ಆ್ಯಪ್ನಗರ

ಬಿಜೆಪಿ ಕಚೇರಿ ಎದುರು ಧ್ವಜ, ಚಿಹ್ನೆ ತೆರವು ಪ್ರಶ್ನಿಸಿ ಮೇಲ್ಮನವಿ: ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್‌

ಬಿಬಿಎಂಪಿ ಚುನಾವಣೆಯಲ್ಲಿ ಮಲ್ಲೇಶ್ವರ 11ನೇ ಅಡ್ಡರಸ್ತೆಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಎದುರಿರುವ ಕೋದಂಡರಾಮಪುರ ಸರಕಾರಿ ಶಾಲೆಯನ್ನು ಮತಗಟ್ಟೆಯನ್ನಾಗಿ ಗುರುತಿಸಲಾಗಿತ್ತು. ಶಾಲೆಯು ಬಿಜೆಪಿ ಪಕ್ಷದ ಕಚೇರಿಯ 100 ಮೀಟರ್‌ ವ್ಯಾಪ್ತಿಯಲ್ಲಿ ಬರುವುದರಿಂದ ಮತಗಟ್ಟೆಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಪಕ್ಷದ ಕಾರ್ಯದರ್ಶಿ ಚುನಾವಣಾಧಿಕಾರಿಗೆ ಮನವಿ ಮಾಡಿದ್ದರು.

Vijaya Karnataka 13 Mar 2019, 10:45 am
ಬೆಂಗಳೂರು: 2015ರಲ್ಲಿ ಬಿಬಿಎಂಪಿ ಚುನಾವಣೆಯ ಮತದಾನದ ದಿನ ನಗರದ ಬಿಜೆಪಿ ಕಚೇರಿ ಮುಂದಿರುವ ಪಕ್ಷದ ಧ್ವಜ ಹಾಗೂ ಚಿಹ್ನೆ ತೆರವುಗೊಳಿಸುವಂತೆ ನೀಡಿದ್ದ ನೋಟಿಸ್‌ ಪ್ರಶ್ನಿಸಿದ್ದ ಅರ್ಜಿ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.
Vijaya Karnataka Web high court

ಬಿಜೆಪಿಯ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ.ರವಿ ಮಳಿಮಠ್‌ ಹಾಗೂ ನ್ಯಾ.ಎಸ್‌.ಜಿ.ಪಂಡಿತ್‌ ಅವರಿದ್ದ ಪೀಠ ವಾದ ಆಲಿಸಿ ವಿಚಾರಣೆ ಮುಂದೂಡಿತು.

ಬಿಬಿಎಂಪಿ ಚುನಾವಣೆಯಲ್ಲಿ ಮಲ್ಲೇಶ್ವರ 11ನೇ ಅಡ್ಡರಸ್ತೆಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಎದುರಿರುವ ಕೋದಂಡರಾಮಪುರ ಸರಕಾರಿ ಶಾಲೆಯನ್ನು ಮತಗಟ್ಟೆಯನ್ನಾಗಿ ಗುರುತಿಸಲಾಗಿತ್ತು. ಶಾಲೆಯು ಬಿಜೆಪಿ ಪಕ್ಷದ ಕಚೇರಿಯ 100 ಮೀಟರ್‌ ವ್ಯಾಪ್ತಿಯಲ್ಲಿ ಬರುವುದರಿಂದ ಮತಗಟ್ಟೆಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಪಕ್ಷದ ಕಾರ್ಯದರ್ಶಿ ಚುನಾವಣಾಧಿಕಾರಿಗೆ ಮನವಿ ಮಾಡಿದ್ದರು.

ಆದರೆ ಮನವಿ ತಿರಸ್ಕರಿಸಿದ್ದ ಆಯೋಗ, ಕಚೇರಿಯ ಮುಂದಿರುವ ಪಕ್ಷದ ಚಿಹ್ನೆ ಹಾಗೂ ಬಾವುಟವನ್ನು ತೆರವುಗೊಳಿಸುವಂತೆ ಬಿಜೆಪಿಗೆ ನೋಟಿಸ್‌ ಜಾರಿಗೊಳಿಸಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಆದ್ದರಿಂದ ಬಿಜೆಪಿ ಮೇಲ್ಮನವಿ ಸಲ್ಲಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ