ಆ್ಯಪ್ನಗರ

ರೈತರ ಪ್ರತಿಭಟನೆ ಬೆನ್ನಲ್ಲೇ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೀದಿಗಿಳಿದ ಕೊರೊನಾ ವಾರಿಯರ್ಸ್..!

ಕೊರೊನಾ ಸಂದರ್ಭದಲ್ಲಿ ಕಾರ್ಯನಿರ್ವಹಿಸುವಾಗ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಬೇಕು ಎಂಬ ಬೇಡಿಕೆಯನ್ನು ಆಶಾ ಕಾರ್ಯಕರ್ತೆಯರು ಮುಂದಿಟ್ಟಿದ್ದು, ಕೊರೊನಾ ಸಂಕಷ್ಟದ ನಡುವೆಯೂ ತಮ್ಮ ಬೇಡಿಕೆಗಳಿಗೆ ಸ್ಪಂದಿಸದೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದೆ ಎಂಬುವುದು ಆಶಾ ಕಾರ್ಯಕರ್ತೆಯರ ಆರೋಪವಾಗಿದೆ.

Vijaya Karnataka Web 23 Sep 2020, 10:42 am
ಬೆಂಗಳೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ‌ ಸೇರಿದಂತೆ ವಿವಾದಾತ್ಮಕ ಸುಗ್ರೀವಾಜ್ಞೆಗಳನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ರೈತ, ಕಾರ್ಮಿಕ ಸಂಘಟನೆಗಳ ಪ್ರತಿಭಟನೆಯ ನಡುವೆ ಇದೀಗ ಆಶಾ ಕಾರ್ಯಕರ್ತೆಯರು ಕೂಡಾ ಬೀದಿಗಿಳಿಯಲು ಸಜ್ಜಾಗಿದ್ದಾರೆ.
Vijaya Karnataka Web asha4


ಉಪಚಾರವೂ ಇಲ್ಲ, ಉಪಾಹಾರವೂ ಇಲ್ಲ: ಚಿಕಿತ್ಸೆ ಸಿಗದೆ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳ ನರಳಾಟ!

ಕೊರೊನಾ ಸೋಂಕಿತರ ಪತ್ತೆ ಹಾಗೂ ವಿವಿಧ ಆರೋಗ್ಯ ಕಾರ್ಯಕ್ರಮಗಳಡಿ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ 6 ಸಾವಿರ ಮಾಸಿಕ ವೇತನ ನೀಡಲಾಗುತ್ತಿದ್ದು, ಇದನ್ನು 12,000ಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿ ಕೊರೊನಾ ವಾರಿಯರ್ಸ್‌ಗಳಾದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಒಳಗೊಂದು ಹೊರಗೊಂದು ಮಾತನಾಡುವುದು ಡಿಕೆಶಿ‌ಗೆ ಅಭ್ಯಾಸವಾಗಿ ಬಿಟ್ಟಿದೆ: ಬಿಸಿ ಪಾಟೀಲ್

ಕೊರೊನಾ ಸಂದರ್ಭದಲ್ಲಿ ಕಾರ್ಯನಿರ್ವಹಿಸುವಾಗ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಬೇಕು ಎಂಬ ಬೇಡಿಕೆಯನ್ನು ಆಶಾ ಕಾರ್ಯಕರ್ತೆಯರು ಮುಂದಿಟ್ಟಿದ್ದು, ಕೊರೊನಾ ಸಂಕಷ್ಟದ ನಡುವೆಯೂ ತಮ್ಮ ಬೇಡಿಕೆಗಳಿಗೆ ಸ್ಪಂದಿಸದೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದೆ ಎಂಬುವುದು ಆಶಾ ಕಾರ್ಯಕರ್ತೆಯರ ಆರೋಪವಾಗಿದೆ. ಹೀಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ರಾಜ್ಯಮಟ್ಟದ ಪ್ರತಿಭಟನಾ ಸಭೆ ಇಂದು ನಡೆಯಲಿದೆ.

ಸದನದಲ್ಲಿ ಸದ್ದು ಮಾಡಿದ ‘ಶವ ರಾಜಕೀಯ’ ; ಖಾದರ್‌ ಮಾತಿಗೆ ಮಾಧುಸ್ವಾಮಿ ಆಕ್ರೋಶ

ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಆಶಾ ಕಾರ್ಯಕರ್ತೆಯರು ಮುಂದಾಗಿದ್ದು, ತಮ್ಮ ಎಲ್ಲಾ ಬೇಡಿಕೆ‌ ಈಡೇರಿಸಲು ಒತ್ತಾಯಿಸಿ ಬುಧವಾರ ಮಧ್ಯಾಹ್ನ 12 ಗಂಟೆಯಿಂದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಸಾಕಷ್ಟು ಕುತೂಹಲ ಮೂಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ