ಆ್ಯಪ್ನಗರ

ಅಕ್ರಮ ಗಣಿಗಾರಿಕೆ: ಕೋರ್ಟ್‌ಗೆ ಜನಾರ್ದನ ರೆಡ್ಡಿ ಹಾಜರ್‌

ಬಳ್ಳಾರಿ ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತ ನ್ಯಾ. ಸಂತೋಷ್‌ ಹೆಗ್ಡೆ ಸಲ್ಲಿಸಿದ್ದ ವರದಿ ಆಧರಿಸಿ ದಾಖಲಿಸಿರುವ ಮೂರು ಪ್ರಕರಣಗಳ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಶಾಸಕ ಬಿ.ನಾಗೇಂದ್ರ ಸೇರಿದಂತೆ ಇನ್ನಿತರ ಆರೋಪಿಗಳು ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು.

Vijaya Karnataka 29 Jun 2018, 8:55 am
ಬೆಂಗಳೂರು: ಬಳ್ಳಾರಿ ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತ ನ್ಯಾ. ಸಂತೋಷ್‌ ಹೆಗ್ಡೆ ಸಲ್ಲಿಸಿದ್ದ ವರದಿ ಆಧರಿಸಿ ದಾಖಲಿಸಿರುವ ಮೂರು ಪ್ರಕರಣಗಳ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಶಾಸಕ ಬಿ.ನಾಗೇಂದ್ರ ಸೇರಿದಂತೆ ಇನ್ನಿತರ ಆರೋಪಿಗಳು ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು.
Vijaya Karnataka Web janardhan reddy


ಎರಡು ಪ್ರಕರಣಗಳಲ್ಲಿ ತಮ್ಮ ವಿರುದ್ಧದ ಆರೋಪ ಕೈ ಬಿಡುವಂತೆ ಜನಾರ್ದನ ರೆಡ್ಡಿ ಅರ್ಜಿ ಸಲ್ಲಿಸಿದ್ದು, ಆಕ್ಷೇಪಣೆ ಸಲ್ಲಿಕೆಗೆ ಸಿಬಿಐ ಪರ ಸರಕಾರಿ ಅಭಿಯೋಜಕರಿಗೆ ಕಾಲಾವಕಾಶ ನೀಡಿದ ನ್ಯಾಯಾಲಯ ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿದೆ.

2014ರಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಡ್ರೀಮ್ಸ್‌ ಲಾಜಿಸ್ಟಿಕ್ಸ್‌, ಮಾಜಿ ಅರಣ್ಯಾಧಿಕಾರಿ ಎಸ್‌. ಮುತ್ತಯ್ಯ, ಎಸ್‌.ಪಿ ರಾಜು, ಕೆಂಚೆ ಮಹೇಶ್‌ ಕುಮಾರ್‌, ಕೆ.ವಿ ನಾಗರಾಜ್‌, ಜನಾರ್ದನ ರೆಡ್ಡಿ, ಮೆಹಫೂಜ್‌ ಅಲಿ ಖಾನ್‌, ಇಡ್ಲಿ ಯರ್ರಿಸ್ವಾಮಿ, ಶ್ಯಾಮ್‌ರಾಜ್‌ ಸಿಂಗ್‌, ಮನೋಜ್‌ ಕುಮಾರ್‌ ಶುಕ್ಲಾ, ಎಸ್‌.ಮುರುಳಿ, ಚಿಟ್ಟಾಲಾ ಶ್ರೀನಿವಾಸ ರೆಡ್ಡಿ ಮತ್ತು ಬಿ.ನಾಗೇಂದ್ರಆರೋಪಿಗಳಾಗಿದ್ದಾರೆ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಇನ್ನೂ ಎರಡು ಪ್ರಕರಣಗಳ ವಿಚಾರಣೆ ನಡೆಸಿದ್ದ ನ್ಯಾಯಾಯ ಸರಕಾರಿ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸಲು ತಿಳಿಸಿ, ಜುಲೈ 11 ಕ್ಕೆ ಮುಂದೂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ