ಆ್ಯಪ್ನಗರ

ಊರಿಗೆ ತೆರಳಲು ವಲಸೆ ಕಾರ್ಮಿಕರ ಪರದಾಟ, ಆಕ್ರೋಶಕ್ಕೆ ಕಾರಣವಾದ ಸರ್ಕಾರದ ನಿರ್ಲಕ್ಷ್ಯ

ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ಕಾರ್ಮಿಕರು ಇದೀಗ ತಮ್ಮ ಊರುಗಳಿಗೆ ತೆರಳಲೂ ಪರದಾಡುತ್ತಿದ್ದಾರೆ. ಕಾರ್ಮಿಕರ ನೆರವಿಗೆ ಬರಬೇಕಾಗಿರುವ ಸರ್ಕಾರ ಕೈಕಟ್ಟಿ ಕುಳಿತುಕೊಂಡಿದೆ. ಸರ್ಕಾರದ ಈ ನಡೆ ಆಕ್ರೋಶಕ್ಕೆ ಕಾರಣವಾಗಿದೆ.

Vijaya Karnataka Web 3 May 2020, 10:00 am
ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಬೆಂಗಳೂರಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಕಾರ್ಮಿಕರು ಇದೀಗ ತಮ್ಮ ಊರುಗಳಿಗೆ ತೆರಳಲು ಮುಂದಾಗಿದ್ದಾರೆ. ಸುಮಾರು ಎರಡು ತಿಂಗಳಲ್ಲಿ ಸಂಕಷ್ಟ ಅನುಭವಿಸಿದ ಕಾರ್ಮಿಕರು ಇದೀಗ ಊರಿಗೆ ತೆರಳಲೂ ಸಂಕಷ್ಟ ಅನುಭವಿಸಬೇಕಾಗಿದೆ. ನಗರದ ಮೆಜೆಸ್ಟಿಕ್‌ ಸೇರಿದಂತೆ ಪ್ರಮುಖ ಬಸ್‌ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿರುವ ಕಾರ್ಮಿಕರು ಬಸ್‌ ದರ ಹೆಚ್ಚಳದಿಂದ ಕಂಗಾಲಾಗಿದ್ದಾರೆ.
Vijaya Karnataka Web workers


ಕಾರ್ಮಿಕರ ಜೊತೆಗೆ ಇದ್ದೇವೆ ಎಂದು ಅಭಯ ನೀಡಿದ್ದ ಸರ್ಕಾರ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತೆರಳಲು ಯಾವುದೇ ಸೌಲಭ್ಯವನ್ನು ಕಲ್ಪಿಸಿಲ್ಲ. ಈಗಾಗಲೇ ಉದ್ಯೋಗವಿಲ್ಲದೆ ಕಂಗಾಲಾಗಿರುವ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ದುಪ್ಪಟ್ಟು ಹಣ ತೆರಬೇಕಾದ ಪರಿಸ್ಥಿತಿಯಲ್ಲಿದ್ದಾರೆ. ಸರ್ಕಾರದ ಈ ನಡೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಹಾಸನ: ಆರೋಗ್ಯ ಸೇತು ಆ್ಯಪ್ ಎಡವಟ್ಟು; ಗ್ರೀನ್‌ ಝೋನ್‌ನಲ್ಲಿ ಕೊರೊನಾ ಆತಂಕ!

ಭಾನುವಾರ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 100 ಬಸ್‌ಗಳು ಹೊರಡಲಿವೆ. ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೂ ಬಸ್‌ ಸಂಚಾರವಿದೆ. ಇನ್ನು ಹೊರರಾಜ್ಯದ ಕಾರ್ಮಿಕರಿಗೆ ರೈಲ್ವೇ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದರೂ ಇದುವರೆಗೂ ಸೂಕ್ತ ವ್ಯವಸ್ಥೆಯನ್ನು ಕೈಗೊಂಡಿಲ್ಲ. ತಮ್ಮೂರಿಗೆ ಹೋಗುವ ತವಕದಲ್ಲಿರುವ ಕಾರ್ಮಿಕರು ಊಟ ತಿಂಡಿಗೂ ಪರದಾಡುತ್ತಿದ್ದಾರೆ.

ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ

ಕಾರ್ಮಿಕರನ್ನು ಈ ರೀತಿ ನಡೆಸಿಕೊಂಡ ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ಉದ್ಯೋಗವಿಲ್ಲದೆ ಕೈಯಲ್ಲಿ ಹಣವೂ ಇಲ್ಲದೆ ಕಾರ್ಮಿಕರು ಪರದಾಡುತ್ತಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾರ್ಮಿಕರ ಜೊತೆಗೆ ನಿಲ್ಲುವುದು ಸರ್ಕಾರದ ಕರ್ತವ್ಯ. ವಿವಿಧ ಜಿಲ್ಲೆಗಳಿಂದ ಕೂಲಿಯನ್ನು ಅರಸಿ ಬಂದ ಕಾರ್ಮಿಕರಿಗೆ ತಮ್ಮೂರುಗಳಿಗೆ ತೆರಳಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕಾಗಿರುವುದು ಸರ್ಕಾರದ ಜಾವಾಬ್ದಾರಿ. ಆದರೆ ಇದನ್ನು ನಿಭಾಯಿಸುವುದರಲ್ಲಿ ಸಂಪೂರ್ಣ ವಿಫಲವಾಗಿದೆ.

ದೊಡ್ಡಬಳ್ಳಾಪುರದಲ್ಲಿ ವಿದೇಶದಿಂದ ಬಂದವರ ಕ್ವಾರಂಟೈನ್‌ಗೆ ವಿರೋಧ: ಸೋಂಕಿಲ್ಲದ ಜಿಲ್ಲೆಯನ್ನು ರೆಡ್‌ ಝೋನ್‌ ಮಾಡಿದ್ದಕ್ಕೆ ಅಪಸ್ವರ

ಸರ್ಕಾರದ ಈ ನಡೆಯನ್ನು ವಿರೋಧ ಪಕ್ಷಗಳು ಟೀಕಿಸಿವೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಕೂಡಾ ವಿರೋಧ ವ್ಯಕ್ತಪಡಿಸಿದ್ದು ಮುಖ್ಯಮಂತ್ರಿಗಳೇ ಭಿಕ್ಷೆ ಎತ್ತಿಯಾದ್ರೂ ನಿಮಗೆ ಹಣ ಕೊಡ್ತೀನಿ, ದಯವಿಟ್ಟು ಕಾರ್ಮಿಕರನ್ನು ಅವರ ಊರಿಗೆ ಸೇರಿಸಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲೂ ಸರ್ಕಾರದ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನೆರೆ ರಾಜ್ಯ ಕೇರಳದಲ್ಲಿ ಅಂತರಾಜ್ಯದ ಕಾರ್ಮಿಕರಿಗೆ ತಮ್ಮ ಊರುಗಳಿಗೆ ಪ್ರಯಾಣಿಸಲು ಉಚಿತ ಬಸ್‌ ರೈಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಲ್ಲದೆ ಅವರಿಗೆ ಊಟ ತಿಂಡಿ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.

ಆದರೆ ಕರ್ನಾಟಕದಲ್ಲಿ ಉಚಿತ ಪ್ರಯಾಣದ ಬದಲು ಬಸ್‌ ದರವನ್ನೇ ಹೆಚ್ಚಳಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಯಾವುದೇ ಸಾಮಾಜಿಕ ಅಂತರ ಕೂಡಾ ಇಲ್ಲಿ ಪಾಲನೆಯಾಗುತ್ತಿಲ್ಲ. ಈ ಕುರಿತಾಗಿ ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯತನ ಇಲ್ಲಿ ಎದ್ದು ಕಾಣುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ