ಆ್ಯಪ್ನಗರ

ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿ ಕಾಫಿ ಬೆಳೆಗಾರರು, ಸಾಲ ಮನ್ನಾ ಮಾಡುವಂತೆ ಕೇಂದ್ರಕ್ಕೆ ದೇವೇಗೌಡ ಪತ್ರ

ಕೊರೊನಾ ಲಾಕ್‌ಡೌನ್ ಪರಿಣಾಮ ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದು ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೆಳೆಗಾರರು ಮಾಡಿದ ಬ್ಯಾಂಕ್‌ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕಾಫಿ ಬೆಳೆಗಾರರು ಚೇತರಿಕೆ ಕಂಡುಕೊಳ್ಳಲು ಇದೊಂದೇ ದಾರಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Vijaya Karnataka Web 1 May 2020, 4:08 pm
ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ಕಾಫಿ ಹಾಗೂ ಕರಿಮೆಣಸು ಬೆಳೆಗಾರರು ಸಂಕಷ್ಟದಲ್ಲಿದ್ದು ಬ್ಯಾಂಕ್‌ ಹಾಗೂ ಇತರ ಹಣಕಾಸು ಸಂಸ್ಥೆಗಳಲ್ಲಿ ಮಾಡಿರುವ ಸಾಲ ಮನ್ನಾ ಮಾಡುವಂತೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಪಿಯೂಷ್ ಗೋಯಲ್‌ ಅವರಿಗೆ ಪತ್ರ ಬರೆಯುವ ಮೂಲಕ ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವಂತೆ ಒತ್ತಾಯಿಸಿದ್ದಾರೆ.
Vijaya Karnataka Web hd devegwoda


ಕೊರೊನಾ ಕಾರಣದಿಂದಾಗಿ ಜಾಗತಿಕವಾಗಿ ಕಾಫಿ ಹಾಗೂ ಕರಿಮೆಣಸು ಬೆಲೆ ಇಳಿಕೆಯಾಗಿದೆ. ಬೆಳೆಗಾರರು ಇದರಿಂದ ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಬೆಳೆ ಸಾಲವನ್ನು ತೀರಿಸಲು ಸಾಧ್ಯವಾಗುತ್ತಿಲ್ಲ.ಕಳೆದ ಎರಡು ವರ್ಷಗಳಿಂದ ಮಳೆ ಹಾನಿಯಿಂದಾಗಿ ಕಾಫಿ ಬೆಳೆಗಾರರು ಈಗಾಗಲೇ ತೊಂದರೆಯಲ್ಲಿದ್ದಾರೆ. ಮಳೆ, ಪ್ರವಾಹಕ್ಕೆ ತುತ್ತಾಗಿ ಬೆಳೆ, ಜಮೀನು ನಾಶವಾಗಿದೆ. ಇದೀಗ ಕೊರೊನಾ ಸೋಂಕು ಲಾಕ್‌ಡೌನ್ ಪರಿಣಾಮ ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತೆರವಿನತ್ತ ಲಾಕ್‌ಡೌನ್‌: ಹೇಗಿದೆ ಜನಸಾಮಾನ್ಯರ ಓಡಾಟದ ಸ್ಥಿತಿಗತಿ? ಫೋಟೊಗಳಲ್ಲಿ ನೋಡಿ!


ಲಾಕ್‌ಡೌನ್‌ ಮುಂದುವರಿದರೆ ನಿರುದ್ಯೋಗ ಸಮಸ್ಯೆ, ಸಿದ್ದರಾಮಯ್ಯ ಎಚ್ಚರಿಕೆ


ಕಾಫಿ ಬೆಳೆ ಶೇ 80 ಹೊರ ದೇಶಗಳಿಗೆ ರಫ್ತಾಗುತ್ತಿತ್ತು. ಆದರೆ ಕೊರೊನಾ ಕಾರಣದಿಂದಾಗಿ ಇದು ಸಾಧ್ಯವಾಗುತ್ತಿಲ್ಲ. ಕರಿಮೆಣಸು ಕಳೆದ ಮೂರು ವರ್ಷಗಳ ಹಿಂದೆ ಒಂದು ಕೆಜಿಗೆ 700 ರೂಪಾಯಿ ಇತ್ತು. ಆದರೆ ಇದೀಗ 300 ಕ್ಕೆ ಇಳಿಕೆಯಾಗಿದೆ. ಪರಿಣಾಮ ಹಾಸನ, ಚಿಕ್ಕಮಗಳೂರು ಭಾಗಗಳಲ್ಲಿ ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಈ ನಿಟ್ಟಿನಲ್ಲಿಕಾಫಿ ಬೆಳೆಗಾರರು ಬ್ಯಾಂಕ್‌ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಮಾಡಿದ ಸಾಲವನ್ನು ಮನ್ನಾ ಮಾಡಬೇಕು, ಕಾಫಿ ಬೆಳೆಗಾರರು ಚೇತರಿಸಿಕೊಳ್ಳಲು ಇದೊಂದೇ ದಾರಿ ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ