ಆ್ಯಪ್ನಗರ

ಉಪಚುನಾವಣೆ: 'ಗೆಲ್ಲುವ ಕುದುರೆಗೆ' ಕಾಂಗ್ರೆಸ್ ಮಣೆ!

ಅಕ್ಟೋಬರ್ 21 ರಂದು ನಡೆಯಲಿರುವ 15 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಸಿದ್ದತೆ ಭರದಿಂದ ಸಾಗಿದೆ. ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

Vijaya Karnataka Web 23 Sep 2019, 5:50 pm
ಬೆಂಗಳೂರು: ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ನಿಟ್ಟಿನಲ್ಲಿ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಪ್ರಮುಖ ಮುಖಂಡರು ಭಾಗಿಯಾಗಿದ್ದಾರೆ.
Vijaya Karnataka Web congress meeting


ಅನರ್ಹಗೊಂಡ ಶಾಸಕರ ವಿಧಾನಸಭೆ ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯುಲಿದೆ. ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಲ್ಲಿ ಚುನಾವಣಾ ತಯಾರಿ ಚುರುಕುಗೊಂಡಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಿಂದ 15 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತಾಗಿ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದು ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್, ಮಾಜಿ ಸಂಸದ ವೀರಪ್ಪ ಮೊಯಿಲಿ, ರಾಮಲಿಂಗರೆಡ್ಡಿ, ಜಮೀರ್ ಅಹಮ್ಮದ್ ಖಾನ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.

ಅನರ್ಹರಿಗೆ ಸುಪ್ರೀಂನಲ್ಲಿ ಮತ್ತೆ ನಿರಾಸೆ, ಬುಧವಾರಕ್ಕೆ ವಿಚಾರಣೆ ಮುಂದೂಡಿಕೆ

ಗೋಕಾಕ್ , ಅಥಣಿ, ರಾಣೆಬೆನ್ನೂರು, ಕಾಗವಾಡ, ಹೀರೇಕೆರೂರು, ವಿಜಯಜನಗರ, ಯಲ್ಲಾಪುರ, ಚಿಕ್ಕಬಳ್ಳಾಪುರ, ಹುಣಸೂರು, ಕೆ.ಆರ್ ಪೇಟೆ, ಹೊಸಕೋಟೆ, ಕೆ.ಆರ್ ಪುರಂ, ಮಹಾಲಕ್ಷ್ಮೀ ಲೇಔಟ್, ಯಶವಂತಪುರ, ಶಿವಾಜಿನಗರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಅನರ್ಹ ಶಾಸಕರ ಈ ಕ್ಷೇತ್ರಗಳನ್ನು ಕಾಂಗ್ರೆಸ್ ಮರಳಿ ಪಡೆಯಲು ತಂತ್ರಗಾರಿಕೆ ನಡೆಸುತ್ತಿದ್ದು ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕಲು ಮುಂದಾಗಿದೆ. ಸೋಮವಾರದ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಬಹುತೇಕ ಅಂತಿಮಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಗೋಕಾಕ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಹುತೇಕ ಅಂತಿಮಗೊಂಡಿದ್ದು ಸತೀಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಚುನಾವಣಾ ಪ್ರಚಾರದಲ್ಲೂ ತೊಡಗಿಸಿಕೊಂಡಿದ್ದಾರೆ.

ಅನರ್ಹ ಶಾಸಕರು, ಬಿಜೆಪಿಗೆ ಸಂತ್ರಸ್ತರ ಶಾಪ ತಟ್ಟಲಿದೆ: ಎಂ.ಬಿ. ಪಾಟೀಲ್‌

ಉಳಿದ ಕ್ಷೇತ್ರಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು ಸೋಮವಾರದ ಸಭೆಯ ಬಳಿಕ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ. ಇನ್ನು, ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಸೆ. 30 ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ 3 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.


ಈ ನಡುವೆ ಅನರ್ಹ ಶಾಸಕರು ಸ್ಪೀಕರ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ನ್ಯಾಯಾಲಯ ಮುಂದೂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ