ಆ್ಯಪ್ನಗರ

ಹಿಂಗಾರು ಕೃಷಿಗೆ ಪ್ರವಾಹವೇ ವರ! ಬಂಪರ್‌ ಬೆಳೆ ನಿರೀಕ್ಷೆಯಲ್ಲಿ ಕಲ್ಯಾಣ ಕರ್ನಾಟಕ

ಉತ್ತರ ಕರ್ನಾಟಕದಲ್ಲಿ ಕಳೆದ 2 ತಿಂಗಳ ಹಿಂದೆ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ನೆಲದಲ್ಲಿ ತೇವಾಂಶ ಹೆಚ್ಚಾಗಿದ್ದು, ಹಿಂಗಾರು ಬೆಳೆಗಳು ಸಮೃದ್ಧವಾಗಿ ಬೆಳೆಯುವ ನಿರೀಕ್ಷೆ ಇದೆ. ಹೀಗಾಗಿ, ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಮಾಡಲಾಗ್ತಿದೆ. ರೈತರಿಗೆ ತಾಂತ್ರಿಕ ನೆರವು ನೀಡಲಾಗ್ತಿದೆ.

Vijaya Karnataka 30 Sep 2019, 6:09 pm
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಚಟುವಟಿಕೆ ಕೊನೆಗೊಳ್ಳುತ್ತಿದ್ದಂತೆಯೇ, ಹಿಂಗಾರು ಬಿತ್ತನೆ ಕಾರ್ಯ ಗರಿಗೆದರಿದೆ. ಇತ್ತೀಚಿನ ಪ್ರವಾಹದಿಂದಾಗಿ 22 ಜಿಲ್ಲೆಗಳಲ್ಲಿ ಹತ್ತು ಲಕ್ಷ ಹೆಕ್ಟೇರ್‌ ಪ್ರದೇಶದಷ್ಟು ಬೆಳೆ ನಾಶವಾಗಿತ್ತು. ಈ ಹಿನ್ನೆಲೆಯಲ್ಲಿ ರೈತರು ಹಿಂಗಾರಿನ ಬೆಳೆಗಳತ್ತ ಲಕ್ಷ್ಯ ವಹಿಸಿದ್ದಾರೆ. ಮಳೆ, ಪ್ರವಾಹದ ಕಾರಣದಿಂದ ಉತ್ತರ ಕರ್ನಾಟಕ ಭಾಗದ ಹೆಚ್ಚಿನ ಜಿಲ್ಲೆಗಳಲ್ಲಿ ಹಿಂಗಾರು ಬಿತ್ತನೆಗೆ ಪೂರಕ ವಾತಾವರಣ ಇದೆ. ಹೀಗಾಗಿ ಬಂಪರ್‌ ಬೆಳೆ ಕೈಸೇರುವ ನಿರೀಕ್ಷೆ ಇದೆ ಎಂದು ಕೃಷಿ ತಜ್ಞರು ಅಂದಾಜಿಸಿದ್ದಾರೆ.
Vijaya Karnataka Web crop farmer


'ಸಿಎಂ ಪರಿಸ್ಥಿತಿ ನೋಡಿ ಅಯ್ಯೋ ಎನಿಸುತ್ತಿದೆ': ಶಿವರಾಜ್ ತಂಗಡಗಿ ವ್ಯಂಗ್ಯ

ಕೃಷಿ ಇಲಾಖೆ ಲೆಕ್ಕಾಚಾರದಂತೆ, ಹಿಂಗಾರಿನಲ್ಲಿ ಒಟ್ಟು 31.48 ಲಕ್ಷ ಹೆ. ಪ್ರದೇಶದಲ್ಲಿ ಬಿತ್ತನೆ ಗುರಿ ಹಾಕಿಕೊಳ್ಳಲಾಗಿದೆ. ಒಟ್ಟು 30.33 ಲಕ್ಷ ಟನ್‌ ಆಹಾರ ಉತ್ಪಾದನೆಯಾಗುವ ನಿರೀಕ್ಷೆ ಇದೆ. ಇದಕ್ಕೆ ಪೂರಕವಾಗಿ ಕೃಷಿ ಇಲಾಖೆ ಎಲ್ಲಾ ಜಿಲ್ಲೆಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಗೆ ಕ್ರಮ ಕೈಗೊಂಡಿದೆ.

ಮಾಹಿತಿಗೆ ವ್ಯವಸ್ಥೆ

ಪ್ರವಾಹ ಉಂಟಾಗಿದ್ದ ಜಿಲ್ಲೆಗಳಲ್ಲಿ ಹಿಂಗಾರು ಬಿತ್ತನೆಗೆ ಹೆಚ್ಚು ಉತ್ಸುಕತೆ ಕಂಡು ಬಂದಿದೆ. ಆಯಾ ಜಿಲ್ಲೆಗಳಲ್ಲಿರುವ ರೈತ ಸಂಪರ್ಕ ಕೇಂದ್ರ(ಆರ್‌ಎಸ್‌ಕೆ)ಗಳಲ್ಲಿ ಕೃಷಿಕರಿಗೆ ಬೆಳೆ ವೈವಿಧ್ಯ ಕುರಿತು ಮಾಹಿತಿ ನೀಡುವ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಜಿಲ್ಲಾ ಕೃಷಿ ಉಪ ನಿರ್ದೇಶಕರು ಎಲ್ಲಾಆರ್‌ಎಸ್‌ಕೆಗಳಿಗೆ ಪೂರಕ ಮಾಹಿತಿಯನ್ನು ರವಾನಿಸುವಂತೆ ಇಲಾಖೆ ಸೂಚಿಸಿದೆ.

ಅಲ್ಪಾವಧಿ ಬೆಳೆ ಸೂಕ್ತ

ಹಳೇ ಮೈಸೂರು ಭಾಗದ ಕೆಲ ಜಿಲ್ಲೆಗಳಲ್ಲಿ ಮುಂಗಾರು ಮಳೆ ನಿರೀಕ್ಷಿಸಿದಷ್ಟು ಸುರಿದಿಲ್ಲ. ಹೀಗಾಗಿ ಹಿಂಗಾರಿನಲ್ಲಿ ರೈತರು ಅಲ್ಪಾವಧಿ ಬೆಳೆಗಳಾದ ರಾಗಿ, ಹುರುಳಿ, ಉಚ್ಚೆಳ್ಳು ಬೆಳೆಯನ್ನು ಬೆಳೆಯಬಹುದು. ಜತೆಗೆ ಸಿರಿಧಾನ್ಯಗಳನ್ನು ಬೆಳೆದುಕೊಳ್ಳಬಹುದು. ದಸರಾ-ದೀಪಾವಳಿ ಸಮಯದಲ್ಲಿ ಸಾಧಾರಣ ಮಳೆಯಾಗುವ ಕಾರಣ ಬೆಳೆ ಕೈಸೇರುವ ಸಾಧ್ಯತೆ ಇದೆ.

ನನ್ನದು ತಂತಿಯ ಮೇಲಿನ ನಡಿಗೆ: ಬಿಎಸ್‌ವೈ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ