ಆ್ಯಪ್ನಗರ

ಜಿಲ್ಲಾವಾರು ಸಂಕ್ಷಿಪ್ತ ಸುದ್ದಿ: ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದ ಮಾಜಿ ಸಚಿವ ಪುಟ್ಟರಾಜು

ಕರ್ನಾಟಕ ರಾಜ್ಯದ ಆಯಾ ಜಿಲ್ಲೆಗಳ ಸಂಕ್ಷಿಪ್ತ ಸುದ್ದಿ ಈ ಕೆಳಗಿನಂತಿವೆ.

Vijaya Karnataka Web 29 Aug 2019, 2:09 pm
ಮಂಡ್ಯ: ನಾನು ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಸಿ ಎಸ್ ಪುಟ್ಟರಾಜು ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯ ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಸೇರ್ಪಡೆಯಾಗುತ್ತೇನೆ ಎನ್ನುವ ಸುದ್ದಿ ಶುದ್ಧ ಸುಳ್ಳು. ಕೆಲವು ಮಾಧ್ಯಮಗಳಲ್ಲಿ ತನ್ನ ವಿರುದ್ಧ ಇಲ್ಲ ಸಲ್ಲದ ರಾಜಕೀಯ ಮಾಹಿತಿಗಳು ಪ್ರಸ್ತಾಪವಾಗುತ್ತಿವೆ. ರಾಜಕೀಯ ಮೂಲ ಪ್ರಾರಂಭವಾಗಿದ್ದೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ, ಅಂತ್ಯವೂ ಅವರ ನೇತೃತ್ವದಲ್ಲಿಯೇ ಆಗಲಿದೆ ಎಂದರು.
Vijaya Karnataka Web puttaraju


ಕೊಡಗು: ಕುಶಾಲನಗರ ವಲಯದ ಆನೆಕಾಡು ಉಪವಲಯದ ಅರಣ್ಯಾಧಿಕಾರಿ ರಂಜನ್ ಎಂಬವರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಚೆಟ್ಟಳ್ಳಿ ಸಮೀಪದ ಖಾಸಗಿ ತೋ‌ಟದಲ್ಲಿ ನಡೆದಿದೆ. ಉರುಳಿಗೆ ಸಿಲುಕಿದ ಚಿರತೆಯನ್ನು ಬಿಡಿಸಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ರಂಜನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.


ರಾಮನಗರ: ಸರಕಾರಿ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್ ಮಾರ್ಗ ಮಧ್ಯೆಯೇ ಕೈಕೊಟ್ಟ ಘಟನೆ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಕೆಎ.42.ಜಿ.625 ಸಂಖ್ಯೆಯ ಕಳಪೆ ಆಂಬ್ಯುಲೆನ್ಸ್‌ನಲ್ಲಿ ರೋಗಿಗಳನ್ನು ಆಸ್ಪತ್ಪೆಗೆ ರವಾನಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಾರ್ಗ ಮಧ್ಯೆಯೇ ಕೆಟ್ಟು ನಿಂತ ಆಂಬ್ಯುಲೆನ್ಸ್‌‌ನ ಲೆಗ್ ಸ್ಟ್ಯಾಂಡ್ ಮುರಿದು ಮುಂದೆ ಹೋಗುವ ವಿಡಿಯೋ ವೈರಲ್ ಆಗುತ್ತಿದೆ. ಹೀಗೆ ರೋಗಿಗಳನ್ನು ಸಾಗಿಸುವ ಮಾರ್ಗ ಮಧ್ಯೆಯೇ ಕೆಟ್ಟು ನಿಂತರೆ, ರೋಗಿಗಳ ಗತಿ ಏನು? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.


ರಾಜ್ಯದ ಇಬ್ಬರು ಶಿಕ್ಷಕರಿಗೆ ‘ರಾಷ್ಟ್ರ ಪ್ರಶಸ್ತಿ’

ಬೆಂಗಳೂರು: ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ನೀಡುವ 2018ನೇ ಸಾಲಿನ 'ರಾಷ್ಟ್ರ ಪ್ರಶಸ್ತಿ'ಗೆ ರಾಜ್ಯದ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಲೆಕ್ಯಾತನಹಳ್ಳಿ ಸರಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಬಿ.ಎಸ್‌.ಶಶಿಕುಮಾರ್‌ ಹಾಗೂ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿಧಿನ ಬೆಸೂರು ಗ್ರಾಮದ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಸುರೇಶ್‌ ಮರಕಾಲ ಎಂಬುವವರು ಶಿಕ್ಷಕರ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ