ಆ್ಯಪ್ನಗರ

ಪರಿಹಾರ ಸಾಮಗ್ರಿಗಳ ಕಿಟ್ ಮೇಲೆ ಶಾಸಕರ ಫೋಟೋ, ಕಿಡಿಕಾರಿದ ಎಚ್‌ಡಿಕೆ

ಕರ್ನಾಟಕ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಜನರಿಗೆ ನೀಡುತ್ತಿರುವ ಪರಿಹಾರದ ಕಿಟ್‌ನಲ್ಲಿ ಶಾಸಕ ಅರವಿಂದ್ ಲಿಂಬಾವಳಿ ಫೋಟೋ ಹಾಕಿದ್ದಕ್ಕಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Vijaya Karnataka Web 9 Apr 2020, 5:28 pm
ಬೆಂಗಳೂರು: ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಡ ಜನರಿಗೆ ವಿತರಣೆ ಮಾಡುತ್ತಿರುವ ಪರಿಹಾರ ಸಾಮಗ್ರಿಗಳ ಕಿಟ್‌ ಮೇಲೆ ಶಾಸಕ ಅರವಿಂದ್‌ ಲಿಂಬಾವಳಿ ಫೋಟೋ ಹಾಕಿದ್ದಕ್ಕಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
Vijaya Karnataka Web hdk tweet


ಸರಣಿ ಟ್ವೀಟ್‌ಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ ಎಂದಿದ್ದಾರೆ.

ಜನಸಾಮಾನ್ಯರ ವರ್ತನೆ ಮೇಲೆ ನಿಂತಿದೆ ಲಾಕ್‌ಡೌನ್: ಗೃಹ ಸಚಿವ ಬೊಮ್ಮಾಯಿ

“ಇದೇನು ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ ವೈಯಕ್ತಿಕ ದಾನವೋ? ಅಥವಾ ಲಜ್ಜೆಗೇಡಿ ರಾಜಕಾರಣವೋ? ಪ್ರಧಾನಿ ಮೋದಿ ಮತ್ತು ಯಡಿಯೂರಪ್ಪ ಉತ್ತರ ಹೇಳುವರೇ?” ಎಂದು ಪ್ರಶ್ನಿಸಿದ್ದಾರೆ.


ರಾಮನಗರದ ಎಲ್ಪಿಜಿ ಸಿಲಿಂಡರ್‌ ಘಟಕದಲ್ಲಿಲ್ಲ ಕೊರೊನಾ ಮುನ್ನೆಚ್ಚರಿಕೆ, 90 ಲಕ್ಷ ಕುಟುಂಬಗಳಿಗೆ ಭೀತಿ!

ಒಂದು ಸಮುದಾಯವನ್ನು ಕೊರೋನ ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ