ಆ್ಯಪ್ನಗರ

ಕೊರೊನಾ ನಿರ್ವಹಣೆಗೆ ವಾರ್‌ ರೂಂ, ಪರಿಶೀಲನೆ ನಡೆಸಿದ ಬಿಎಸ್‌ವೈ

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಬೆಂಗಳೂರಿನ ಬಿಬಿಎಂಪಿಯಲ್ಲಿ ವಾರ್ ರೂಂ ತೆರೆದಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಂಗಳವಾರ ವಾರ್‌ ರೂಂ ಪರಿಶೀಲನೆ ನಡೆಸಿದರು.

Vijaya Karnataka Web 24 Mar 2020, 5:51 pm
ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲವೊಂದು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಪರಿಸ್ಥಿತಿ ನಿರ್ವಹಣೆ ಮಾಡಲು ವಾರ್‌ ರೂಂ ತೆರೆದಿದೆ. ಬೆಂಗಳೂರಿನ ಬಿ.ಬಿ.ಎಂ.ಪಿಯಲ್ಲಿ ಹೊಸತಾಗಿ ನಿರ್ಮಾಣ ಮಾಡಿರುವ ವಾರ್‌ರೂಂ ಅನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಂಗಳವಾರ ಪರಿಶೀಲನೆ ನಡೆಸಿದರು.
Vijaya Karnataka Web war room


ವೈದ್ಯಕೀಯ ಸಚಿವ ಡಾ. ಕೆ ಸುಧಾಕರ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್ ಹಾಗೂ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೊತೆಗೂಡಿ ವಾರ್‌ ರೂಂನ್ನು ಸಿಎಂ ಬಿಎಸ್‌ವೈ ಪರಿಶೀಲನೆ ನಡೆಸಿದರು.

ಕೋವಿಡ್‌ -19 ನಿರ್ವಹಣೆಯ ಹೊಣೆ ಸುಧಾಕರ್ ಹೆಗಲಿಗೆ - ಸರ್ಕಾರದ ಮಹತ್ವದ ನಿರ್ಧಾರ

ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಲ್ಲವನ್ನೂ ನಿರ್ವಹಣೆ ಮಾಡಲು ವಾರ್‌ ರೂಂ ತೆರೆಯಲಾಗಿದೆ. ಇಲ್ಲಿ ವಿವಿಧ ವಿಭಾಗಗಳ ತಜ್ಞರು ಒಂದು ಕಡೆ ಇದ್ದು ಎಲ್ಲವನ್ನೂ ನಿರ್ವಹಣೆ ಮಾಡುತ್ತಾರೆ.

ರಾಜ್ಯದಲ್ಲಿ ಮಾರ್ಚ್ 24 ರ ವರೆಗೆ ಕೋವಿಡ್‌ -19 ಸೋಂಕು 38 ಜನರಲ್ಲಿ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಚ್ಚಿನ ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡಿದೆ. ಕೋವಿಡ್‌-19 ನಿರ್ವಹಣೆಯ ಸಂಪೂರ್ಣ ಹೊಣೆಗಾರಿಕೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರಿಗೆ ವಹಿಸಲಾಗಿದೆ.

ರಾಜ್ಯಾದ್ಯಂತ ಮಾರ್ಚ್‌ 31 ರ ವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಲಾಗಿದ್ದು, ಯಾರೂ ಮನೆಯಿಂದ ಹೊರಬಾರದಂತೆ ಆದೇಶ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ