ಆ್ಯಪ್ನಗರ

ಸರಕಾರಿ ವೈದ್ಯರಿಗೆ ಪ್ರೋತ್ಸಾಹಧನ : ಸಿಎಂ ಹೇಳಿಕೆ

ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಪ್ರಾಮಾಣಿಕ ಸೇವೆ ಗುರುತಿಸಿ ಉತ್ತೇಜಿಸಲು ಪ್ರೋತ್ಸಾಹ ಧನ ನೀಡುವ ವ್ಯವಸ್ಥೆ ಶೀಘ್ರ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

Vijaya Karnataka 31 May 2019, 5:00 am
ಬೆಂಗಳೂರು : ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಪ್ರಾಮಾಣಿಕ ಸೇವೆ ಗುರುತಿಸಿ ಉತ್ತೇಜಿಸಲು ಪ್ರೋತ್ಸಾಹ ಧನ ನೀಡುವ ವ್ಯವಸ್ಥೆ ಶೀಘ್ರ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
Vijaya Karnataka Web incentive for govt doctors says c m
ಸರಕಾರಿ ವೈದ್ಯರಿಗೆ ಪ್ರೋತ್ಸಾಹಧನ : ಸಿಎಂ ಹೇಳಿಕೆ


ನಗರದ ಸಂಜಯ್‌ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಿರುವ ಎಂಆರ್‌ಐ ಘಟಕ ಹಾಗೂ ಮಾಡ್ಯೂಲರ್‌ ಶಸ್ತ್ರಚಿಕಿತ್ಸಾ ವಿಭಾಗವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ''ವೈದ್ಯರ ಸೇವೆಯನ್ನು ಮತ್ತಷ್ಟು ಉತ್ತಮ ಪಡಿಸುವ ನಿಟ್ಟಿನಲ್ಲಿ ಅವರಿಗೆ ಪೋತ್ಸಾಹ ಧನ ನೀಡಬೇಕೆಂದು ಆರೋಗ್ಯ ಸಚಿವರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಶೀಘ್ರವೇ ಜಾರಿಗೊಳಿಸಲಾಗುವುದು,'' ಎಂದು ಹೇಳಿದರು.

ಸರಕಾರಿ ಆಸ್ಪತ್ರೆ ಸೇವೆ ಪಡೆಯಿರಿ

'' ಉತ್ತರ ಕರ್ನಾಟಕದ ಭಾಗದ ಜನರಿಗೂ ಈ ಸೌಲಭ್ಯ ಕಲ್ಪಿಸಲು ವಿಜಯಪುರದಲ್ಲಿ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ಸಂಜಯ ಗಾಂಧಿ ಆಸ್ಪತ್ರೆಯ ಶಾಖೆ ಆರಂಭಿಸಲಾಗುತ್ತಿದೆ. ಜಯದೇವ, ಇಂದಿರಾಗಾಂಧಿಧಿ, ಸಂಜಯ್‌ಗಾಂಧಿಧಿ ಸೇರಿದಂತೆ ರಾಜ್ಯದ ಬಹುತೇಕ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳಿಗಿಂತ ಹೆಚ್ಚಿನ ಸೌಲಭ್ಯಗಳನ್ನು ಹೊಂದಿದ್ದು, ಉತ್ತಮ ಸೇವೆ ನೀಡುತ್ತಿವೆ. ಹೀಗಾಗಿ ಖಾಸಗಿಯಲ್ಲಿ ದುಬಾರಿ ಹಣ ತೆತ್ತು ಬೀದಿ ಪಾಲಾಗದೆ, ಸರಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೇವೆಯನ್ನು ಉಪಯೋಗಿಸಿಕೊಳ್ಳಿ,'' ಎಂದು ಸಲಹೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ