ಆ್ಯಪ್ನಗರ

1500 ಕೋಟಿ ರೂ. ಬಾಕಿ ಅನುದಾನ ಬಿಡುಗಡೆ ಮಾಡಿ: ಮೋದಿಗೆ ಕುಮಾರಸ್ವಾಮಿ

ನರೇಗಾ ಯೋಜನೆಯಲ್ಲಿ ರಾಜ್ಯ ಸರಕಾರ ಈಗಾಗಲೇ ಕೂಲಿಯ ಬಾಬ್ತು 1200 ಕೋಟಿ ರೂ. ಪಾವತಿಸಿದೆ. ಮುಂಗಡ ಹಣ ಸೇರಿ ಒಟ್ಟಾರೆ 1500 ಕೋಟಿ ರೂ. ಕೇಂದ್ರದಿಂದ ಅನುದಾನ ರಾಜ್ಯಕ್ಕೆ ಇನ್ನಷ್ಟೇ ಸಿಕ್ಕಬೇಕಿದೆ.

Vijaya Karnataka Web 15 Jun 2019, 2:07 pm
ಹೊಸದಿಲ್ಲಿ: ಮಹಾತ್ಮಾ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಕೇಂದ್ರದಿಂದ ನೀಡಬೇಕಾದ 1500 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
Vijaya Karnataka Web WhatsApp Image 2019-06-15 at 12.14.02 PM.


ನೀತಿ ಆಯೋಗದ ಸಭೆ ಸಂಬಂಧ ದಿಲ್ಲಿಗೆ ಆಗಮಿಸಿರುವ ಸಿಎಂ ಕುಮಾರಸ್ವಾಮಿ, ಪ್ರಧಾನಿ ಮೋದಿ ಅವರನ್ನು ಶನಿವಾರ ಭೇಟಿ ಮಾಡಿ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿ, ಪ್ರಧಾನಮಂತ್ರಿಯಾಗಿ ಮರು ಆಯ್ಕೆಗೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ(ನರೇಗಾ)ಯಲ್ಲಿ ರಾಜ್ಯ ಸರಕಾರ ಈಗಾಗಲೇ ಕೂಲಿಯ ಬಾಬ್ತು 1200 ಕೋಟಿ ರೂ. ಪಾವತಿಸಿದೆ. ಮುಂಗಡ ಹಣ ಸೇರಿ ಒಟ್ಟಾರೆ 1500 ಕೋಟಿ ರೂ. ಕೇಂದ್ರದಿಂದ ಅನುದಾನ ರಾಜ್ಯಕ್ಕೆ ಇನ್ನಷ್ಟೇ ಸಿಕ್ಕಬೇಕಿದೆ. ಈ ಅನುದಾನದ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಪ್ರಧಾನಿ ಮೋದಿಗೆ ಮನವಿ ಮಾಡಿದರು.

ರಾಜ್ಯದಲ್ಲಿ ಈ ಬಾರಿ ಬರದ ಛಾಯೆ ಆವರಿಸಿದ್ದು, ಶೇ.45 ರಷ್ಟು ಮಳೆ ಕೊರತೆಯಾಗಿದೆ. ಈ ಸಂಬಂಧ ಕೇಂದ್ರದಿಂದ ಅಗತ್ಯ ನೆರವು ನೀಡುವಂತೆಯೂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಸಾಲ ಮನ್ನಾ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ವಾಣಿಜ್ಯ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿನ ಒಟ್ಟು 30 ಲಕ್ಷ ರೈತರ 16 ಸಾವಿರ ಕೋಟಿ ರೂ.ಗಳು ಸಾಲಮನ್ನಾ ಸೌಲಭ್ಯಕ್ಕೆ ಅರ್ಹವೆಂದು ಗುರುತಿಸಲಾಗಿದೆ. ಈ ಪೈಕಿ ಅಗತ್ಯ ದಾಖಲೆಗಳನ್ನು ಒದಗಿಸಿದ ರಾಜ್ಯದ ವಾಣಿಜ್ಯ ಬ್ಯಾಂಕುಗಳ 9 ಲಕ್ಷ ಹಾಗೂ ಸಹಕಾರಿ ಬ್ಯಾಂಕುಗಳ 14 ಲಕ್ಷ ಫಲಾನುಭವಿಗಳ ಬೆಳೆ ಸಾಲ ಮನ್ನಾ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಒಟ್ಟು 12830 ಕೋಟಿ ರೂ. ಇದರಲ್ಲಿ ಒಳಗೊಂಡಿದೆ. ಫಲಾನುಭವಿಗಳನ್ನು ಗುರುತಿಸುವಲ್ಲಿ ಕೆಲವು ಬ್ಯಾಂಕುಗಳಿಂದ ಲೋಪವಾಗಿದ್ದರಿಂದ ವಿಳಂಬವಾಗಿತ್ತು. ಈ ಸಂಬಂಧ ಬ್ಯಾಂಕರ್‌ಗಳ ಜತೆ ಸಭೆ ನಡೆಸಿ, ಎಲ್ಲ ಗೊಂದಲ ಪರಿಹರಿಸಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ