ಆ್ಯಪ್ನಗರ

ಕೊರೊನಾ ವಾರಿಯರ್ಸ್ ಗಳಾಗಿ ದುಡಿಯುತ್ತಿರುವ ಗ್ರಾ.ಪಂ. ಸಿಬ್ಬಂದಿಗಳಿಗೂ 30 ಲಕ್ಷ ರೂ.ಪರಿಹಾರ!

ಕೊರೊನಾ ವಾರಿಯರ್ಸ್​​ಗಳಾಗಿ ದುಡಿಯುತ್ತಿರುವವರು ಗ್ರಾಪಂ ಸಿಬ್ಬಂದಿಗಳು ಕೋವಿಡ್ ಸೋಂಕಿಗೆ ಮೃತರಾದಲ್ಲಿ 30 ಲಕ್ಷ ರೂಪಾಯಿ ಪರಿಹಾರ ಒದಗಿಸುವ ಸಂಬಂಧ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Vijaya Karnataka Web 1 Sep 2020, 7:29 am
ಬೆಂಗಳೂರು: ಕೊರೊನಾ ನಿಯಂತ್ರಣ ಕಾರ್ಯಕ್ರಮಗಳಿಗೆ ಗ್ರಾಮ ಪಂಚಾಯಿತಿಗಳಿಂದ ನಿಯೋಜಿತ ಸಿಬ್ಬಂದಿ ರೋಗಪೀಡಿತರ ಸಂಪರ್ಕದಿಂದ ಮರಣ ಹೊಂದಿದಲ್ಲಿ 30 ಲಕ್ಷ ರೂ. ಪರಿಹಾರ ನೀಡುವ ಸಂಬಂಧ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


ಜಿಲ್ಲಾ ಆರೋಗ್ಯಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಪ್ರಮಾಣಿಕರಿಸಿದಲ್ಲಿ ಅಂತಹವರ ಕುಟುಂಬಕ್ಕೆ 30 ಲಕ್ಷ ರೂ.ಗಳನ್ನು ಜಿಲ್ಲಾಇಲ್ಲವೇ ತಾಲೂಕು ಪಂಚಾಯಿತಿಗಳಲ್ಲಿ ಲಭ್ಯವಿರುವ ಅನುದಾನದಿಂದ ಈ ವೆಚ್ಚ ಭರಿಸಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಗ್ರಾಮ ಪಂಚಾಯಿತಿಗಳ ಬಿಲ್‌ ಕಲೆಕ್ಟರ್‌, ಕ್ಲರ್ಕ್, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‌, ವಾಟರ್‌ಮೆನ್‌/ಪಂಪ್‌ ಆಪರೇಟರ್‌/ಪಂಪ್‌ ಮೆಕ್ಯಾನಿಕ್‌/, ಜವಾನ ಮತ್ತು ಸ್ವಚ್ಛತಾಗಾರರಿಗೆ ಈ ಆದೇಶ ಅನ್ವಯವಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ