ಆ್ಯಪ್ನಗರ

“ಮುಂಬೈ ನೋಟು ಕೈಗೆ ಓಟು” - ಸಿದ್ದು ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಹಿರೇಕೆರೂರು ಚುನಾವಣಾ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

Vijaya Karnataka Web 28 Nov 2019, 6:51 pm
ಬೆಂಗಳೂರು: ಚುನಾವಣಾ ಪ್ರಚಾರ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಬೆಂಗಳೂರಿನಲ್ಲಿ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ ಶಾಸಕ ರವಿಸುಬ್ರಹ್ಮಣ್ಯ ,ದತ್ತಗುರು ಹೆಗಡೆ ಮತ್ತು ಎ .ಎಚ್. ಆನಂದ್ ಒಳಗೊಂಡ ಬಿಜೆಪಿ ನಿಯೋಗ ದೂರು ನೀಡಿದೆ.
Vijaya Karnataka Web karnataka bjp filed compliant against siddaramaiah in election commission
“ಮುಂಬೈ ನೋಟು ಕೈಗೆ ಓಟು” - ಸಿದ್ದು ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು


ಹಿರೇಕೆರೂರಿನಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಬನ್ನಿಕೋಡು ಪರವಾಗಿ ಚುನಾವಣಾ ಪ್ರಚಾರ ಸಮಾವೇಶ ಹಾಗೂ ರೋಡ್ ಶೋ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಭ್ಯರ್ಥಿ ಬಿಸಿ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಅನರ್ಹ ನಾರಾಯಣಗೌಡರಿಗೆ ನಿದ್ರೆ ಬರ್ತಿಲ್ವಂತೆ..! ಕೊಡಬಾರದ ಕಷ್ಟ ಕೊಟ್ರೂ ಎದ್ದು ಬಂದೆ ಅಂದ್ರು ಡಿಕೆಶಿ!

ಭಾಷ‍ಣದ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಬಿಸಿ ಪಾಟೀಲ್ ಅವರಿಂದ ನೋಟು ಪಡೆದುಕೊಳ್ಳಿ ಕಾಂಗ್ರೆಸ್ ಅಭ್ಯರ್ಥಿ ಬನ್ನಿಕೋಡ್‌ ಅವರಿಗೆ ಓಟ್ ಹಾಕಿ ಎಂದಿದ್ದರು. ಮುಂಬೈ ನೋಟು ಕೈಗೆ ಓಟ್ ಎಂದು ಹೇಳುವ ಮೂಲಕ ಮತದಾರರಿಗೆ ಹಣದ ಅಮಿಷ ಒಡ್ಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಹಿರೇಕೆರೂರಿನಲ್ಲಿ ಬಿಜೆಪಿ ಅಬ್ಬರ ; ಬಿಸಿ ಪಾಟೀಲ್ ಪರವಾಗಿ ಸಿಎಂ ರೋಡ್ ಶೋ

ಇದು ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘಣೆಯಾಗಿದ್ದು ಸಿದ್ದರಾಮಯ್ಯ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ. ಜವಾಬ್ದಾರಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರಿಗೆ ಚುನಾವಣೆ ಮುಗಿಯುವ ವರೆಗೂ ಸಾರ್ವಜನಿಕ ಚುನಾವಣಾ ಭಾಷಣ ಮಾಡದಂತೆ ನಿರ್ಬಂಧ ಹೇರಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ