ಆ್ಯಪ್ನಗರ

ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣ; ಸಮನ್ಸ್‌ ರದ್ದುಕೋರಿದ ಮಾಜಿ ಸಿಎಂಗಳು

ಸಿದ್ದರಾಮಯ್ಯ ಸೆ.23ರಂದು ಖುದ್ದು ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನೀಡಿರುವ ಆದೇಶ ಹಾಗೂ ಪ್ರಕರಣ ರದ್ದು ಕೋರಿದ್ದಾರೆ. ಅಂತೆಯೇ ಎಚ್‌.ಡಿ.ಕುಮಾರಸ್ವಾಮಿ ಕೂಡ ಸಮನ್ಸ್‌ ಜಾರಿ ಪ್ರಶ್ನಿಸಿದ್ದಾರೆ.

Vijaya Karnataka 21 Sep 2019, 6:13 am
ಬೆಂಗಳೂರು: ಎರಡು ಪ್ರತ್ಯೇಕ ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ನೀಡಿರುವ ಸಮನ್ಸ್‌ ಮತ್ತು ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.
Vijaya Karnataka Web Siddu- Kumaraswamy


ನ್ಯಾ.ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬರಲಿವೆ.

ಸಿದ್ದರಾಮಯ್ಯ ಸೆ.23ರಂದು ಖುದ್ದು ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನೀಡಿರುವ ಆದೇಶ ಹಾಗೂ ಪ್ರಕರಣ ರದ್ದು ಕೋರಿದ್ದಾರೆ. ಅಂತೆಯೇ ಎಚ್‌.ಡಿ.ಕುಮಾರಸ್ವಾಮಿ ಕೂಡ ಸಮನ್ಸ್‌ ಜಾರಿ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಪ್ರಕರಣ: 1997ರಲ್ಲಿಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದಾಗ ತಮ್ಮ ಪ್ರಭಾವ ಬಳಸಿ ಮುಡಾದಿಂದ ಡಿನೋಟಿಫೈ ಮಾಡಿಸಿ ಆದಾದ 10 ದಿನಗಳಲ್ಲಿಯೇ 10 ಗುಂಟೆ ಜಮೀನು ಖರೀದಿಸಿ, ಪಕ್ಕದ ಸ್ವಲ್ಪ ಜಾಗ ಅತಿಕ್ರಮಿಸಿ ಮನೆ ನಿರ್ಮಿಸಿ 2003ರಲ್ಲಿಆ ಮನೆ ಮಾರಾಟ ಮಾಡಿದ್ದರು ಎಂದು ಗಂಗರಾಜು ಎಂಬುವರು ದೂರು ದಾಖಲಿಸಿದ್ದರು. ಲಕ್ಷ್ಮೀಪುರಂ ಪೊಲೀಸರು ಬಿ ರಿಪೋರ್ಟ್‌ ಸಲ್ಲಿಸಿದ್ದರು.ಅದನ್ನು ಪ್ರಶ್ನಿಸಿ ಗಂಗರಾಜು ಕೋರ್ಟ್‌ ಮೆಟ್ಟಿಲೇರಿದ್ದರು. ಆಗ ವಿಶೇಷ ಕೋರ್ಟ್‌ ಸಿದ್ದರಾಮಯ್ಯ,ಮುಡಾ ಸದಸ್ಯರಾಗಿದ್ದ ರಾಮದಾಸ್‌, ಗೋ ಮಧುಸೂದನ್‌ ,ಅಜಯ್‌ ಸೇಠ್‌ ಸೇರಿ 11 ಮಂದಿಗೂ ಸೆ.23 ರಂದು ಹಾಜರಾಗುವಂತೆ ಸಮನ್ಸ್‌ ಜಾರಿಗೊಳಿಸಿತ್ತು.

ಎಚ್‌ಡಿಕೆ ಪ್ರಕರಣ: 2007ರಲ್ಲಿಎಚ್‌.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿಬಿಡಿಎ ಬಡಾವಣೆಗಾಗಿ ವಶಪಡಿಸಿಕೊಂಡಿದ್ದ 3 ಎಕರೆ 34 ಗುಂಟೆ ಭೂಮಿಯನ್ನು ನಿಯಮಬಾಹಿರವಾಗಿ ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯ ಆರ್‌ಟಿಐ ಕಾರ್ಯಕರ್ತ ಎಂ.ಎಸ್‌. ಮಹದೇವಸ್ವಾಮಿ ಲೋಕಾಯುಕ್ತಕ್ಕೆ ಖಾಸಗಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶಿಸಿತ್ತು. 7 ವರ್ಷಗಳ ಕಾಲ ತನಿಖೆ ನಡೆಸಿದ ಪೊಲೀಸರು, 2019ರ ಜನವರಿ ತಿಂಗಳಲ್ಲಿಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಇದನ್ನು ಆಕ್ಷೇಪಿಸಿ ದೂರುದಾರ ಮಹಾದೇವಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ, ಬಿ ರಿಪೋರ್ಟ್‌ ರದ್ದುಪಡಿಸಿತ್ತು. ಪ್ರಕರಣದ ವಿಚಾರಣೆಗೆ ಅ.4ರಂದು ವಿಚಾರಣೆಗೆ ಹಾಜರಾಗುವಂತೆ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ