ಆ್ಯಪ್ನಗರ

ಲೋಕ್‌ ಅದಾಲತ್‌ನಲ್ಲಿ 25 ಸಾವಿರ ಪ್ರಕರಣ ಇತ್ಯರ್ಥ: ರಾಜಿ ಮೊತ್ತ 327 ಕೋಟಿ

ರಾಜ್ಯಾದ್ಯಂತ ಶನಿವಾರ ನಡೆದ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ಸುಮಾರು 25,791 ಪ್ರಕರಣಗಳು ಇತ್ಯರ್ಥವಾಗಿವೆ ಅವುಗಳಲ್ಲಿ ಒಟ್ಟು ರಾಜಿ ಮೊತ್ತ 327...

Vijaya Karnataka 9 Dec 2018, 5:00 am
ಬೆಂಗಳೂರು: ರಾಜ್ಯಾದ್ಯಂತ ಶನಿವಾರ ನಡೆದ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ಸುಮಾರು 25,791 ಪ್ರಕರಣಗಳು ಇತ್ಯರ್ಥವಾಗಿವೆ. ಅವುಗಳಲ್ಲಿ ಒಟ್ಟು ರಾಜಿ ಮೊತ್ತ 327.04 ಕೋಟಿಯಾಗಿದೆ.
Vijaya Karnataka Web haamer


ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಸಿವಿಲ್‌ ಹಾಗೂ ಕ್ರಿಮಿನಲ್‌ ಕೇಸುಗಳಿಗೆ ಸಂಬಂಧಿಸಿದಂತೆ ನಡೆಸಿದ ಅದಾಲತ್‌ನಲ್ಲಿ ಆರಂಭಿಕ ಮಾಹಿತಿಯಂತೆ ನ್ಯಾಯಾಲಯದಲ್ಲಿ ಬಾಕಿ ಇದ್ದ 22,127 ಹಾಗೂ ವ್ಯಾಜ್ಯ ಪೂರ್ವ 3,664 ಪ್ರಕರಣಗಳು ವಿಲೇವಾರಿಯಾಗಿವೆ. ಇದರಿಂದಾಗಿ ನ್ಯಾಯಾಲಯಗಳ ಮೇಲಿನ ಪ್ರಕರಣಗಳ ಹೊರೆ ಗಣನೀಯವಾಗಿ ತಗ್ಗಿದೆ ಎಂದು ಪ್ರಾಧಿಕಾರದ ಸದಸ್ಯ ಕಾರ‍್ಯದರ್ಶಿ ಹಂಚಾಟೆ ಸಂಜೀವ್‌ ಕುಮಾರ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ