ಆ್ಯಪ್ನಗರ

ರಾಜ್ಯದ ಹೇಡಿ ಸರಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಇಲ್ಲ - ಸಿದ್ದರಾಮಯ್ಯ ಟ್ವೀಟ್ ವಾರ್

ರಾಜ್ಯದಲ್ಲಿ ತಲೆಧೋರಿರುವ ಅತಿವೃಷ್ಟಿಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಸೂಕ್ತವಾಗಿ ಸ್ವಂದಿಸುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

Vijaya Karnataka Web 15 Sep 2019, 2:05 pm
ಬೆಂಗಳೂರು: ರಾಜ್ಯದಲ್ಲಿ ತಲೆಧೋರಿರುವ ಅತಿವೃಷ್ಟಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ. ರಾಜ್ಯದ ಹೇಡಿ ಸರಕಾರಕ್ಕೆ ಪರಿಹಾರ ನೀಡದ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಇಲ್ಲ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು ಕೇಂದ್ರ ಮತ್ತು ರಾಜ್ಯ ಸರಕಾರ ಇದ್ದೂ ಸತ್ತಂತಿವೆ ಎಂದಿದ್ದಾರೆ.
Vijaya Karnataka Web siddaramayha


ಅತಿವೃಷ್ಟಿಯಿಂದ ಮನೆ-ತೋಟ-ಗದ್ದೆಯನ್ನು ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹಾವೇರಿ, ಗದಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಐವರು ರೈತರ ಕುಟುಂಬಕ್ಕೆ ಸಂತಾಪ ಸೂಚಿಸಿದ ಸಿದ್ದರಾಮಯ್ಯ, ಇದೇ ರೀತಿ ರಾಜ್ಯದಲ್ಲಿ ರೈತರು ಅಸಹಾಯಕರಾಗಿ ಆತ್ಮಹತ್ಯೆಯ ದಾರಿಯಲ್ಲಿದ್ದಾರೆ ಎಂದಿದ್ದಾರೆ.

ಯಡಿಯೂರಪ್ಪ ಇದ್ದಾನಲ್ಲಾ ಇವ್ನೂ, ಮೋಸ್ಟ್ ವೀಕೆಸ್ಟ್ ಚೀಫ್ ಮಿನಿಸ್ಟರ್ : ಸಿದ್ದರಾಮಯ್ಯ

ಅತಿವೃಷ್ಟಿ ಪೀಡಿತ ರೈತರ ಸಾಲ ಬಾಕಿಗಾಗಿ ಬ್ಯಾಂಕ್‌ಗಳು ನೋಟೀಸ್ ಜಾರಿ ಮಾಡಿ ಕಿರುಕುಳ ನೀಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯ ಸರ್ಕಾರಕ್ಕೆ ಒಂದಿಷ್ಟು ಮಾನವೀಯತೆ ಇದ್ದರೆ ಇಂತಹ ಕ್ರೌರ್ಯವನ್ನು ತಕ್ಷಣ ನಿಲ್ಲಿಸಬೇಕು ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ

ಏಳೆಂಟು ತಿಂಗಳ ಸಮಯ ಕೊಡಿ, ಬೆಂಗಳೂರು ಚಿತ್ರಣ ಬದಲಿಸುತ್ತೇನೆ - ಸಿಎಂ

ರಾಜ್ಯಕ್ಕೆ ಬಂದೆರಗಿದ ಅತಿವೃಷ್ಟಿಯಿಂದ ರೂ.36 ಸಾವಿರ ಕೋಟಿ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ. ಕೇಂದ್ರ ಸರಕಾರದಿಂದ ಇಲ್ಲಿಯವರೆಗೆ ನಯಾಪೈಸೆ ನೆರವು ಬಂದಿಲ್ಲ. ಇದನ್ನು ಪ್ರಶ್ನಿಸುವ ಧೈರ್ಯ ರಾಜ್ಯ ಸರಕಾರಕ್ಕೆ ಇಲ್ಲ ಎಂದರು.


2009ರಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ ಅತಿವೃಷ್ಟಿಯ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಧಾವಿಸಿ ಬಂದು ಸಮೀಕ್ಷೆ ನಡೆಸಿ ತಕ್ಷಣ ರೂ.1500 ಕೋಟಿ ಪರಿಹಾರ ಘೋಷಿಸಿದ್ದರು. ಆದರೆ ಈಗಿನ ಪ್ರಧಾನಿ ಎಲ್ಲಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.


ದಿನಕ್ಕೊಂದು ದೇಶ ಸುತ್ತುವ, ಗಳಿಗೆಗೊಂದು ವೇಷ ಬದಲಿಸುವ ಈಗಿನ ಪ್ರಧಾನಿಗಳಿಗೆ ಒಂದು ಘಳಿಗೆ ಬಂದು ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ. ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಹಗಲಿರುಳು ಶ್ರಮಿಸಿ ನಡೆಸಿದ ಚಂದ್ರಯಾನ-2 ಪ್ರಯೋಗ, ನರೇಂದ್ರ ಮೋದಿ ಹಾಜರು ಹಾಕಿದರೂ ವಿಫಲವಾಯಿತು. ಪ್ರಧಾನಿಗಳು ಅಷ್ಟೇ ಸಮಯವನ್ನು ಅತಿವೃಷ್ಟಿ ಪೀಡಿತ ಪ್ರದೇಶದ ಭೇಟಿಗೂ ನೀಡಿದ್ದರೆ ಪ್ರಾಯಶ್ಚಿತ ಮಾಡಿಕೊಂಡಂತಾಗುತ್ತಿತ್ತು ಎಂದಿದ್ದಾರೆ.


ಆದರೆ 2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ಆದರೆ ಕಾಲ್ಗುಣದಂತಹ ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ ಎಂದ ಅವರು, ನಮ್ಮ ಕಾಲದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ನಮ್ಮ ಸರಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತ ಯೋಜನೆಗಳ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು ಎಂದು ಟ್ವೀಟ್ ಮಾಡುವ ಮೂಲ ರಾಜ್ಯ, ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ