ಆ್ಯಪ್ನಗರ

ಅಕ್ಟೋಬರ್ 10 ಕ್ಕೆ ಅಧಿವೇಶನ: ವಿಪಕ್ಷಗಳ ತಂತ್ರಕ್ಕೆ ಆಡಳಿತ ಪಕ್ಷದ ಪ್ರತಿತಂತ್ರ!

ಅಕ್ಟೋಬರ್ 10 ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ಅಧಿವೇಶನದ ನಡೆಯಲಿದ್ದು ಆಡಳಿತ ಪಕ್ಷದ ವಿರುದ್ಧ ಹೋರಾಟ ನಡೆಸಲು ಪ್ರತಿಪಕ್ಷಗಳು ತಂತ್ರಗಾರಿಕೆ ನಡೆಸುತ್ತಿವೆ. ಅಕ್ಟೋಬರ್ 10,11 ಹಾಗೂ 12 ರಂದು ಅಧಿವೇಶನ ನಡೆಯಲಿದೆ.

Vijaya Karnataka Web 8 Oct 2019, 4:40 pm
ಬೆಂಗಳೂರು: ಅಕ್ಟೋಬರ್ 10 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ತಯಾರಿ ನಡೆಸುತ್ತಿವೆ. ಬೆಳಗಾವಿಯಲ್ಲಿ ನಿಗದಿಯಾಗಿದ್ದ ಚಳಿಗಾಲದ ಅಧಿವೇಶನ ಪ್ರವಾಹ ಕಾರಣಕ್ಕಾಗಿ ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆಯಲಿದೆ.
Vijaya Karnataka Web karnataka policits


ಪ್ರವಾಹ ಪರಿಹಾರ ವಿಳಂಬ, ಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರಕಾರದ ವೈಫಲ್ಯ ಹಾಗೂ ಸರಕಾರದ ಬೊಕ್ಕಸ ಖಾಲಿ ವಿಚಾರವನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಅವರನ್ನು ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕಿಸುವ ತಂತ್ರವನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಹೂಡುತ್ತಿವೆ.

ಸಿದ್ದರಾಮಯ್ಯಗೆ ಪ್ರತಿಪಕ್ಷ ನಾಯಕ ಸ್ಥಾನ ಫಿಕ್ಸ್ ! ಇನ್ನೆರಡು ದಿನಗಳಲ್ಲಿ ಘೋಷಣೆ

ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಅಕ್ಟೋಬರ್ 9 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಸಿದ್ದರಾಮಯ್ಯ ಅವರು ಕರೆದಿದ್ದು ಶಾಸಕರು ಕಡ್ಡಾಯ ಹಾಜರಾಗುವಂತೆ ಸೂಚಿಸಲಾಗಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಗಿರುವ ಹಾನಿ ಹಾಗೂ ರಾಜ್ಯ ಸರಕಾರ ಕೈಗೊಂಡಿರುವ ಪರಿಹಾರ ಕ್ರಮಗಳು, ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಅನುದಾನ ಕಡಿತ ವಿಚಾರವಾಗಿ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಯಲಿದೆ. ಇದೇ ವಿಚಾರಗಳನ್ನು ಮುಂದಿಟ್ಟುಕೊಂಡು ಅಧಿವೇಶನದಲ್ಲಿ ಅಡಳಿತ ಪಕ್ಷದ ವಿರುದ್ಧ ಹೋರಾಟ ರೂಪಿಸುವ ಕಾರ್ಯತಂತ್ರವನ್ನು ಕಾಂಗ್ರೆಸ್ ರೂಪಿಸಿದೆ.

ಯಾರಿಗೆ ಒಲಿಯುತ್ತೆ ಪ್ರತಿಪಕ್ಷ ನಾಯಕ ಪಟ್ಟ ?-'ಕೈ' ಪಾಳಯದಲ್ಲಿ ಅಭಿಪ್ರಾಯ ಸಂಗ್ರಹ

ಅಧಿವೇಶ ಆರಂಭದ ದಿನದಂದು ಜೆಡಿಎಸ್ ಕೂಡಾ ಸರಕಾರದ ವಿರದ್ಧ ಹೋರಾಟವನ್ನು ಹಮ್ಮಿಕೊಂಡಿದ್ದು, ಪ್ರವಾಹ ಪರಿಹಾರ ನಿರ್ಲಕ್ಷ, ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತ ವಿರೋಧಿಸಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನೇತೃತ್ವದಲ್ಲಿ ಮೌರ್ಯ ಸರ್ಕಲ್‌ ಗಾಂಧಿ ಪ್ರತಿಮೆಯಿಂದ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.

ಅಧಿವೇಶನದಲ್ಲಿ ಪ್ರತಿಪಕ್ಷಗಳ ತಂತ್ರಗಾರಿಕೆಗೆ ಆಡಳಿತ ಪಕ್ಷ ಪ್ರತಿತಂತ್ರ ಹೆಣೆದಿದೆ. ಪ್ರತಿಪಕ್ಷಗಳ ಪ್ರಶ್ನೆಗಳಿಗೆ ತಕ್ಕ ಉತ್ತರ ನೀಡಲು ದಾಖಲೆಗಳ ಜೊತೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಜ್ಜಾಗುತ್ತಿದ್ದಾರೆ.

ಬುಧವಾರ ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಟಾದಲ್ಲಿ ಅಧಿಕಾರಿಗಳು ಹಾಗೂ ಸಚಿವರ ಸಭೆಯನ್ನು ಸಿಎಂ ಬಿಎಸ್‌ವೈ ಕರೆದಿದ್ದಾರೆ.ಪ್ರವಾಹ ಪರಿಹಾರ ಕಾರ್ಯಗಳು, ಇಲಾಖಾವಾರು ಪ್ರಗತಿ, ತೆರಿಗೆ ಸಂಗ್ರಹದ ಕುರಿತಾಗಿ ಸಂಪೂರ್ಣ ಅಂಕಿ ಅಂಶಗಳನ್ನು ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ