ಆ್ಯಪ್ನಗರ

ಕೊರೊನಾ ಸಂಕಷ್ಟ: ವಿದೇಶದಲ್ಲಿರುವ ಕನ್ನಡಿಗರನ್ನು ಕರೆತರಲು ಸಿದ್ಧತೆ

ಕೊಲ್ಲಿ ರಾಷ್ಟ್ರಗಳು ಸೇರಿದಂತೆ ವಿದೇಶದಲ್ಲಿರುವ ಕನ್ನಡಿಗರನ್ನು ರಾಜ್ಯಕ್ಕೆ ವಾಪಸ್‌ ಕರೆತರಲು ಸರ್ಕಾರ ಮುಂದಾಗಿದೆ. ಮೇ 7 ರಿಂದ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದ್ದು ಸುಮಾರು 64 ವಿಮಾನಗಳಲ್ಲಿ ಪ್ರಯಾಣಿಕರನ್ನು ಕರೆತರಲಾಗುತ್ತದೆ.

Vijaya Karnataka Web 5 May 2020, 3:58 pm
ಬೆಂಗಳೂರು: ಕೊರೊನಾ ಲಾಕ್‌ಡೌನ್ ಪರಿಣಾಮ ವಿದೇಶದಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರನ್ನು ಕರೆತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಮೇ 7 ರಿಂದ ಈ ಕುರಿತಾದ ಪ್ರಕ್ರಿಯೆಗಳು ಆರಂಭಗೊಳ್ಳಲಿದ್ದು, 64 ವಿಮಾನಗಳಲ್ಲಿ ಬೆಂಗಳೂರು ಹಾಗೂ ಮಂಗಳೂರಿಗೆ ಕನ್ನಡಿಗ ಪ್ರಯಾಣಿಕರನ್ನು ಕರೆತರಲು ಸರ್ಕಾರ ಮುಂದಾಗಿದೆ.
Vijaya Karnataka Web flight


ಕೊಲ್ಲಿ ರಾಷ್ಟ್ರಗಳು ಸೇರಿದಂತೆ ಯುರೋಪ್‌ ರಾಷ್ಟ್ರಗಳಲ್ಲೂ ಸಾಕಷ್ಟು ಸಂಖ್ಯೆಯ ಕನ್ನಡಿಗರು ಉದ್ಯೋಗದಲ್ಲಿದ್ದಾರೆ. ಕೊರೊನಾ ಕಾರಣದಿಂದಾಗಿ ಅವರೆಲ್ಲರೂ ಸಂಕಷ್ಟದಲ್ಲಿದ್ದಾರೆ. ಹಲವು ಮಂದಿ ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಲಾಕ್‌ಡೌನ್ ಪರಿಣಾಮ ಅಂತರಾಷ್ಟ್ರೀಯ ವಿಮಾನ ಸಂಚಾರ ಸ್ಥಗಿತಗೊಂಡು ಅವರು ಭಾರತಕ್ಕೆ ವಾಪಸ್‌ ಆಗಲು ಸಾಧ್ಯವಾಗಿಲ್ಲ. ಇದರಿಂದ ಅವರ ಕುಟುಂಬಸ್ಥರೂ ಆತಂಕಕ್ಕೆ ಒಳಗಾಗಿದ್ದಾರೆ.

ಧಾರಾವಾಹಿ ಶೂಟಿಂಗ್‌‌ಗೆ ಅವಕಾಶ ನೀಡಿದ ಸರ್ಕಾರ; ಆದರೆ ಸಿನಿಮಾ, ರಿಯಾಲಿಟಿ ಶೋ ಮಾತ್ರ ಬೇಡ ಎಂದಿದ್ದೇಕೆ?

ಈ ನಿಟ್ಟಿನಲ್ಲಿ ಸುಮಾರು 10,000 ಮಂದಿಯನ್ನು ರಾಜ್ಯಕ್ಕೆ ಕರೆತರಲು ಸರ್ಕಾರ ಮುಂದಾಗಿದೆ ಎಂದು ಬೆಂಗಳೂರು ಜಿಲ್ಲಾಧಿಕಾರಿ ರವೀಂದ್ರ ಅವರು ಮಾಹಿತಿ ನೀಡಿದ್ದಾರೆ. ಬರಲಿರುವ ಪ್ರಯಾಣಿಕರ ಪೈಕಿ ಎ,ಬಿ,ಸಿ ಎಂಬ ವಿಂಗಡನೆಯನ್ನು ಮಾಡಲಾಗುತ್ತದೆ. ಎ ಕೆಟಗರಿಗೆ ಒಳಪಡುವ ಪ್ರಯಾಣಿಕರಿಗೆ ಬೆಂಗಳೂರು ನಗರದಲ್ಲಿ ಕ್ವಾರಂಟೈನ್ ಮಾಡಲಾಗುತ್ತದೆ. ಬಿ ಹಾಗೂ ಸಿ ವಿಭಾಗದಲ್ಲಿ ಬರುವ ಪ್ರಯಾಣಿಕರನ್ನು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಕ್ವಾರಂಟೈನ್ ಮಾಡಲು ಸರ್ಕಾರ ಮುಂದಾಗಿದೆ.

ಬೆಂಗಳೂರು ಪಾಲಿಗೆ ವರದಾನವಾಯ್ತು ಲಾಕ್‌ಡೌನ್; ಏಕೆ ಅಂತೀರಾ?

ಇದಕ್ಕಾಗಿ ಹೊಟೇಲ್‌ಗಳನ್ನು ಹಾಗೂ ಕಲ್ಯಾಣ ಮಂಟಪಗಳನ್ನು ಕಾಯ್ದಿರಿಸಲಾಗಿದೆ. ವಿದೇಶದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರು ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ