ಆ್ಯಪ್ನಗರ

ರಾಹುಲ್‌ ಭೇಟಿಯಾದ ಎಚ್ಕೆಪಿ

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಚಾರ ಸಮಿತಿ ಹೊಸ ಅಧ್ಯಕ್ಷ ಎಚ್‌ಕೆ...

Vijaya Karnataka 2 Jan 2019, 5:00 am
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಚಾರ ಸಮಿತಿ ಹೊಸ ಅಧ್ಯಕ್ಷ ಎಚ್‌.ಕೆ.ಪಾಟೀಲ್‌ ಅವರು ದಿಲ್ಲಿಯಲ್ಲಿ ಮಂಗಳವಾರ ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿದರು.
Vijaya Karnataka Web 0101-2-2-106


ಜತೆಗೆ ತಮಗೆ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಿದ್ದಕ್ಕಾಗಿ ಧನ್ಯವಾದ ಹೇಳಿದ್ದಾರೆ.

ಸಿಎಂ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗದ ಪಾಟೀಲ್‌ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಎಐಸಿಸಿ ನೇಮಿಸಿತ್ತು. ಈ ಹಿನ್ನೆಲೆಯಲ್ಲಿ ದಿಲ್ಲಿಗೆ ಭೇಟಿ ನೀಡಿದ್ದ ಪಾಟೀಲ್‌ ಅವರು ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆ, ಸಮ್ಮಿಶ್ರ ಸರಕಾರದ ವಿದ್ಯಮಾನಗಳ ಬಗ್ಗೆ ಸಮಾಲೋಚಿಸಿದರು ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ