ಆ್ಯಪ್ನಗರ

ಗೋಕರ್ಣ: ಸರಕಾರದ ವಿರುದ್ಧ ನ್ಯಾಯಾಂಗ ನಿಂದನೆ ದೂರು

ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಆಡಳಿತ ನಿರ್ವಹಣೆಯನ್ನು ರಾಜ್ಯ ಸರಕಾರ ಪಡೆದಿರುವುದರ ವಿರುದ್ಧ ಶ್ರೀ ರಾಮಚಂದ್ರಾಪುರ ಮಠವು ಸುಪ್ರಿಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

Vijaya Karnataka 21 Sep 2018, 7:57 am
ಬೆಂಗಳೂರು: ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಆಡಳಿತ ನಿರ್ವಹಣೆಯನ್ನು ರಾಜ್ಯ ಸರಕಾರ ಪಡೆದಿರುವುದರ ವಿರುದ್ಧ ಶ್ರೀ ರಾಮಚಂದ್ರಾಪುರ ಮಠವು ಸುಪ್ರಿಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.
Vijaya Karnataka Web gokarna


ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಸುಪ್ರಿಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಸೆ.7ರಂದು ವಿಚಾರಣೆ ನಡೆಸಿದ್ದ ಸುಪ್ರಿಂಕೋರ್ಟ್‌ ದೇವಾಲಯದ ಆಡಳಿತವನ್ನು ಮಠಕ್ಕೆ ನೀಡಿ ಮುಂದುವರಿಸುವಂತೆ ಮಧ್ಯಾಂತರ ಆದೇಶ ನೀಡಿತ್ತು. ಆದರೆ ರಾಜ್ಯ ಸರಕಾರವು ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ದೇವಾಲಯದ ಆಡಳಿತವನ್ನು ಮಠದಿಂದ ಕಿತ್ತುಕೊಂಡಿದೆ. ಶ್ರೀಮಠದ ಆಡಳಿತವು ಒಂದು ತಿಂಗಳು ಮುಂದುವರಿಯುವಂತೆ ಹೈಕೋರ್ಟ್‌ ನೀಡಿದ ಆದೇಶವನ್ನೇ ಮುಂದುವರಿಸಿ ಎಂದು ಸುಪ್ರಿಂ ಕೋರ್ಟ್‌ ಸೂಚನೆ ನೀಡಿದೆ. ಆದರೆ ರಾಜ್ಯ ಸರಕಾರ ಕಾನೂನು ಬಾಹಿರವಾಗಿ ದೇವಾಲಯದ ಆಡಳಿತವನ್ನು ಪಡೆದಿರುವುದು ಸರಿಯಲ್ಲ ಎಂದು ಮಠ ಖಂಡಿಸಿದೆ. ಇದರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ಮಠ ತಿಳಿಸಿದೆ.

ಸರಕಾರದ ಈ ಕೃತ್ಯವು ನ್ಯಾಯಾಂಗಕ್ಕೆ ಮಾಡುತ್ತಿರುವ ಅಪಚಾರವಾಗಿದೆ. ಸುಪ್ರಿಂ ಕೋರ್ಟ್‌ನ ಆದೇಶವನ್ನೇ ಸರಕಾರ ಉಲ್ಲಂಘಿಸಿದರೆ ನ್ಯಾಯವನ್ನು ಎಲ್ಲಿ ಹುಡುಕುವುದು ಎಂದು ಮಠವು ಪ್ರಶ್ನಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ