ಆ್ಯಪ್ನಗರ

ಮಂಗಳವಾರದ ಸಂಕ್ಷಿಪ್ತ ಸುದ್ದಿ: ಮೊಹರಂ ಆಚರಣೆ ವೇಳೆ ವಿದ್ಯುತ್ ತಗುಲಿ ಯುವಕ ಸಾವು

ಮಂಗಳವಾರ (10-9-2019) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಘಟನೆಯ ಸಂಕ್ಷಿಪ್ತ ವಿವರ ಈ ಕೆಳಗಿನಂತಿವೆ.

Vijaya Karnataka Web 10 Sep 2019, 2:35 pm
ಬಳ್ಳಾರಿ: ಮೊಹರಂ ಹಬ್ಬ ಆಚರಣೆ ವೇಳೆ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಸಾವನ್ನಪಿರುವ ಘಟನೆ ಜಿಲ್ಲೆಯ ಕಂಪ್ಲಿ ಕೋಟೆಯ ದೊಡ್ಡ ಮಸೀದಿ ಬಳಿ ನಡೆದಿದೆ. ಪಟಣ್ಣದ 18ನೇ ವಾರ್ಡ್ ತಳವಾರ ಓಣಿಯ ಉಪ್ಪಾರ ಕುಮಾರ್ (24) ಮೃತ ದುರ್ದೈವಿ. ಮಸೀದಿ ಬಳಿ ಮೊಹರಂ ಹಬ್ಬ ನಿಮಿತ್ತ ಅಲಾಯಿ‌ ಆಡುವ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿದ್ದಾನೆ.
Vijaya Karnataka Web bellary


ಸುಪ್ರೀಂಕೋರ್ಟ್ ತೀರ್ಪು ಅನರ್ಹ ಶಾಸಕರ ಪರ ಬರಲಿದೆ: ಬಿ ಸಿ ಪಾಟೀಲ್ ವಿಶ್ವಾಸ

ರಾಯಚೂರು: ಸುಪ್ರೀಂಕೋರ್ಟ್‌ ತೀರ್ಪು ಅನರ್ಹ ಶಾಸಕರ ಪರ ಬರುವ ವಿಶ್ವಾಸ ಇದೆ ಎಂದು ಅನರ್ಹ ಶಾಸಕ ಬಿ ಸಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂತ್ರಾಲಯಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಸುಪ್ರೀಂಕೋರ್ಟ್‌ನಲ್ಲಿ ಅಯೋಧ್ಯೆ ವಿಚಾರಣೆ ನಡೆಯುತ್ತಿರುವ ಕಾರಣ ನ್ಯಾಯಾಧೀಶರು ಕಾಂಗ್ರೆಸ್-ಜೆಡಿಎಸ್ ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡುತ್ತಿದ್ದಾರೆ. ಹೀಗಾಗಿ ಸ್ಪೀಕರ್ ರಮೇಶ್ ಕುಮಾರ್ ಕ್ರಮ ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿರುವ ದೂರಿನ ವಿಚಾರಣೆ ತಡವಾಗುತ್ತಿದೆ ಎಂದು ಅವರು ತಿಳಿಸಿದರು.

ಬೆಳಗಾವಿ: ಆದಷ್ಟು ಬೇಗ ಮಹಾದಾಯಿ ಸಮಸ್ಯೆ ಇತ್ಯರ್ಥ ಮಾಡುತ್ತೇವೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿವಾದ ಸಂಬಂಧ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿ ಸಭೆ ಮಾಡುತ್ತೇವೆ. ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿರುವೆ. ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಭೇಟಿಗೆ ದಿನಾಂಕ ನಿಗದಿ ಪಡಿಸಲು ಹೇಳಿದ್ದೇನೆ. ಒಟ್ಟಾರೆ ಆದಷ್ಟು ಬೇಗ ಮಹದಾಯಿ ವಿವಾದ ಬಗೆಹರಿಸುತ್ತೇವೆಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ