ಆ್ಯಪ್ನಗರ

ಪರಂ, ಡಿಕೆಶಿ ಮೇಲೆ ಐಟಿ ದಾಳಿ- ಅನುಮಾನ ವ್ಯಕ್ತಪಡಿಸಿದ ದೇವೇಗೌಡರು

ಪರಮೇಶ್ವರ್ ಹಾಗೂ ಡಿಕೆ ಶಿವಕುಮಾರ್ ಅವರ ಮೇಲೆ ನಡೆದ ಐಟಿ ದಾಳಿಯ ಬಗ್ಗೆ ಅನುಮಾನಗಳಿವೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ.

Vijaya Karnataka Web 13 Oct 2019, 3:41 pm
ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡರಾದ ಪರಮೇಶ್ವರ್ ಹಾಗೂ ಡಿಕೆ ಶಿವಕುಮಾರ್ ಅವರ ಮೇಲಿನ ಐಟಿ ದಾಳಿಯ ಬಗ್ಗೆ ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರು ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಎಚ್‌ಡಿಡಿ, ಆದಾಯ ತೆರಿಗೆ ಇಲಾಖೆಯ ದಾಳಿ ಅನುಮಾನಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.
Vijaya Karnataka Web hdd


ತೆರಿಗೆ ವಂಚನೆ ಹಾಗೂ ಹಣಕಾಸು ವ್ಯವಹಾರ ಕುರಿತಾದ ಮಾಹಿತಿ ಆಧಾರದಲ್ಲಿ ಆದಾಯ ತೆರಿಗೆ ಇಲಾಖೆ ಮಾಜಿ ಡಿಸಿಎಂ ಪರಮೇಶ್ವರ್ ಅವರಿಗೆ ಸೇರಿರುವ ಶಿಕ್ಷಣ ಸಂಸ್ಥೆಗಳು ಹಾಗೂ ಆಪ್ತರ ನಿವಾಸಗಳ ಮೇಲೆ ದಾಳಿ ನಡೆಸಿದೆ. ಐಟಿ ದಾಳಿ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು. ದಾಳಿಗೆ ಬೆನ್ನಲ್ಲೇ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿದ್ದಾರೆ.

ಐಟಿ ದಾಳಿಗೂ, ಪರಂ ಪಿಎ ಆತ್ಮಹತ್ಯೆಗೂ ಸಂಬಂಧವಿಲ್ಲ- ಪ್ರಹ್ಲಾದ್ ಜೋಶಿ

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು, ರಾಜ್ಯದಲ್ಲಿ 300 ಮೆಡಿಕಲ್ ಕಾಲೇಜುಗಳಿವೆ. ಈ ಪೈಕಿ ಶೇ. 80 ರಷ್ಟು ಕಾಲೇಜುಗಳು ನಿಯಮಾವಳಿಗಳ ಪ್ರಕಾರ ಕಾರ್ಯನಿರ್ವಹಿಸುವುದಿಲ್ಲ. ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳು ಅವರ ತಂದೆಯ ಕಾಲದ್ದಾಗಿದೆ. ಇದೀಗ ಪರಮೇಶ್ವರ್ ಅವರು ಅದನ್ನು ನಡೆಸುತ್ತಿದ್ದಾರೆ ಎಂದರು.

ಆತ್ಮಹತ್ಯೆಗೆ ಶರಣಾದ ಪರಂ ಪಿಎ ಅಂತ್ಯಸಂಸ್ಕಾರ: ರಮೇಶ್ ಮಕ್ಕಳನ್ನು ಅಪ್ಪಿ ಸಾಂತ್ವನ ಹೇಳಿದ ಮಾಜಿ ಡಿಸಿಎಂ

ಮೈತ್ರಿ ಸರಕಾರದ ಸಂದರ್ಭದಲ್ಲಿ ಪರಮೇಶ್ವರ್ ಅವರು ಅಂದಿನ ಸಿಎಂ ಎಚ್. ಡಿ ಕುಮಾರಸ್ವಾಮಿ ಜೊತೆಗೆ ಉತ್ತಮ ಸಂಪರ್ಕದಲ್ಲಿದ್ದರು. ಆದರೆ ಯಾವ ಕಾರಣಕ್ಕಾಗಿ ಅವರ ಮೇಲೆ ಐಟಿ ದಾಳಿ ನಡೆಸಲಾಗಿದೆ ಎಂಬುವುದು ಗೊತ್ತಿಲ್ಲ ಎಂದಿದ್ದಾರೆ.

ಇದೇ ವೇಳೆ ರಾಜ್ಯ ಸರಕಾರದಿಂದ ಮಾಧ್ಯಮ ನಿರ್ಬಂಧ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸರಕಾರಿ ಕಾರ್ಯಕ್ರಮಗಳಿಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯಮಂತ್ರಿಗಳಿಗೆ ಈ ಕುರಿತಾಗಿ ಪತ್ರ ಬರೆಯುತ್ತೇನೆ. ಇದೆ ರೀತಿ ಮುಂದುವರೆದರೆ ನಾನು ನಿಮ್ಮ ಜೊತೆ ಮತ್ತೊಮ್ಮೆ ಉಗ್ರವಾಗಿ ಪ್ರತಿಭಟನೆ ನಡೆಸುವ ತೀರ್ಮಾನ ಮಾಡುತ್ತೇನೆ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ