ಆ್ಯಪ್ನಗರ

ಡಿಕೆಶಿ ವಿರುದ್ಧ ವಿಶೇಷ ನ್ಯಾಯ ಮಂಡಳಿಯಲ್ಲಿ ಕೇಸ್‌

ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್‌ ವಿರುದ್ಧದ ಬೇನಾಮಿ ಆಸ್ತಿ ವ್ಯವಹಾರ ಸಂಬಂಧ ಬೇನಾಮಿ ಆಸ್ತಿ ವಿಶೇಷ ನ್ಯಾಯಮಂಡಳಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಐಟಿ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದರು.

Vijaya Karnataka 8 Jan 2019, 5:00 am
ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್‌ ವಿರುದ್ಧದ ಬೇನಾಮಿ ಆಸ್ತಿ ವ್ಯವಹಾರ ಸಂಬಂಧ ಬೇನಾಮಿ ಆಸ್ತಿ ವಿಶೇಷ ನ್ಯಾಯಮಂಡಳಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಐಟಿ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದರು.
Vijaya Karnataka Web dks


2017ರ ಆಗಸ್ಟ್‌ನಲ್ಲಿ ಡಿಕೆಶಿ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು. ಈಗಾಗಲೇ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಸಚಿವರೊಂದಿಗೆ ನಂಟು ಹೊಂದಿರುವ ವ್ಯಕ್ತಿಗಳ ಬಳಿ ನೂರಾರು ಕೋಟಿ ರೂ. ಬೇನಾಮಿ ಆಸ್ತಿ ಇದೆ. ಈ ಪೈಕಿ ಈಗಾಗಲೇ ಸುಮಾರು 200 ಕೋಟಿ ರೂ. ಮೌಲ್ಯದ ಆಸ್ತಿ-ಪಾಸ್ತಿಯ ಜಪ್ತಿ ಪ್ರಕ್ರಿಯೆ ಜಾರಿಯಲ್ಲಿದೆ. ತನಿಖೆಯಲ್ಲಿ ಶಿವಕುಮಾರ್‌ ಅವರು ಬೇನಾಮಿ ಆಸ್ತಿಗಳನ್ನು ಹೊಂದಿರುವುದು ಖಚಿತವಾಗಿದೆ. ಹೀಗಾಗಿ, ನ್ಯಾಯಮಂಡಳಿಗೆ ವರದಿ ಸಲ್ಲಿಸುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದರು.

ಲೋಕಸಭೆ ಚುನಾವಣೆ ಮೇಲೆ ಕಣ್ಣು

ಚುನಾವಣೆ ಆಯೋಗದ ನಿರ್ದೇಶನ, ಸೂಚನೆಯಂತೆ ವಿಧಾನಸಭೆ ಚುನಾವಣೆ ರೀತಿಯಲ್ಲೇ ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಹಣದ ಮೇಲೆ ಐಟಿ ಇಲಾಖೆ ಹದ್ದಿನ ಕಣ್ಣಿಡುತ್ತದೆ ಎಂದು ಐಟಿ ಅಧಿಕಾರಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ