ಆ್ಯಪ್ನಗರ

ವೈಯಕ್ತಿಕ ಅಂತರವೂ ಇಲ್ಲ, ಕೊರೊನ ಭಯವೂ ಇಲ್ಲ, ಕಾಂಗ್ರೆಸ್ ನಾಯಕರೇ ಏನಿದು?

ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಜಾವಾಬ್ದಾರಿಯಯತ ವಿರೋಧ ಪಕ್ಷವಾಗಿ ಕಾಂಗ್ರೆಸ್ ಕೊರೊನಾ ಮಾರ್ಗಸೂಚಿಯನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ.

Vijaya Karnataka Web 23 Jun 2020, 3:57 pm
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದೆ. ಜನರು ಆತಂಕದಲ್ಲಿದ್ದಾರೆ. ಸೋಂಕು ನಿಯಂತ್ರಣಕ್ಕೆ ಸಂಪೂರ್ಣ ಲಾಕ್‌ಡೌನ್ ಮಾಡಬೇಕು ಎಂಬ ಒತ್ತಡ ಹೆಚ್ಚಾಗುತ್ತಿದೆ. ಆದರೆ ಕಾಂಗ್ರೆಸ್ ನಾಯಕರಿಗೆ ಇದರ ಪರಿವೇ ಇಲ್ಲದಂತಿದೆ. ಹೌದು ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆ ಇದಕ್ಕೆ ಸಾಕ್ಷಿಯಾಗಿದೆ.
Vijaya Karnataka Web congress


ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದ ನಿಮಿತ್ತ ಸಿದ್ಧತಾ ಸಭೆ ಕೆಪಿಸಿಸಿ ನೂತನ ಕಟ್ಟಡದಲ್ಲಿ ನಡೆಯಿತು. ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಭಾಗಿಯಾಗಿದ್ದರು.

ಕೊರೊನಾ ನಡುವೆಯೂ ಡಿಕೆಶಿ ಪದಗ್ರಹಣಕ್ಕೆ ತಯಾರಿ, ಕೆಪಿಸಿಸಿಯಲ್ಲಿ ನಡೆಯಿತು ಸಿದ್ದತಾ ಸಭೆ

2019 ರ ಲೋಕಸಭೆ ಚುನಾವಣೆ ಅಭ್ಯರ್ಥಿಗಳು, 2018 ರ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಉಸ್ತುವಾರಿಗಳಾಗಿ ನಿಯೋಜಿತರಾಗಿರುವ ಕೆಪಿಸಿಸಿ ಸಮನ್ವಯಕಾರರು ಸಭೆಯಲ್ಲಿ ಭಾಗಿಯಾದ್ದರು.

ಸುಮಾರು 300 ಕ್ಕೂ ಅಧಿಕ ಸಂಖ್ಯೆಯಲ್ಲಿ ಮುಖಂಡರು, ಪ್ರಮುಖ ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಇದು ಕೊರೊನಾ ಮಾರ್ಗಸೂಚಿಯ ಸ್ಪಷ್ಟ ಉಲ್ಲಂಘನೆಯಾಗಿದೆ. ಕೊರೊನಾ ಸೋಂಕು ಹರಡುತ್ತಿರುವ ಈ ದಿನಗಳಲ್ಲಿ ರಾಜಕೀಯ ಸಭೆ ಸಮಾರಂಭಗಳಿಗೆ ಅವಕಾಶವಿಲ್ಲ.

ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವಿಲ್ಲ: ಕೊರೊನಾ ಹಾಟ್‌ಸ್ಪಾಟ್‌ ಆಗುತ್ತಾ ಚುಂಚನಕಟ್ಟೆ?

ಹೀಗಿದ್ದರೂ ಸಭೆಯನ್ನು ನಡೆಸಲಾಗಿದೆ. ಅಲ್ಲದೆ ಯಾವುದೇ ಸಾಮಾಜಿಕ ಅಂತರವನ್ನು ಸಭೆಯಲ್ಲಿ ಪಾಲನೆ ಮಾಡಿಲ್ಲ. ಮುಖಂಡರು, ಕಾರ್ಯಕರ್ತರು ಗುಂಪಾಗಿದೆ ಸಭೆಯಲ್ಲಿ ಕುಳಿತುಕೊಂಡರು. ವೇದಿಕೆಯಲ್ಲೂ 20 ಕ್ಕೂ ಅಧಿಕ ನಾಯಕರು ಕುಳಿತುಕೊಂಡಿದ್ದರು. ಇಲ್ಲೂ ವೈಯಕ್ತಿಕ ಅಂತರ ಪಾಲನೆ ಮಾಡಿಲ್ಲ.

ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾಂಗ್ರೆಸ್ ರಾಜ್ಯ ಸರ್ಕಾರದ ನಡೆಗಳನ್ನು ಖಂಡಿಸುತ್ತಾ ಬಂದಿದೆ. ಆದರೆ ಇದೀಗ ಸ್ವತಃ ತಾನೇ ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿದೆ. ಕಾಂಗ್ರೆಸ್ ನಾಯಕರ ಈ ನಡೆಗೆ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ