ಆ್ಯಪ್ನಗರ

ಐಎಂಎ ಹಗರಣ: ಬಹುಕೋಟಿ ವಂಚನೆ ಆರೋಪಿ ಮನ್ಸೂರ್ ಖಾನ್ ಕೊನೆಗೂ ಬಂಧನ

ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಾಲೀಕ, ಅಮಾಯಕ ಹೂಡಿಕೆದಾರರಿಗೆ ಬಹುಕೋಟಿ ರೂ.ಗಳನ್ನು ವಂಚಿಸಿ ದೇಶಬಿಟ್ಟು ಪರಾರಿಯಾಗಿದ್ದ ಆರೋಪಿ ಮನ್ಸೂರ್ ಖಾನ್‌ನನ್ನು ವಿಶೇಷ ತನಿಖಾ ದಳದ ಪೊಲೀಸರು ದಿಲ್ಲಿಯಲ್ಲಿ ಗುರುವಾರ ಮಧ್ಯರಾತ್ರಿ ಬಂಧಿಸಿದ್ದಾರೆ.

Vijaya Karnataka Web 19 Jul 2019, 10:37 am
ಬೆಂಗಳೂರು: ಐಎಂಎ ಬಹುಕೋಟಿ‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ವಂಚನೆ ಆರೋಪಿ ಮನ್ಸೂರ್ ಖಾನ್‌ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ) ದಿಲ್ಲಿಯಲ್ಲಿ ಬಂಧಿಸಿದ್ದಾರೆ.
Vijaya Karnataka Web Mansoor Khan-IMA scam


ಬಹುಕೋಟಿ ವಂಚನೆ ಪ್ರಕರಣ ಹೊರಬೀಳುತ್ತಿದ್ದಂತೆ ದೇಶಬಿಟ್ಟು ಪರಾರಿಯಾಗಿದ್ದ ಖಾನ್‌, ದುಬೈನಲ್ಲಿ ಅಡಗಿಕೊಂಡು ಅಲ್ಲಿಂದಲೇ ವೀಡಿಯೋ ಸಂದೇಶಗಳನ್ನು ಬಿಡುಗಡೆ ಮಾಡುತ್ತಿದ್ದ. ತನಗೆ ರಕ್ಷಣೆ ನೀಡುವುದಾದಲ್ಲಿ 24 ಗಂಟೆಯೊಳಗೆ ಭಾರತಕ್ಕೆ ವಾಪಸ್ ಬರುವುದಾಗಿ ಮೊನ್ನೆಯಷ್ಟೇ ವೀಡಿಯೋ ಸಂದೇಶದಲ್ಲಿ ತಿಳಿಸಿದ್ದ.


ಅದರಂತೆ, ರಕ್ಷಣೆ ಕೊಡುತ್ತೇವೆ ಎಂದು ಆತನಿಗೆ ಭರವಸೆ ನೀಡಿ ಭಾರತಕ್ಕೆ ಬರಲು ಎಸ್‌ಐಟಿ ಸೂಚಿಸಿತ್ತು. ಹೀಗಾಗಿ ದುಬೈನಿಂದ ದಿಲ್ಲಿಗೆ ಬಂದಿಳಿದ ಮನ್ಸೂರ್‌ ಖಾನ್‌ನನ್ನು ಗುರುವಾರ ಮಧ್ಯರಾತ್ರಿ 1:50ರ ಸುಮಾರಿಗೆ ಬಂಧಿಸಿದೆ.

ಮನ್ಸೂರ್ ಖಾನ್‌ನನ್ನು ಇ.ಡಿ ಅಧಿಕಾರಿಗಳು ವಿಚಾರಣೆ ಪೂರ್ಣಗೊಳಿಸಿದ ಬಳಿಕ ಎಸ್‌ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ.


ಸದ್ಯ ಆತನನ್ನು ವಶಕ್ಕೆ ತೆಗೆದುಕೊಂಡು ರಕ್ಷಣೆ ನೀಡಿರುವ ಅಧಿಕಾರಿಗಳ ತಂಡ ದಿಲ್ಲಿಯಲ್ಲೇ ಬೀಡು ಬಿಟ್ಟಿದೆ. ಸದ್ಯ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿರುವ ಎಸ್‌ಐಟಿ ಶೀಘ್ರವೇ ಆತನನ್ನು ಬೆಂಗಳೂರಿಗೆ ಕರೆ ತರುವ ನಿರೀಕ್ಷೆಯಿದೆ. ಎಸ್ಐಟಿ ಮನ್ಸೂರ್ ಖಾನ್ ವಿರುದ್ಧ ಲುಕ್ ಔಟ್ ಸರ್ಕ್ಯೂಲರ್ ಹೊರಡಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ