ಆ್ಯಪ್ನಗರ

ಜಯಾ ಕೇಸ್‌: ನೂರು ಕೋಟಿ ರೂ. ದಂಡ ಕೇಳಿದ ಕರ್ನಾಟಕ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಸಿಎಂ ದಿವಂಗತ ಜೆ ಜಯಲಲಿತಾ ಅವರಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ 100 ಕೋಟಿ ರೂ...

ವಿಕ ಸುದ್ದಿಲೋಕ 22 Mar 2017, 12:58 pm

ಹೊಸದಿಲ್ಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಸಿಎಂ ದಿವಂಗತ ಜೆ. ಜಯಲಲಿತಾ ಅವರಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ 100 ಕೋಟಿ ರೂ. ದಂಡ ವಸೂಲು ಹೇಗೆ ಎಂಬ ಚಿಂತೆಯಲ್ಲಿ ಮುಳುಗಿರುವ ಕರ್ನಾಟಕ ಸರಕಾರ ಈ ಸಂಬಂಧ ಸುಪ್ರೀಂಕೋರ್ಟ್‌ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ.

ಆಸ್ತಿ ಗಳಿಕೆ ಪ್ರಕರಣದಲ್ಲಿ ಫೆಬ್ರವರಿ 14ರಂದು ಅಂತಿಮ ತೀರ್ಪು ಪ್ರಕಟಿಸಿದ್ದ ಸುಪ್ರೀಂಕೋರ್ಟ್‌ ನ್ಯಾಯಪೀಠವು, ಆರೋಪಿಗಳಾದ ಎಐಎಡಿಎಂಕೆ ಮುಖ್ಯಸ್ಥೆ ವಿ.ಕೆ.ಶಶಿಕಲಾ ಮತ್ತು ಇಬ್ಬರಿಗೆ ಸೆರೆವಾಸ ಹಾಗೂ ದಂಡ ವಿಧಿಸಿತ್ತು.

Vijaya Karnataka Web jayalalithaa case karnataka seeks rs 100 crore fine
ಜಯಾ ಕೇಸ್‌: ನೂರು ಕೋಟಿ ರೂ. ದಂಡ ಕೇಳಿದ ಕರ್ನಾಟಕ


ದರೆ ಪ್ರಮುಖ ಆರೋಪಿ ಜಯಾ ಅವರು ನಿಧನರಾದ ಹಿನ್ನೆಲೆಯಲ್ಲಿ ಅವರ ವಿರುದ್ಧದ ವಿಚಾರಣೆಯನ್ನು ಕೈಬಿಟ್ಟಿತ್ತು. ಇದೇ ವೇಳೆ ಅವರ ವಿರುದ್ಧ ಕರ್ನಾಟದ ವಿಚಾರಣಾ ನ್ಯಾಯಾಲಯವು ವಿಧಿಸಿದ್ದ 100 ಕೋಟಿ ರೂ.ದಂಡ ವಸೂಲಿ ಮಾಡಬಹುದಾಗಿದೆ ಎಂದು ತೀರ್ಪಿನಲ್ಲಿ ಹೇಳಿತ್ತು. ಆದರೆ ಸ್ಪಷ್ಟ ನಿರ್ದೇಶನಗಳನ್ನು ನೀಡಿರಲಿಲ್ಲ. ಹೀಗಾಗಿ ಕರ್ನಾಟಕ ಸರಕಾರವು ಈ ದಂಡ ವಸೂಲಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ