ಆ್ಯಪ್ನಗರ

ಕೊರೊನಾ ಆತಂಕ, 10 ಲಕ್ಷ ಮಾಸ್ಕ್, ಆರೋಗ್ಯ ಸಲಕರಣೆಗಳ ಖರೀದಿಗೆ ಸರ್ಕಾರ ನಿರ್ಧಾರ

ಕೊರೊನಾ ನಿಯಂತ್ರಣ ಹಾಗೂ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು , ಮಾಸ್ಕ್‌ ಸೇರಿದಂತೆ ಅಗತ್ಯ ವೈದ್ಯಕೀಯ ಸಲಕರಣೆಗಳ ಖರೀದಿಗೆ ನಿರ್ಧರಿಸಿದೆ.

Vijaya Karnataka Web 23 Mar 2020, 11:38 am
ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದ್ದು, 10 ಲಕ್ಷ ಮಾಸ್ಕ್‌ ಹಾಗೂ ಅಗತ್ಯ ಆರೋಗ್ಯ ಸಲಕರಣೆಗಳ ಖರೀದಿಗೆ ಮುಂದಾಗಿದೆ.
Vijaya Karnataka Web sriramulu meeting


ಸೋಮವಾರ ಅಧಿಕಾರಿಗಳು ಹಾಗೂ ಆರೋಗ್ಯ ಸಲಕರಣೆಗಳನ್ನು ಪೂರೈಕೆ ಮಾಡುವ ಕಂಪನಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ ಆರೋಗ್ಯ ಸಚಿವ ಶ್ರೀರಾಮುಲು, ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಕ್ಕೆ ಅಗತ್ಯವಾಗಿ ಬೇಕಾಗಿರುವ ಸಲಕರಣೆಗಳನ್ನು ಖರೀದಿ ಮಾತುಕತೆ ನಡೆಸಿದರು.

ಈ ವಿಚಾರವಾಗಿ ಟ್ವೀಟ್‌ ಮೂಲಕ ಮಾಹಿತಿ ನೀಡಿರುವ ಸಚಿವರು, ರಾಜ್ಯ ಸರ್ಕಾರ ಈಗಾಗಲೇ 10 ಲಕ್ಷ ಮಾಸ್ಕ್ ಖರೀದಿಸಲು ಕ್ರಮ ಕೈಗೊಂಡಿದೆ ಹಾಗೂ 5 ಲಕ್ಷ ವೈಯಕ್ತಿಕ ರಕ್ಷಣಾ ಸಾಧನಗಳು (PPE) ಖರೀದಿಗೆ ನಿರ್ಧರಿಸಲಾಗಿದೆ. ಅಲ್ಲದೆ 1,000 ವೆಂಟಿಲೇಟರ್ ಖರೀದಿಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೊರೊನಾ ವೈರಸ್‌: ವಾಟ್ಸಾಪ್‌ಗಳಲ್ಲಿ ಬರೋದನ್ನೆಲ್ಲಾ ನಂಬದಿರಿ, ಇಲ್ಲಿದೆ ನೈಜ ಮಾಹಿತಿ


ಆರೋಗ್ಯ ಇಲಾಖೆಯು ಯುದ್ಧೋಪಾದಿಯಲ್ಲಿ ಸೋಂಕು ತಡೆಹಿಡಿಯಲು ಕಾರ್ಯೋನ್ಮುಖವಾಗಿದೆ. ನಾಗರಿಕರು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ.

ಕೊರೊನಾ ವಿಚಾರವಾಗಿ ಟ್ವೀಟ್‌ ವಾರ್‌ ! ಎಚ್‌ಕೆ ಪಾಟೀಲ್‌ v/s ಸುಧಾಕರ್‌ ಜಟಾಪಟಿ

ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಮಾಸ್ಕ್‌ಗೆ ಬೇಡಿಕೆ ಹೆಚ್ಚಾಗಿದ್ದು, ಹಲವು ಕಡೆಗಳಲ್ಲಿ ಕೊರತೆ ಉಂಟಾಗಿದೆ. ಸದ್ಯದ ಪರಿಸ್ಥಿತಿಯ ಲಾಭವನ್ನು ಪಡೆದುಕೊಳ್ಳುತ್ತಿರುವ ಕೆಲವರು ಮಾಸ್ಕನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಜನರ ಬೇಡಿಕೆ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮಾಸ್ಕ್‌ಗೆ ಕೊರತೆಯಾಗದಂತೆ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದ್ದು ಈ ಕಾರಣದಿಂದಾಗಿ ಮಾಸ್ಕ್‌ ಸೇರಿದಂತೆ ಕೆಲವೊಂದು ಅಗತ್ಯ ವೈದ್ಯಕೀಯ ಸಲಕರಣೆಗಳನ್ನು ಖರೀದಿ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ