ಆ್ಯಪ್ನಗರ

ಬಿಜೆಪಿ ಸರ್ಕಾರದ ಉಸ್ತುವಾರಿಯಲ್ಲಿ ಕೈ ಶಾಸಕರ ಅಕ್ರಮ ಬಂಧನ, ಸಿದ್ದರಾಮಯ್ಯ ಆರೋಪ

ರಾಜ್ಯ ಬಿಜೆಪಿ ಸರ್ಕಾರದ ಉಸ್ತುವಾರಿಯಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ರೆಸಾರ್ಟ್‌ನಲ್ಲಿ ಅಕ್ರಮ ಬಂಧನದಲ್ಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

Vijaya Karnataka 18 Mar 2020, 3:26 pm
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಉಸ್ತುವಾರಿಯಲ್ಲಿ 22 ಕಾಂಗ್ರೆಶ್ ಶಾಸಕರನ್ನು ಅಕ್ರಮ ಬಂಧನದಲ್ಲಿ ಇಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಸರಣಿ ಟ್ವೀಟ್‌ಗಳ ಮೂಲಕ ಬಿಜೆಪಿಯನ್ನು ತರಾಟಗೆಗೆ ತೆಗೆದುಕೊಂಡ ಅವರು ಇದೇನು ಪೊಲೀಸ್ ರಾಜ್ಯವೇ ಎಂದು ಪ್ರಶ್ನಿಸಿದರು.
Vijaya Karnataka Web siddu and bsy


“ ನಗರದಲ್ಲಿ ಅಕ್ರಮ ಬಂಧನದಲ್ಲಿರುವ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರ ಭೇಟಿಗೆ ಹೋಗಿರುವ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಮತ್ತು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಪೊಲೀಸರು ತಡೆದಿದ್ದಾರೆ, ನಮ್ಮ ಕಾರ್ಯಕರ್ತರನ್ನು ಬಂಧಿಸಿದ್ದಾರೆ.ಇದೇನು ಪೊಲೀಸ್ ರಾಜ್ಯವೇ? ರಾಜ್ಯ ಬಿಜೆಪಿ ಸರ್ಕಾರದ ಉಸ್ತುವಾರಿಯಲ್ಲಿಯೇ ಬೆಂಗಳೂರಿನಲ್ಲಿ ಮಧ್ಯಪ್ರದೇಶದ 22 ಕಾಂಗ್ರೆಸ್ ಶಾಸಕರನ್ನು ಅಕ್ರಮ ಬಂಧನದಲ್ಲಿರಿಸಲಾಗಿದೆ” ಎಂದು ಕಿಡಿಕಾರಿದರು.


ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು, ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ದಿಗ್ವಿಜಯ್ ಸಿಂಗ್

“ ಬೆಂಗಳೂರು ಪೊಲೀಸರು ರಾಜ್ಯ ಸರ್ಕಾರದ ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ. ಹಾಡಹಗಲೇ ಪ್ರಜಾಪ್ರಭುತ್ವದ ಕೊಲೆಯಾಗುತ್ತಿದೆ. ಅಕ್ರಮ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕರು ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಬಯಸಿದ್ದಾರೆ. ಆದರೆ ಪೊಲೀಸರು ಶಾಸಕರ ಪೋನ್ ಕಿತ್ತುಕೊಂಡಿದ್ದಾರೆ. ಶಾಸಕರ ಭೇಟಿಗೆ ಅವರ ತಂದೆ-ತಾಯಿಗಳಿಗೂ ಅವಕಾಶ ನೀಡುತ್ತಿಲ್ಲ. ಇದೇನು ಪ್ರಜಾಪ್ರಭುತ್ವವವೇ? ಸರ್ವಾಧಿಕಾರವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು ಅವರು ನಮ್ಮ ಸಹನೆಯ ಪರೀಕ್ಷೆ ಬೇಡ ಎಂದು ಎಚ್ಚರಿಸಿದ್ದಾರೆ.


ಮಧ್ಯಪ್ರದೇಶದ ಶಾಸಕರ ಭೇಟಿಗೆ ಅವಕಾಶ ನಿರಾಕರಣೆ, ಡಿಕೆಶಿಯಿಂದ ಪೊಲೀಸ್ ಆಯುಕ್ತರಿಗೆ ದೂರು

ಮಧ್ಯಪ್ರದೇಶದ 22 ಶಾಸಕರು ಬೆಂಗಳೂರಿನ ರಮಡಾ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದು ಅವರನ್ನು ಭೇಟಿ ಮಾಡಲು ಕಾಂಗ್ರೆಸ್ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಬುಧವಾರ ಬೆಂಗಳೂರಿಗೆ ಆಗಮಿಸಿದ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್‌ ಸಿಂಗ್ ಶಾಸಕರನ್ನು ಭೇಟಿ ಮಾಡಲು ಪ್ರಯತ್ನಿಸಿದರು. ಆದರೆ ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ.

ಪೊಲೀಸರ ನಡೆಯನ್ನು ಖಂಡಿಸಿ ಕಾಂಗ್ರೆಸ್ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದೆ. ಮತ್ತೊಂದೆಡೆ ಶಾಸಕರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಬೇಕು ಎಂದು ದಿಗ್ವಿಜಯ್ ಸಿಂಗ್ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ