ಆ್ಯಪ್ನಗರ

ಎಸ್ಸೆಸ್ಸೆಲ್ಸಿ ಎಗ್ಸಾಂ ಬರೆಯಲಾಗದ ಕಂಟೇನ್ಮೆಂಟ್ ಝೋನ್‌ ವಿದ್ಯಾರ್ಥಿಗಳಿಗೆ ಆಗಸ್ಟ್‌ನಲ್ಲಿ ಮತ್ತೊಂದು ಅವಕಾಶ‌!

ಕಂಟೇನ್ಮೆಂಟ್‌ ಹಾಗೂ ಸೀಲ್‌ಡೌನ್‌ ಇರುವಂತಹ ಪ್ರದೇಶಗಳ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳಿಗೆ ಆಗಸ್ಟ್‌ನಲ್ಲಿ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಎಸ್‌. ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

Vijaya Karnataka Web 24 Jun 2020, 1:00 pm
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ ಇದ್ದು, ವಿದ್ಯಾರ್ಥಿಗಳು ಸೇರಿದಂತೆ ಪೋಷಕರ ಎದೆಯಲ್ಲಿ ಢವಢವ ಶುರುವಾಗಿದೆ. ಕಂಟೇನ್ಮೆಂಟ್‌ ಪ್ರದೇಶಗಳಲ್ಲಿ ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಗಳಿಗೆ ಕಳಿಸಲು ಪೋಷಕರು ಭಯಪಡುತ್ತಿದ್ದಾರೆ.
Vijaya Karnataka Web s suresh kumar


ಈ ಹಿನ್ನೆಲೆಯಲ್ಲಿ, ಖುದ್ದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಕಂಟೇನ್ಮೆಂಟ್‌ ಹಾಗೂ ಸೀಲ್‌ಡೌನ್‌ ಇರುವಂತಹ ಪ್ರದೇಶಗಳ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳಿಗೆ ಆಗಸ್ಟ್‌ನಲ್ಲಿ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ, ರಾಜ್ಯಾದ್ಯಂತ ಜೂನ್‌ 24ರಿಂದ, ಜುಲೈ 4ರವೆರೆಗೆ ನಿಗದಿತ ವೇಳಾಪಟ್ಟಿಗೆ ಅನುಗುಣವಾಗಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಎಸ್‌. ಸುರೇಶ್ ಕುಮಾರ್‌ ಬುಧವಾರ ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳು ಗಮನಿಸಬೇಕಾದ ಸಂಗತಿಗಳಿವು

ರಾಜ್ಯದ ತಜ್ಞ ಸಮಿತಿ ಸೂಚನೆ ಪ್ರಕಾರವೇ ಪರೀಕ್ಷೆ ನಡೆಸಲಾಗುತ್ತಿದೆ. ಒಂದು ಕೊಠಡಿಯಲ್ಲಿ 15-18 ಮಕ್ಕಳಷ್ಟೆ ಕೂರುತ್ತಾರೆ. ಪ್ರತಿ ಮಗುವಿನ ನಡುವೆ ಮೂರರಿಂದ ಮೂರೂವರೆ ಅಡಿ ಅಂತರ ಕಾಯ್ದುಕೊಳ್ಳಲಾಗುತ್ತದೆ.

ಆಗಸ್ಟ್‌ನಲ್ಲಿ ಬರೆದರೂ ಫ್ರೆಷ್ ವಿದ್ಯಾರ್ಥಿ‌ ಎಂದೇ ಪರಿಗಣನೆ:
ಕಂಟೈನ್‌ಮೆಂಟ್‌ ಝೋನ್‌ನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾಗದಿದ್ದರೆ, ಅವರಿಗೆ ಆಗಸ್ಟ್‌ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಅವರನ್ನೂ ಕೂಡ ಫ್ರೆಶ್‌ ಅಭ್ಯರ್ಥಿಗಳೆಂದೇ ಪರಿಗಣಿಸಲಾಗುತ್ತದೆ. ಬೆಳಗ್ಗೆ 7:30 ಯಿಂದಲೇ ಪರೀಕ್ಷಾ ಕೇಂದ್ರ ತೆರೆದಿರುತ್ತದೆ. ವಿದ್ಯಾರ್ಥಿಗಳು ಬೇಗನೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ತಪಾಸಣೆ ಮಾಡಿಸಿಕೊಳ್ಳಬೇಕು. ಜ್ವರ, ಕೆಮ್ಮು, ನೆಗಡೆಯಂತಹ ಲಕ್ಷಣಗಳುಳ್ಳ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಹೇಳಿದರು. ರಾಜ್ಯಾದ್ಯಂತ ಈ ಬಾರಿ 8,48,203 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ