ಆ್ಯಪ್ನಗರ

ಮಹಿಷಿ ವರದಿ ಜಾರಿಗೆ ಕರ್ನಾಟಕ ಬಂದ್, ಸಿಎಂ ನಿವಾಸಕ್ಕೆ ಆಗಮಿಸಿದ ಕನ್ನಡ ಪರ ಸಂಘಟನೆಗಳು

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ರಾಜ್ಯ ಬಂದ್ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಕೆಲ ಸಂಘಟನೆಗಳು ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಸಿಎಂ ನಿವಾಸಕ್ಕೆ ಆಗಮಿಸಿದ್ದಾರೆ.

Vijaya Karnataka Web 13 Feb 2020, 10:53 am
ಬೆಂಗಳೂರು: ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ ನಡೆಸುತ್ತಿರುವ ಬೆನ್ನಲ್ಲೆ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾದ ಮುಖಂಡರು ಮನವಿ ಪತ್ರವನ್ನು ಸಲ್ಲಿಸಿದ್ದಾರೆ.
Vijaya Karnataka Web karanataka bandh kannada organizations came to meet chief minister bs yeddyurappa
ಮಹಿಷಿ ವರದಿ ಜಾರಿಗೆ ಕರ್ನಾಟಕ ಬಂದ್, ಸಿಎಂ ನಿವಾಸಕ್ಕೆ ಆಗಮಿಸಿದ ಕನ್ನಡ ಪರ ಸಂಘಟನೆಗಳು


ಬೆಂಗಳೂರಿನ ಡಾಲರ್ಸ್‌ ಕಾಲೋನಿ ನಿವಾಸದಲ್ಲಿರುವ ಸಿಎಂ ನಿವಾಸಕ್ಕೆ ಕನ್ನಡ ಪರ ಸಂಘಟನೆಗಳ ಮುಖಂಡರು ಆಗಮಿಸಿದ್ದರು. ಸರೋಜಿನಿ ಮಹಿಷಿ ವರದಿ ಜಾರಿ ಹಾಗೂ ಬಂದ್‌ ಕುರಿತಾಗಿ ಸಿಎಂ ಜೊತೆಗೆ ಸಂಘಟನೆಗಳ ಮುಖಂಡರು ಸಿಎಂಗೆ ಮನವಿ ಪತ್ರವನ್ನು ನೀಡಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ಕರ್ನಾಟಕ ಬಂದ್ : ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಜನವೋ ಜನ !

ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ನೀಡಬೇಕು ಎಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ ನಡೆಸುತ್ತಿವೆ. ರಾಜ್ಯದಾದ್ಯಂತ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಂದ್‌ ಕರೆ ಹಿನ್ನೆಲೆಯಲ್ಲಿ ಬುಧವಾರ ಸಿಎಂ ಬಿ.ಎಸ್ ಯಡಿಯೂರಪ್ಪ ಕನ್ನಡ ಪರ ಸಂಘಟನೆಗಳಿಗೆ ಮಾತುಕತೆಗೆ ಆಹ್ವಾನಿಸಿದ್ದರು. ಬಂದ್ ಕೈ ಬಿಟ್ಟು ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಾತುಕತೆಗೆ ಬನ್ನಿ ಎಂದು ಮನವಿ ಮಾಡಿದ್ದರು. ಹೀಗಿದ್ದರೂ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ ನಡೆಸುತ್ತಿವೆ.

ಬಂದ್ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತೆಯನ್ನು ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಕೈಗೊಳ್ಳಲಾಗಿದೆ. ಮುಂಜಾಗರೂಕತಾ ಕ್ರಮವಾಗಿ ಈಗಾಗಲೇ ಕೆಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ