ಆ್ಯಪ್ನಗರ

‘ಅಪ್ಪ-ಮಗನನ್ನು ಗೆಲ್ಲಿಸಲು ಸಾಧ್ಯವಾಗದ ಎಚ್‌ಡಿಕೆಗೆ ಇನ್ನೂ ಬುದ್ಧಿ ಬಂದಿಲ್ಲ’ ಈಶ್ವರಪ್ಪ ಕಿಡಿ

ಲೋಕಸಭಾ ಚುನಾವಣೆಯಲ್ಲಿ ಅಪ್ಪ ಹಾಗೂ ಮಗನನ್ನು ಗೆಲ್ಲಿಸಲು ಸಾಧ್ಯವಾಗದ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಇನ್ನೂ ಬುದ್ಧಿ ಬಂದಿಲ್ಲ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.

Vijaya Karnataka Web 24 Dec 2019, 10:19 am
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರನ್ನು ಹಾಗೂ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಗೆಲ್ಲಿಸಲು ಸಾಧ್ಯವಾಗದ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಮುಂದಿನ ದಿನಗಳಲ್ಲಿ ಅಡ್ರಸ್ ಹುಡುಕಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್‌ ಈಶ್ವರಪ್ಪ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿಗೆ ಇನ್ನೂ ಬುದ್ಧಿ ಬಂದಿಲ್ಲ ಎಂದು ವಾಗ್ದಾಳಿ ನಡೆಸಿದರು.
Vijaya Karnataka Web karnataka minister k s eshwarappa slams on h d kumaraswamy
‘ಅಪ್ಪ-ಮಗನನ್ನು ಗೆಲ್ಲಿಸಲು ಸಾಧ್ಯವಾಗದ ಎಚ್‌ಡಿಕೆಗೆ ಇನ್ನೂ ಬುದ್ಧಿ ಬಂದಿಲ್ಲ’ ಈಶ್ವರಪ್ಪ ಕಿಡಿ


ಜೆಡಿಎಸ್‌ಗೆ ಅಡ್ರಸ್ ಇಲ್ಲದ ಹಾಗಾಗುತ್ತದೆ ಎಂಬ ಬಿಎಸ್‌ವೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಎಚ್‌ಡಿಕೆ ಶೀಘ್ರದಲ್ಲೇ ಬಿಎಸ್‌ವೈಯವರು ಜೆಡಿಎಸ್ ಅಡ್ರಸ್ ಹುಡುಕಿಗೊಂಡು ಬರುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದಿದ್ದರು. ಇದಕ್ಕೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಜೆಡಿಎಸ್‌ಗೆ ತಮ್ಮ ಪಕ್ಷದ ವರಿಷ್ಠರನ್ನೇ ಗೆಲ್ಲಿಸಲು ಸಾಧ್ಯವಾಗಿಲ್ಲ ಎಂದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಅವರು, ಕಾಂಗ್ರೆಸ್ ಲೋಕಸಭಾ, ವಿಧಾನಸಭಾ ಹಾಗೂ ಉಪಚುನಾವಣೆಯಲ್ಲೂ ಹೀನಾಯವಾಗಿ ಸೋತಿದೆ. ಹೀಗಿರುವಾಗ ಜಾರ್ಖಂಡ್ ಚುನಾವಣೆಯ ಫಲಿತಾಂಶವನ್ನು ಮುಂದಿಟ್ಟುಕೊಂಡು ದೇಶದಲ್ಲಿ ಬಿಜೆಪಿ ನಶಿಸುತ್ತಿದೆ ಎಂದು ಹೇಳುವುದು ಹಾಸ್ಯಾಸ್ಪದ. ದೇಶದ ಎಲ್ಲಾ ಕಡೆಗಳಲ್ಲಿ ಕಾಂಗ್ರೆಸ್ ನಶಿಸುತ್ತಿದೆ ಎಂದರು.

ತೇಜಸ್ವಿ ಸೂರ್ಯ "ಪಂಕ್ಚರ್‌" ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ, ಟ್ರೋಲ್

ಜಾರ್ಖಂಡ್‌ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಜಾರ್ಖಂಡ್‌ನಲ್ಲಿ ಬಿಜೆಪಿ ನಿರೀಕ್ಷೆಗೆ ತಕ್ಕ ಫಲಿತಾಂಶ ಬಂದಿಲ್ಲ ಎಂದು ಒಪ್ಪಿಕೊಂಡಿದ್ದಾರೆ.

ಶೀಘ್ರದಲ್ಲೇ ಸಂಪುಟ ವಿಸ್ತರಣೆ

ಕಾಂಗ್ರೆಸ್‌ ಮುಕ್ತ ಎನ್ನುತ್ತಿದ್ದ ಬಿಜೆಪಿಯನ್ನೇ ಜನ ದೇಶದಿಂದ ಮುಕ್ತ ಮಾಡುತ್ತಿದ್ದಾರೆ: ಉಗ್ರಪ್ಪ ವ್ಯಂಗ್ಯ

ಉಪಚುನಾವಣೆಯಲ್ಲಿ ಗೆದ್ದ ನೂತನ ಬಿಜೆಪಿ ಶಾಸಕರಿಗೆ ಸಚಿವ ಸ್ಥಾನ ನೀಡುವ ನಿಟ್ಟಿನಲ್ಲಿ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಈಶ್ವರಪ್ಪ ಹೇಳಿದ್ದಾರೆ. ಮೈತ್ರಿ ಸರಕಾರದಿಂದ ಹೊರಬಂದು ಬಿಜೆಪಿಗೆ ಸೇರ್ಪಡೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡುತ್ತೇವೆ. ಈಗಾಗಲೇ ಸಿಎಂ ಬಿಎಸ್‌ವೈ ಎಲ್ಲರಿಗೂ ಆಶ್ವಾಸನೆ ನೀಡಿದ್ದಾರೆ. ಅದರಂತೆ ನಾವು ನಡೆದುಕೊಳ್ಳುತ್ತೇವೆ. ಬಿಜೆಪಿ ಕೇಂದ್ರದ ಮುಖಂಡರ ಜೊತೆಗೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ