ಆ್ಯಪ್ನಗರ

ಅನುದಾನ ಹಂಚಿಕೆ ವಿಳಂಬ: ನಾನೇನು ದುಡ್ಡಿನ ಮರ ನೆಟ್ಟಿಲ್ಲ ಎಂದ ಸಿಎಂ

ಸರಕಾರದ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂಬ ವಿರೋಧಿಗಳ ಆರೋಪಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, 'ತತ್‌ಕ್ಷಣವೇ ಅನುದಾನ ಬಿಡುಗಡೆ ಮಾಡಲು ನಾನೇನು ಹಣದ ಗಿಡ ನೆಟ್ಟಿಲ್ಲ' ಎಂದಿದ್ದಾರೆ.

TIMESOFINDIA.COM 10 Aug 2018, 3:21 pm
ಬೆಂಗಳೂರು: ಸರಕಾರದ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂಬ ವಿರೋಧಿಗಳ ಆರೋಪಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, 'ತತ್‌ಕ್ಷಣವೇ ಅನುದಾನ ಬಿಡುಗಡೆ ಮಾಡಲು ನಾನೇನು ಹಣದ ಗಿಡ ನೆಟ್ಟಿಲ್ಲ' ಎಂದಿದ್ದಾರೆ.
Vijaya Karnataka Web hd k


ನಗರದಲ್ಲಿ ನಡೆದ ವಿಶ್ವ ಆದಿವಾಸಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ರೈತರ ಸಾಲ ಮನ್ನಾ, ಶಾದಿ ಭಾಗ್ಯ ಸೇರಿದಂತೆ ಸರಕಾರದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ಯಾವುದೇ ಯೋಜನೆ ಇರಲಿ ತಕ್ಷಣವೇ ಹಣ ಬಿಡುಗಡೆ ಮಾಡಲು ನಾನು ಹಣದ ಗಿಡ ನೆಟ್ಟಿಲ್ಲ. ನನ್ನ ಕಷ್ಟೇ ನನಗೆ ಗೊತ್ತು' ಎಂದು ಹೇಳಿದರು.

ರಾಜ್ಯ ಸರಕಾರದ ಯಾವುದೇ ಯೋಜನೆಗಳಿಗೆ ಅನುದಾನ ಹಂಚಿಕೆ ಮಾಡಬೇಕಾದರೆ, ಅದರದ್ದೆಯಾದ ಕೆಲವು ಪ್ರಕ್ರಿಯೆಗಳನ್ನು ಅನುಸರಿಸಬೇಕಾಗುತ್ತದೆ. ಈ ಸಂಬಂಧ ಅಧಿಕಾರಿಗಳ ಜತೆ ಚರ್ಚಿಸಿ, ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗುತ್ತದೆ. ನಿರ್ಬಂಧಗಳ ಹೊರತಾಗಿಯೂ ಹಣ ಬಿಡುಗಡೆ ಮಾಡಲೇಬೇಕಾದರೆ, ಅಧಿಕಾರಿಗಳ ಬಳಿಗೆ ಮನವರಿಕೆ ಮಾಡಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಹೆಸರಲ್ಲಿ 9 ಲಕ್ಷ ರೂ. ಬಿಲ್ ಬಗ್ಗೆ ತನಿಖೆ ನಡೆಸಲಿ: ಆಂಧ್ರ ಸರಕಾರ

ಶಾದಿ ಭಾಗ್ಯ ಯೋಜನೆಗೆ ಮೀಸಲಿಟ್ಟಿದ್ದ ಅನುದಾನವನ್ನು ಕಡಿತಗೊಳಿಸಲಾಗಿದೆ ಎಂಬ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಶಾದಿ ಭಾಗ್ಯ ಸೇರಿದಂತೆ ಈ ಹಿಂದಿನ ಕಾಂಗ್ರೆಸ್ ಸರಕಾರ ಘೋಷಿಸಿರುವ ಯಾವುದೇ ಯೋಜನೆಗಳ ಅನುದಾನವನ್ನು ಕಡಿತಗೊಳಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ