ಆ್ಯಪ್ನಗರ

ಕೊರೊನಾ ನಿಯಂತ್ರಣಕ್ಕೆ ಗ್ರಾಮಮಟ್ಟದ ಟಾಸ್ಕ್‌ ಫೋರ್ಸ್‌, ಸುತ್ತೋಲೆ ಹೊರಡಿಸಿದ ಸರ್ಕಾರ

ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಗ್ರಾಮೀಣ ಮಟ್ಟದಲ್ಲಿ ಕೆಲವೊಂದು ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯಪಡೆಯನ್ನು ರಚಿಸುವಂತೆ ಸುತ್ತೋಲೆ ಹೊರಡಿಸಿದೆ.

Vijaya Karnataka Web 23 Mar 2020, 6:58 pm
ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಗ್ರಾಮಮಟ್ಟದ ಕಾರ್ಯಪಡೆಯನ್ನು ರಚನೆ ಮಾಡಲು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು,
Vijaya Karnataka Web corona

ಸದಸ್ಯರು, ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರನ್ನು ಒಳಗೊಂಡ ಟಾಸ್ಕ್‌ ಫೋರ್ಸ್‌ ರಚನೆ ಮಾಡಲು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕ ಎಸ್.ಎ ಅಶ್ರಫುಲ್ ಹಸನ್ ಸುತ್ತೋಲೆ ಹೊರಡಿಸಿದ್ದಾರೆ.
ಈ ಕಾರ್ಯಪಡೆ ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಹಣೆ ಮಾಡಲಿದ್ದು ಜನರ ಜೊತೆಗೆ ಸಂಪರ್ಕವಿಟ್ಟುಕೊಂಡು ಅವರ ಸಮಸ್ಯೆಗೆ ಸ್ಪಂದಿಸಲಿದೆ. ಗ್ರಾಮ ಮಟ್ಟದ ಕಾರ್ಯಪಡೆಗೆ ಸರ್ಕಾರ ಕೆಲವೊಂದು ನಿರ್ದೇಶನಗಳನ್ನು ನೀಡಿದ್ದು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಿದೆ.

ಇಟಲಿಯಲ್ಲಿ ಉದ್ಯೋಗ, ಶಿಕ್ಷಣ ಅರಸಿ ಹೋದ 2 ಲಕ್ಷಕ್ಕೂ ಅಧಿಕ ಭಾರತೀಯರ ಪರದಾಟ

* ಕೊರೊನಾ ವೈರಸ್‌ ಬಗ್ಗೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳು ಹೊರಡಿಸಿರುವ ಮಾರ್ಗಸೂಚಿಯನ್ನು ಅನುಷ್ಟಾನಗೊಳಿಸಲು ಕ್ರಮ ಕೈಗೊಳ್ಳುವುದು

* ಗ್ರಾಮದಲ್ಲಿ ಐದಕ್ಕಿಂತ ಹೆಚ್ಚು ಜನರು ಸೇರದದಂತೆ ನೋಡಿಕೊಳ್ಳುವುದು ಹಾಗೂ ಗ್ರಾಮದ ಬಾವಿ, ಕೆರೆ , ನದಿ ಸ್ಥಳಗಳಲ್ಲಿ ಸಾರ್ವಜನಿಕರು ಗುಂಪು ಗುಂಪಾಗಿ ಸೇರುವುದನ್ನು ತಪ್ಪಿಸುವುದು

* ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರು ಕನಿಷ್ಠ ಆರು ಅಡಿ ಅಂತರ ಕಾಯ್ದುಕೊಳ್ಳುವಂತೆ ಅರಿವು ಮೂಡಿಸುವುದು

* ಕೊರೊನಾ ಬಗ್ಗೆ ಸುಳ್ಳು ಸುದ್ದಿ, ವದಂತಿ ಹರಡದಂತೆ ನೋಡಿಕೊಳ್ಳುವುದು ಹಾಗೂಗ್ರಾ,ಮೀಣ ಭಾಗಗಳಲ್ಲಿ ಮದುವೆ, ಜಾತ್ರೆ, ಮೆರವಣಿಗೆ, ಸಂತೆ ನಡೆಯದಂತೆ ನೊಡಿಕೊಳ್ಳುವುದು

* 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಸಮೀಕ್ಷೆ ನಡೆಸಿ ನಿಯಮಿತವಾಗಿ ಇವರುಗಳ ಆರೋಗ್ಯವನ್ನು ಗಮನಿಸುವುದು ಹಾಗೂ ಗರ್ಭಿಣಿ ಹಾಗೂ ಬಾಣಂತಿಯರ ಆರೋಗ್ಯ ವಿಚಾರಣೆ ಮಾಡುವುದು.

* ಕೊರೊನಾ ರೋಗ ಲಕ್ಷಣಗಳು ಕಂಡುಬಂದರನ್ನು ಗುರುತಿಸಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿಸಲು ಕ್ರಮ ಕೈಗೊಳ್ಳುವುದು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ