ಆ್ಯಪ್ನಗರ

ಬಸ್ ನಿಲ್ದಾಣಗಳಲ್ಲಿಯೂ ಇಂದಿರಾ ಕ್ಯಾಂಟೀನ್, ಶುದ್ಧ ನೀರಿನ ಘಟಕ

ಬಸ್‌ ನಿಲ್ದಾಣಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು ರಾಜ್ಯ ಸರಕಾರ ಮುಂದಾಗಿದೆ

Vijaya Karnataka Web 23 Oct 2017, 8:58 pm
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಗಳನ್ನು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿಯೂ ಆರಂಭಿಸಲಾಗುತ್ತದೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಪ್ರಕಟಿಸಿದ್ದಾರೆ
Vijaya Karnataka Web indira canteen in ksrtc bus stands
ಬಸ್ ನಿಲ್ದಾಣಗಳಲ್ಲಿಯೂ ಇಂದಿರಾ ಕ್ಯಾಂಟೀನ್, ಶುದ್ಧ ನೀರಿನ ಘಟಕ


ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇವಣ್ಣ, ರಾಜ್ಯದ ಪಟ್ಟಣ, ನಗರ, ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅದಕ್ಕೆ ಪೂರಕವಾಗಿ ರಾಜ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಜಾಗ ನೀಡಲು ನಿರ್ಧರಿಸಿದ್ದೇವೆ ಎಂದರು.

ನಮ್ಮ ಕ್ಯಾಂಟೀನ್ ಗಳಿಗೆ ತೊಂದರೆಯಾಗದಂತೆ ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಅವಕಾಶ ನೀಡುತ್ತೇವೆ, ಆದರೆ ಎಲ್ಲಾ ನಿಲ್ದಾಣಗಳ ಬದಲು ಬೇಡಿಕೆ ಬಂದ ಕಡೆ ಆದ್ಯತೆ ಮೇರೆಗೆ ಕ್ಯಾಂಟೀನ್ ಆರಂಭಿಸಲಿದ್ದೇವೆ ಎಂದರು.

ಪ್ರಯಾಣಿಕರ ಮಾಹಿತಿಗಾಗಿ ಬಸ್ ನಿಲ್ದಾಣಗಳಲ್ಲಿ ಡಿಜಿಟಲ್ ಮಾಹಿತಿ ಫಲಕ ಅಳವಡಿಸುತ್ತೇವೆ. ಬಸ್ ವೇಳಾಪಟ್ಟಿ ಆಗಮನ, ನಿರ್ಗಮನದ ಮಾಹಿತಿಯನ್ನು ಪ್ರಕಟಿಸಲು ನಿರ್ಧರಿಸಿದ್ದು ಅದನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ತರಲು ನಿರ್ಧಾರಿಸಲಾಗಿದೆ ಎಂದರು.

ಎಸಿ ಬಸ್‌ಗಳಲ್ಲಿ ಕುಡಿಯುವ ನೀರು ಕೊಡಲಾಗುತ್ತಿದೆ. ಆದರೆ ಬಸ್ ನಿಲ್ದಾಣದಲ್ಲಿಯೂ ಕುಡಿಯುವ ನೀರಿನ ಪೂರೈಕೆಗೆ ಬೇಡಿಕೆ ಬಂದಿದೆ. ಹಾಗಾಗಿ ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲಿದ್ದು, ಶೌಚಾಲಯಗಳ ಶುಚಿತ್ವಕ್ಕೆ ಆದ್ಯತೆ ನೀಡುತ್ತೇವೆ. ಈ ಸಂಬಂಧ ಜನರಿಂದ ಬಂದ ದೂರಿನ ಮೇರೆಗೆ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು.

Indira Canteen in KSRTC Bus Stands

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ