ಆ್ಯಪ್ನಗರ

ಗುರುವಾರ ದೆಹಲಿಯಲ್ಲಿ ಕೈ ನಾಯಕರಿಂದ ಹೈ ಕಮಾಂಡ್ ಭೇಟಿ- ಉಪಚುನಾವಣೆ ಸೋಲು, ರಾಜೀನಾಮೆ ಚರ್ಚೆ

ಉಪಚುನಾವಣೆ ಸೋಲು, ಸೋಲಿಗೆ ನೈತಿಕ ಹೊಣೆಹೊತ್ತು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿ ಹೈ ಕಮಾಂಡ್‌ ಜೊತೆಗೆ ರಾಜ್ಯ ಕಾಂಗ್ರೆಸ್ ಮುಖಂಡರು ಮಾತುಕತೆ ನಡೆಸಲಿದ್ದಾರೆ.

Vijaya Karnataka Web 11 Dec 2019, 4:12 pm
ಬೆಂಗಳೂರು: ಉಪಚುನಾವಣೆ ಸೋಲು, ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಜೊತೆ ರಾಜ್ಯ ಕಾಂಗ್ರೆಸ್ ಮುಖಂಡರು ಮಹತ್ವದ ಚರ್ಚೆ ನಡೆಸಲಿದ್ದಾರೆ.
Vijaya Karnataka Web karnataka congress leaders will meet high command in delhi
ಗುರುವಾರ ದೆಹಲಿಯಲ್ಲಿ ಕೈ ನಾಯಕರಿಂದ ಹೈ ಕಮಾಂಡ್ ಭೇಟಿ- ಉಪಚುನಾವಣೆ ಸೋಲು, ರಾಜೀನಾಮೆ ಚರ್ಚೆ


ಉಪಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು ಇದೇ ವಿಚಾರವಾಗಿ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಬ್ಬರು ಮುಖಂಡರ ರಾಜೀನಾಮೆಗೆ ಉಪಚುನಾವಣೆ ಸೋಲಿನ ಜೊತೆಗೆ ಪಕ್ಷದ ಆಂತರಿಕ ಭಿನ್ನಮತ ಕೂಡಾ ಕಾರಣ ಎನ್ನಲಾಗುತ್ತಿದೆ. ಪಕ್ಷದ ಹಿರಿಯ ಮುಖಂಡರ ಜೊತೆಗಿನ ಭಿನ್ನಾಭಿಪ್ರಾಯವೇ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಹಿಂದಿರುವ ಕಾರಣ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು.

ರಾಮನಗರದಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿಗೆ ಜೆಡಿಎಸ್‌ ಕಾರ್ಯಕರ್ತರು, ಜನರಿಂದ ಘೇರಾವ್‌

ಈ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಮುಖರ ಜೊತೆಗೆ ರಾಜ್ಯ ಕಾಂಗ್ರೆಸ್ ನಾಯಕರು ಮಾತುಕತೆ ನಡೆಸಲಿದ್ದಾರೆ. ಹೈ ಕಮಾಂಡ್ ಭೇಟಿ ವಿಚಾರವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಖಚಿತಪಡಿಸಿದ್ದು ಭಾರತ ಬಚಾವ್ ಪ್ರತಿಭಟನೆಗೆ ಎಲ್ಲಾ ನಾಯಕರು ದೆಹಲಿಗೆ ತೆರಳಲಿದ್ದು ಇದಾದ ಬಳಿಕ ಹೈ ಕಮಾಂಡ್ ಜೊತೆಗೆ ಮಾತುಕತೆ ನಡೆಸುತ್ತೇವೆ ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಅಂಗೀಕಾರ ಆಗುವ ಸಾಧ್ಯತೆ ಇದ್ದು ಈ ಸ್ಥಾನಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್ ಹಾಗೂ ಎಂ.ಬಿ ಪಾಟೀಲ್ ಹೆಸರು ಕೇಳಿಬರುತ್ತಿದೆ. ಈ ಇಬ್ಬರ ಪೈಕಿ ಒಬ್ಬರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವ ವಿಚಾರವಾಗಿ ಕೆಲವೇ ದಿನಗಳಲ್ಲಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಆದರೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿರುವ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆ ಇಲ್ಲ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ