ಬೆಂಗಳೂರು : ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವ ನಿರ್ಧಾರವನ್ನು ಕರ್ನಾಟಕ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಇದರೊಂದು ಕೇಂದ್ರ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ನಿಟ್ಟಿನಲ್ಲಿ ಮಾಡಿರುವ ಕೆಲಸವಾಗಿದೆ. ಇದರರಿಂದ ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತದೆ ಎಂದು ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.
2000 ರೂ. ನೋಟು ಬ್ಯಾನ್ ಮಾಡಬೇಕೆಂದಿದ್ದರೆ ಪರಿಚಯಿಸಿದ್ದೇಕೆ? ಕೇಂದ್ರ ಸರ್ಕಾರದ ವೈಫಲ್ಯ ಬೇರೆಡೆ ಸೆಳೆಯುವ ಪ್ರಯತ್ನ- ಸಿದ್ದರಾಮಯ್ಯ
Siddaramaiah Reaction On 2000 Note Withdraw : ಭಾರತೀಯ ರಿಸರ್ವ್ ಬ್ಯಾಂಕ್ 2000 ರೂಪಾಯಿ ಮುಖಬೆಲೆಯ ನೋಟು ಚಲಾವಣೆಯಿಂದ ಹಿಂಪಡೆದಿದೆ. ಈ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಜತೆಗೆ ಬಿಜೆಪಿ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮಾಡುತ್ತಿರುವ ತಂತ್ರ ಇದು ಎಂದು ಹೇಳಿದ್ದಾರೆ.
ಹೈಲೈಟ್ಸ್:
- ರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವ ನಿರ್ಧಾರಕ್ಕೆ ಕರ್ನಾಟಕ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡನೆ.
- ಇದರೊಂದು ಕೇಂದ್ರ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ನಿಟ್ಟಿನಲ್ಲಿ ಮಾಡಿರುವ ಕೆಲಸ ಎಂದು ಕಿಡಿ.
- ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪ