಾರ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್‌ ಕುರಿತು ಕಾಂಗ್ರೆಸ್‌ನ ಹಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದ ಬೆನ್ನಲ್ಲೇ, ಅಲ್ಪಸಂಖ್ಯಾತರನ್ನು ಬಜೆಟ್‌ನಲ್ಲಿ ಕಡೆಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಗೆ ಗದಗ ಶಾಸಕ ಎಚ್‌. ಕೆ. ಪಾಟೀಲ್ ಪತ್ರ ಬರೆದು ಅಸಮಾಧಾನ ತೋಡಿಕೊಂಡಿದ್ದಾರೆ.
Vijaya Karnataka Web H K Patil


ಇದರ ಜತೆಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೂ ಪತ್ರ ಬರೆದು ಈ ಬಗ್ಗೆ ಸಮಿತಿ ಸಭೆ ಕರೆದು ಚರ್ಚಿಸುವಂತೆ ಕೋರಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ ಅನ್ನು ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಿದ್ದಾರೆ. ಆದರೆ ಅವರ ಕಲ್ಯಾಣಕ್ಕಾಗಿ ಯಾವುದೇ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿಲ್ಲ. ಕಳೆದ ಬಾರಿಯ ಬಜೆಟ್ ಜತೆಗೆ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿವಿಧ ಯೋಜನೆಯನ್ನು ಪರಿಷ್ಕರಿಸಿ ಹೊಸ ಕಾರ್ಯಕ್ರಮ ಘೋಷಿಸಬೇಕಿತ್ತು. ಆದರೆ ಯಾವುದೇ ಕಾರ್ಯಕ್ರಮ ಘೋಷಿಸಿಲ್ಲ. ಹೀಗಾಗಿ ಬಜೆಟ್ ಕಾರ್ಯಕ್ರಮ ಜಾರಿಗೂ ಮುಂಚೆ ಕೆಲವು ಕಾರ್ಯಗಳನ್ನಾದರೂ ಸೇರ್ಪಡೆ ಮಾಡಿ, ಕೊರತೆಯನ್ನು ಸರಿಪಡಿಸಿ ಎಂದು ಎಚ್‌. ಕೆ. ಪಾಟೀಲ್ ಕುಮಾರಸ್ವಾಮಿಯನ್ನು ಒತ್ತಾಯಿಸಿದ್ದಾರೆ.

ಉತ್ತರ ಕರ್ನಾಟಕದ ಜನತೆಯನ್ನೂ ಬಜೆಟ್‌ನಲ್ಲಿ ಕಡೆಗಣಿಸಲಾಗಿದ್ದು, ಯಾವುದೇ ಹೊಸ ಕಾರ್ಯಕ್ರಮ ಘೋಷಣೆ ಆಗಿಲ್ಲ. ಆ ಭಾಗದ ಜನರ ಭಾವನೆಗೆ ಬೆಲೆ ಕೊಟ್ಟು ನ್ಯಾಯ ಒದಗಿಸಿ, ಪ್ರಾದೇಶಿಕ ಅಸಮತೋಲನ ಸರಿಪಡಿಸಿ ಎಂದು ಪಾಟೀಲ್ ಪತ್ರದಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ