ಆ್ಯಪ್ನಗರ

ಜೀವ ಹೋದರೂ ಪರವಾಗಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ, ಎಚ್‌ಡಿಕೆ ಎಚ್ಚರಿಕೆ

ನನ್ನ ಜೀವ ಹೋದರೂ ಪರವಾಗಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತೇನೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು ಹೇಳಿದ್ದಿಷ್ಟು.

Vijaya Karnataka Web 10 Oct 2020, 1:08 pm
ಬೆಂಗಳೂರು: ಕೊರೊನಾ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ವಿದ್ಯಾಗಮ ಶಿಕ್ಷಣದ ಹೆಸರಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ? ಸರ್ಕಾರಕ್ಕೆ ಕನಿಷ್ಠ ಪರಿಜ್ಞಾನ ಬೇಡವೇ? ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
Vijaya Karnataka Web Kumaraswamy


ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಅವರು, ಮಕ್ಕಳು ಮತ್ತು ಶಿಕ್ಷಕರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯಸರ್ಕಾರ ಸೋಮವಾರದೊಳಗೆ ವಿದ್ಯಾಗಮನ ಶಿಕ್ಷಣದ ಯಡವಟ್ಟನ್ನು ನಿಲ್ಲಿಸದಿದ್ದರೆ ವಿಧಾನಸೌಧ ಇಲ್ಲವೇ ಸ್ವಾತಂತ್ರ್ಯ ಉದ್ಯಾನದ ಬಳಿ ಅಹೋರಾತ್ರಿ ಧರಣಿ ಕೂರುವುದಾಗಿ ಈ ಮೂಲಕ ಎಚ್ಚರಿಕೆ ನೀಡಿದ್ದಾರೆ.

ವಿದ್ಯಾಗಮ ನೆಪದಲ್ಲಿ ಮಕ್ಕಳ, ಶಿಕ್ಷಕರ ಜೀವಕ್ಕೆ ಸಂಚಕಾರ! ರಾಜ್ಯ ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಕ್ಷ ಕಿಡಿ


ವೇತನ ಹಾಗೂ ಸೌಲಭ್ಯಗಳ ಕಡಿತದ ಬೆದರಿಕೆ ಒಡ್ಡಿ ಸಾವಿನ ದವಡೆಗೆ ನೂಕಿದ ಶಿಕ್ಷಕರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಆ ಕುಟುಂಬದ ಅರ್ಹ ಸದಸ್ಯರಿಗೆ ಉದ್ಯೋಗ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಕ್ಕಳಿಗೆ ಶಿಕ್ಷಣಕೊಡುವ ಸೋಗಿನಲ್ಲಿ ಶಿಕ್ಷಣ ಸಚಿವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆಗಳನ್ನು ನೀಡುತ್ತಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೀವಕ್ಕೆ ಕುತ್ತು ತರುತ್ತಿರುವುದು ಖಂಡನೀಯ ಹಾಗೂ ಅಮಾನವೀಯ. ಈ ವರ್ಷ ಶಾಲೆ ಆರಂಭಿಸದಿದ್ದರೆ ದೇಶ ಮುಳುಗಿ ಹೋದೀತೆ? ಇಂತಹದೊಂದು ಹುಚ್ಚಾಟ ಸರ್ಕಾರಕ್ಕೆ ಬೇಕೆ? ಇದೊಂದು ನಾಗರಿಕ ಸರ್ಕಾರವೇ? ಎಂದು ಪ್ರಶ್ನಿಸಿದ್ದಾರೆ.


ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರ್ಕಾರ ಕನಿಷ್ಠ ಆಕ್ಸಿಜನ್ ಒದಗಿಸಲು ಪರದಾಡುತ್ತಿದೆ. ಜನಪ್ರತಿನಿಧಿ ಇರಲಿ, ಸಾಮಾನ್ಯ ಪ್ರಜೆ ಇರಲಿ , ಜೀವ ರಕ್ಷಣೆ ಮಾಡಬೇಕಾದ್ದು ಸರ್ಕಾರದ ಮೊದಲ ಆದ್ಯತೆ ಮತ್ತು ಕರ್ತವ್ಯ. ಜೀವ ಉಳಿದರೆ ತಾನೇ ಬದುಕು? ನನ್ನ ಜೀವ ಹೋದರೂ ಪರವಾಗಿಲ್ಲ. ಮಂಗಳವಾರದಿಂದ ಸರ್ಕಾರದ ಅನಾಗರಿಕ, ನಿರ್ಲಜ್ಜ ನೀತಿ, ನಿರ್ಧಾರದ ವಿರುದ್ಧ ಅಹೋರಾತ್ರಿ ಧರಣಿ ಆರಂಭಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ