ಆ್ಯಪ್ನಗರ

75th independence day: ರಾಜ್ಯ ಕಾಂಗ್ರೆಸ್‍ನಿಂದ ಸ್ವಾತಂತ್ರ್ಯದ ನಡಿಗೆ ಪಾದಯಾತ್ರೆ ಆರಂಭ

ಸ್ವಾತಂತ್ರದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಸ್ವಾತಂತ್ರ್ಯದ ನಡಿಗೆ ಪಾದಯಾತ್ರೆ ಆರಂಭಗೊಂಡಿದೆ. ನಗರದ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಬಳಿಯಿಂದ ಆರಂಭಗೊಂಡ ಪಾದಯಾತ್ರೆ ಏಳು ಕಿಲೋಮೀಟರ್ ಸಾಗಲಿದೆ. ಸಂಜೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶ ಸಮಾರಂಭ ನಡೆಯಲಿದೆ. ಪಾದಯಾತ್ರೆಯಲ್ಲಿ ಕೆಪಿಸಿಸಿ ‌ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 15 Aug 2022, 2:43 pm

ಹೈಲೈಟ್ಸ್‌:

  • ಕಾಂಗ್ರೆಸ್‍ನಿಂದ ಸ್ವಾತಂತ್ರ್ಯದ ನಡಿಗೆ ಪಾದಯಾತ್ರೆ ಆರಂಭ
  • ಪಾಯಾತ್ರೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿ
  • ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಕಾಂಗ್ರೆಸ್ ಪಾದಯಾತ್ರೆ
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಸ್ವಾತಂತ್ರ್ಯದ ನಡಿಗೆ ಪಾದಯಾತ್ರೆ ಆರಂಭಗೊಂಡಿದೆ.
ನಗರದ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಬಳಿಯಿಂದ ಆರಂಭಗೊಂಡ ಪಾದಯಾತ್ರೆ ಏಳು ಕಿಲೋಮೀಟರ್ ಸಾಗಲಿದೆ. ಸಂಜೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶ ಸಮಾರಂಭ ನಡೆಯಲಿದೆ. ಪಾದಯಾತ್ರೆಯಲ್ಲಿ ಕೆಪಿಸಿಸಿ ‌ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.

75th Independence Day: ಹರ್ ಘರ್ ತಿರಂಗಾ ಯಶಸ್ವಿ- ಸಿಎಂ ಬಸವರಾಜ ಬೊಮ್ಮಾಯಿ
ಸ್ವಾತಂತ್ರ್ಯ ಹೋರಾಟದ ಸಂಕೇತ ಹೊಂದಿದ ಟೀ ಶರ್ಟ್ ತೊಟ್ಟು ಕೈಯಲ್ಲಿ ತಿರಂಗಾ ಹಿಡಿದುಕೊಂಡ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಈ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ನಗರದಲ್ಲಿ ಟ್ರಾಫಿಕ್ ಜಾಮ್

ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದರೂ ಟ್ರಾಫಿಕ್ ಜಾಮ್ ಉಂಟಾಗಿದೆ. ಮೆಜೆಸ್ಟಿಕ್ ಸುತ್ತಮುತ್ತ‌ ಟ್ರಾಫಿಕ್ ಜಾಮ್ ನಿಂದಾಗಿ ಜನರು ಪರದಾಡುವಂತಾಯಿತು. ಸಂಚಾರ ನಿಯಂತ್ರಣಕ್ಕೆ ಪೊಲೀಸರೂ ಹರಸಾಹಸ ಪಟ್ರು.

ದೇಶ ಧರ್ಮಾಧಾರಿತವಾಗ್ತಿದೆ, ಪ್ರಜಾಪ್ರಭುತ್ವ ನಾಶವಾಗ್ತಿದೆ: ಸಿದ್ದರಾಮಯ್ಯ ಆತಂಕ
ಗಮನ ಸೆಳೆದ ಸಾಂಸ್ಕೃತಿಕ ತೊಡುಗೆಗಳು

ಪಾದಯಾತ್ರೆಯಲ್ಲಿ ಬಂಜಾರ ತೊಡುಗೆ ತೊಟ್ಟ ಕಲಾವಿದರು ಗಮನ ಸೆಳೆದರು. ಅದೇ ರೀತಿ ವಿವಿಧ ಕಲಾ ಪ್ರಕಾರಗಳು ಗಮನ ಸೆಳೆಯುವಂತಿದೆ.

ಪಾದಯಾತ್ರೆ ಸಾಗುವ ದಾರಿ

ಕಾಂಗ್ರೆಸ್ ಪಾದಯಾತ್ರೆ ಸಂಗೊಳ್ಳಿ ರಾಯಣ್ಣ ಸರ್ಕಲ್ ನಿಂದ ಆರಂಭಗೊಂಡು ಕೆ.ಆರ್. ಸರ್ಕಲ್, ಟೌನ್ ಹಾಲ್, ಮಿನರ್ವ ಸರ್ಕಲ್ ಮೂಲಕ ನ್ಯಾಷನಲ್ ಕಾಲೇಜು ಮೈದಾನಕ್ಕೆ ತಲುಪಲಿದೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ