ಆ್ಯಪ್ನಗರ

ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆ ಮೇಲೆ ಐಟಿ ದಾಳಿ

ರಿಯಲ್‌ ಎಸ್ಟೇಟ್‌ ಉದ್ಯಮಿ ಯುಸೂಫ್‌ ಷರೀಫ್‌ ಅವರ ವಸಂತ ನಗರದಲ್ಲಿರುವ ಮನೆ ಮೇಲೆ ಐಟಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು.

Vijaya Karnataka 1 Feb 2019, 5:00 am
ಬೆಂಗಳೂರು : ರಿಯಲ್‌ ಎಸ್ಟೇಟ್‌ ಉದ್ಯಮಿ ಯುಸೂಫ್‌ ಷರೀಫ್‌ ಅವರ ವಸಂತ ನಗರದಲ್ಲಿರುವ ಮನೆ ಮೇಲೆ ಐಟಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು.
Vijaya Karnataka Web it ride on industrialist house
ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆ ಮೇಲೆ ಐಟಿ ದಾಳಿ


ಆದಾಯ ತೆರಿಗೆ ವಂಚನೆ, ರಿಯಲ್‌ ಎಸ್ಟೇಟ್‌ ವ್ಯವಹಾರ ಸಂಬಂಧಿಸಿದಂತೆ ಗುರುವಾರ ಬೆಳಗ್ಗೆ ಐಟಿ ಅಧಿಕಾರಿಗಳ ತಂಡ ಷರೀಫ್‌ ಮನೆಗೆ ತೆರಳಿ ಸಂಜೆವರೆಗೂ ಶೋಧ ಕಾರ್ಯ ನಡೆಸಿದರು. ಯುಸೂಫ್‌ ಷರೀಫ್‌ ಉಮ್ರಾ ಡೆವಲಪರ್ಸ್‌ ಮಾಲೀಕರಾಗಿದ್ದಾರೆ.

ಯುಸೂಫ್‌ ಷರೀಫ್‌ ವಿರುದ್ಧ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಅನುಚಿತ ವರ್ತನೆ ಮತ್ತು ಹಲ್ಲೆ ಆರೋಪದಲ್ಲಿ ಕ್ರಿಮಿನಲ್‌ ಕೇಸ್‌ಗಳು ದಾಖಲಾಗಿವೆ.

2015ರಲ್ಲಿ ಬೆಂಗಳೂರು ದಕ್ಷಿಣ ತಾಲೂಕು ಉಪ ವಿಭಾಗಾಧಿಕಾರಿ ನಾಗರಾಜ್‌ ಎಂಬುವರ ಮೇಲೆ ಹಲ್ಲೆ ನಡೆಸಿದ ಆರೋಪವಿದೆ.

2016ರ ಮಾರ್ಚ್‌ ತಿಂಗಳಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕಚೇರಿಗೆ ನುಗ್ಗಿ ಗಲಾಟೆ ಮಾಡಿ ಅಧಿಕಾರಿಗಳ ಜೊತೆ ಅನುಚಿತ ವರ್ತನೆ ತೋರಿದ ಆರೋಪದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ