ಆ್ಯಪ್ನಗರ

ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು, ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ದಾಳಿ

ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ಏನು ಹೇಳಿದೆ ಎಂಬ ವಿವರ ಇಲ್ಲಿದೆ.

Vijaya Karnataka Web 25 Oct 2020, 1:37 pm
ಬೆಂಗಳೂರು: ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು, ಹೀಗಂತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ. ಟ್ವಿಟ್ಟರ್‌ನಲ್ಲಿ ಸಿದ್ದುಗೆ ಕುಟುಕಿದ ಬಿಜೆಪಿ ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿತ್ತು ಎಂದು ಕಿಡಿಕಾರಿದೆ.
Vijaya Karnataka Web siddaramaiah


ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ನಡೆಸಿದ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.


ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದ ಸಿದ್ದರಾಮಯ್ಯ

ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ ಬಿಜೆಪಿ, ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು.ರೈತರ ಪಾಲಿಗೆ ಮರಣಕೂಪದಂತಿದ್ದ ನಿಮ್ಮ ಅವಧಿಯಲ್ಲಿ 3000 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡದ್ದು ದುರ್ದೈವ ಎಂದು ಕಿಡಿಕಾರಿದೆ.

ಅಷ್ಟೇ ಅಲ್ಲದೆ ಅನ್ನದಾತರು ಸಾವಿಗೆ ಶರಣಾಗುತ್ತಿದ್ದರೆ ನೀವು ಮಾತ್ರ ನೆಮ್ಮದಿಯಾಗಿ ನಿದ್ರಿಸುತ್ತಿದ್ದಿರಿ, ಅಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಉತ್ತರ ಕರ್ನಾಟಕ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದು ಆಕ್ರೋಶದ ಬೆನ್ನಲ್ಲೇ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ