ಆ್ಯಪ್ನಗರ

'ಉಗ್ರವಾದಕ್ಕೆ ಭಾರತ ಕಾರಣ' ಎಂದು ಹೇಳಿಲ್ಲ, ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

ಉಗ್ರವಾದಕ್ಕೆ ಭಾರತ ಕಾರಣ ಎಂಬರ್ಥದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ ಎಂಬ ಖಾಸಗಿ ವಾಹಿನಿಯೊಂದರ ವರದಿಗೆ ಸಂಬಂಧಿಸಿ ಸ್ಪಷ್ಟನೆ ನೀಡಿದ ಎಚ್‌ಡಿಕೆ. ಭಾರತದ ಸೇನೆಯನ್ನು ಮತ್ತಷ್ಟು ಬಲ ಪಡಿಸಬೇಕು ಎಂಬ ಅಭಿಪ್ರಾಯ.

Vijaya Karnataka 20 Feb 2019, 10:35 am
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರರ ದಾಳಿಗೆ ಸಂಬಂಧಿಸಿದಂತೆ ಖಾಸಗಿ ವಾಹಿನಿಯೊಂದರಲ್ಲಿ ಪ್ರಕಟವಾದ ವರದಿಗೆ ಬಗ್ಗೆ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಟ್ವೀಟರ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
Vijaya Karnataka Web H D Kumaraswamy


ಖಾಸಗಿ ವಾಹಿನಿಯೊಂದು ಉಗ್ರವಾದಕ್ಕೆ ಭಾರತ ಕಾರಣ ಎಂಬರ್ಥದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ ಎಂದು ವರದಿ ಮಾಡಿತ್ತು. ಈ ಬಗ್ಗೆ ಸಾಮಾಜಿಕತಾಣಗಳಲ್ಲು ಭಾರಿ ಚರ್ಚೆ ನಡೆದಿತ್ತು. ಸಿಎಂ ಕುಮಾರಸ್ವಾಮಿ ಹೇಳಿಕೆಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಇದಕ್ಕೆ ಸ್ಪಷ್ಟನೆ ನೀಡಿರುವ ಸಿಎಂ ಕುಮಾರಸ್ವಾಮಿ, ರಾಷ್ಟ್ರದ ಮೇಲಿನ ಉಗ್ರರ ದಾಳಿಯಂತಹ ಗಂಭೀರ ವಿಚಾರಗಳಂತಹ ಸಂದರ್ಭದಲ್ಲಿ ನನ್ನ ಹೇಳಿಕೆಯನ್ನು ತಪ್ಪಾಗಿ ಪ್ರಕಟಿಸಿರುವುದನ್ನು ಖಂಡಿಸುತ್ತೇನೆ. ನೀವು ನನ್ನ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದು ಮಾತ್ರವಲ್ಲ, ತಪ್ಪಾಗಿ ಗ್ರಹಿಸಿದ್ದೀರಿ. ನಾನು ಈ ವಿಚಾರದಲ್ಲಿ ಭಾರತದ ವಿರುದ್ಧ ಮಾತನಾಡಿಲ್ಲ. ವೈರಿಗಳನ್ನು ನಾಶಗೊಳಿಸುವ ಜತೆಗೆ ನಮ್ಮ ದೇಶವನ್ನು ಮತ್ತಷ್ಟು ಬಲಪಡಿಸುವ ಅಗತ್ಯ ಇದೆ ಎಂದು ನನ್ನ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದೆ ಎಂದು ಟ್ವೀಟ್‌ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ