ಆ್ಯಪ್ನಗರ

ಆಡಳಿತ ಪಕ್ಷದಲ್ಲಿ 100, ವಿರೋಧ ಪಕ್ಷದಲ್ಲಿ 107 ಶಾಸಕರು: ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಶಾಸಕ ಸುರೇಶ್‌ ಕುಮಾರ್ ವ್ಯಂಗ್ಯ

ರಾಜ್ಯದ ಸಮ್ಮಿಶ್ರ ಸರಕಾರ ಬಹುಮತ ಕಳೆದುಕೊಂಡಿರುವ ಬಗ್ಗೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುರೇಶ್‌ ಕುಮಾರ್ ಸಹ ಫೇಸ್‌ಬುಕ್‌, ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಸರಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

Vijaya Karnataka Web 20 Jul 2019, 11:23 am
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಸ್ಥಿರತೆ ಮುಂದುವರಿದಿದ್ದು, ಹಲವು ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಬಳಿಕ ಸಮ್ಮಿಶ್ರ ಸರಕಾರ ಬಹುಮತ ಕಳೆದುಕೊಂಡಿದೆ ಎಂದೇ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಿದ್ದರೂ ಆಡಳಿತ ನಡೆಸುತ್ತಿರುವುದಕ್ಕೆ ಹಲವರಿಂದ ಆಕ್ಷೇಪ, ವಿರೋಧ ವ್ಯಕ್ತವಾಗುತ್ತಿದೆ. ಈ ಸಂಬಂಧ ಬಿಜೆಪಿ ಶಾಸಕ ಸುರೇಶ್‌ ಕುಮಾರ್ ಸಹ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಆಡಳಿತಕ್ಕಿಂತ ವಿರೋಧ ಪಕ್ಷದಲ್ಲಿ ಹೆಚ್ಚು ಶಾಸಕರಿರುವ ಬಗ್ಗೆ ಬರೆದುಕೊಂಡಿದ್ದು, ವ್ಯಂಗ್ಯವಾಡಿದ್ದಾರೆ.
Vijaya Karnataka Web suresh kumar


'ಆಡಳಿತ ಪಕ್ಷ 100 ಶಾಸಕರನ್ನು ಹೊಂದಿದೆ. ಇನ್ನು, ವಿರೋಧ ಪಕ್ಷ 107 ಶಾಸಕರನ್ನು ಹೊಂದಿದೆ. ಇದು ಇತಿಹಾಸದಲ್ಲಿ ಇದೇ ಮೊದಲು' ಎಂದು ಫೇಸ್‌ಬುಕ್‌, ಟ್ವಿಟರ್‌ನಲ್ಲಿ ಸುರೇಶ್‌ ಕುಮಾರ್ ಪೋಸ್ಟ್‌ ಮಾಡಿದ್ದಾರೆ. ಸುರೇಶ್‌ ಕುಮಾರ್‌ರ ಈ ಪೋಸ್ಟ್‌ ಅನ್ನು ಹಲವರು ಫೇಸ್‌ಬುಕ್‌ನಲ್ಲಿ ಶೇರ್‌ ಮಾಡಿಕೊಂಡಿದ್ದು, ಟ್ವಿಟರ್‌ನಲ್ಲಿ ರೀ ಟ್ವೀಟ್‌ ಮಾಡಿಕೊಂಡಿದ್ದಾರೆ. ಅಲ್ಲದೆ, ಸಾವಿರಾರು ಮಂದಿ ಲೈಕ್‌ ಕೊಟ್ಟಿದ್ದು, ನೂರಾರು ಮಂದಿ ಪ್ರತಿಕ್ರಿಯೆಗಳನ್ನೂ ನೀಡಿದ್ದಾರೆ.


ಸಿಎಂ ಕುಮಾರಸ್ವಾಮಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ನೀಡಿದ್ದ ಎರಡು ಡೆಡ್‌ಲೈನ್‌ಗಳನ್ನೂ ಸರಕಾರ ತಿರಸ್ಕರಿಸಿದೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೆ, ಸ್ಪೀಕರ್‌ ಸಮ್ಮಿಶ್ರ ಸರಕಾರದ ಪರ ಬೆಂಬಲಕ್ಕೆ ನಿಂತಿದ್ದಾರೆ. ಸರಕಾರಕ್ಕೆ ಬಹುಮತ ಇಲ್ಲದಿದ್ದರೂ ಅದರ ಪರವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ.

ಇತ್ತೀಚೆಗೆ ಬಿಜೆಪಿ ಮುಖಂಡ ಕೆ.ಎಸ್‌. ಈಶ್ವರಪ್ಪ, ಸಿ.ಟಿ. ರವಿ ಸೇರಿದಂತೆ ಹಲವು ನಾಯಕರು ಸ್ಪೀಕರ್‌ ವಿರುದ್ಧ ಪರೋಕ್ಷವಾಗಿ ಟ್ವೀಟ್‌ ಮಾಡಿ ತರಾಟೆಗೆ ತೆಗೆದುಕೊಂಡಿದ್ದರು.

ಶುಕ್ರವಾರ ಬಹುಮತ ಸಾಬೀತಿಗೆ ರಾಜ್ಯಪಾಲರು ಎರಡು ಬಾರಿ ಸೂಚಿಸಿದ್ದರೂ ಸಹ ಸಿಎಂ ಕುಮಾರಸ್ವಾಮಿ ಅದನ್ನು ತಿರಸ್ಕರಿಸಿದ್ದಾರೆ. ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ