ಆ್ಯಪ್ನಗರ

ಎಚ್ಚರ..ಎಚ್ಚರ.. ರಾಜ್ಯದಲ್ಲಿ 500 ಗಡಿ ದಾಟಿದ ಕೊರೊನಾ ಸೋಂಕು ಪ್ರಕರಣ ಸಂಖ್ಯೆ!

ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ತನ್ನ ಆರ್ಭಟವನ್ನು ಹೆಚ್ಚಿಸಿದೆ. ದಿನದಿಂದ ದಿನಕ್ಕೆ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಇಂದು(ಜೂನ್ 11-ಶನಿವಾರ) ಒಟ್ಟು 562 ಸಕ್ರಿಯ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ರಾಜಧಾನಿ ಬೆಂಗಳೂರಿನಲ್ಲೇ 545 ಪ್ರಕರಣಗಳು ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಸೋಂಕು ಪ್ರಕರಣಗಳ ಸಂಖ್ಯೆಯ ಮಾಹಿತಿ ಇಲ್ಲಿದೆ.

Authored byನಿಖಿಲ್\u200c ಕುಲಕರ್ಣಿ | Vijaya Karnataka Web 11 Jun 2022, 9:02 pm

ಹೈಲೈಟ್ಸ್‌:

  • ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ.
  • ರಾಜ್ಯದಲ್ಲಿ 500ರ ಗಡಿ ದಾಟಿದ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ.
  • ಒಂದೇ ದಿನ ಒಟ್ಟು 562 ಸಕ್ರಿಯ ಸೋಂಕು ಪ್ರಕರಣಗಳು ದಾಖಲು.
  • ರಾಜಧಾನಿ ಬೆಂಗಳೂರಿನಲ್ಲೇ 545 ಸೋಂಕು ಪ್ರಕರಣ ಪತ್ತೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web coronavirus
ಸಾಂದರ್ಭಿಕ ಚಿತ್ರ
ಬೆಂಗಳೂರು: ಹೋದೆಯಾ ಪಿಶಾಚಿ ಎಂದರೆ ಬಂದೆ ಗವಾಕ್ಷಿ ಎಂಬಂತೆ, ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ತನ್ನ ಆರ್ಭಟವನ್ನು ಹೆಚ್ಚಿಸಿದೆ. ದಿನದಿಂದ ದಿನಕ್ಕೆ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಇಂದು(ಜೂನ್ 11-ಶನಿವಾರ) ಒಟ್ಟು 562 ಸಕ್ರಿಯ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ರಾಜಧಾನಿ ಬೆಂಗಳೂರಿನಲ್ಲೇ 545 ಪ್ರಕರಣಗಳು ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯ ಸರ್ಕಾರದ ಸತತ ಪ್ರಯತ್ನಗಳ ಹೊರತಾಗಿಯೂ, ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ರಾಜ್ಯದ ಒಟ್ಟಾರೆ ಕೊರೊನಾ ಸೋಂಕು ಪ್ರಕರಣಗಳ ಪೈಕಿ ಬೆಂಗಳೂರಿನದ್ದೇ ಸಿಂಹಪಾಲು ಎಂಬುದು, ರಾಜಧಾನಿ ಜನರ ನಿದ್ದೆಗೆಡೆಸಿದೆ.

ತಪ್ಪದ ಕೋವಿಡ್ ಕಾಟ: ವೈರಸ್ ಮಣಿಸಲು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ!
ಇನ್ನುಳಿದಂತೆ ಅರಮನೆ ನಗರಿ ಮೈಸೂರಿನಲ್ಲಿ 4, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಸಕ್ರಿಯ ಸೋಂಕು ಪ್ರಕರಣಗಳು ದಾಖಲಾಗಿವೆ. ಅದರಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 2, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಹಾಸನ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದು ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಉಳಿದ ಬಾಕಿ ಜಿಲ್ಲೆಗಳಲ್ಲಿ ಶೂನ್ಯ ಸೋಂಕು ಪ್ರಕರಣ ದಾಖಲಾಗಿದ್ದರೂ, ಹೆಚ್ಚುತ್ತಿರುವ ಕೋವಿಡ್ ಹಾವಳಿಯಿಂದಾಗಿ ಈ ಜಿಲ್ಲೆಗಳ ಜನರೂ ಎಚ್ಚರದಿಂದ ಇರಬೇಕಿದೆ.

ರಾಜ್ಯದಲ್ಲಿ ಕೋವಿಡ್ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜನತೆ ಈ ಮಾರ್ಗಸೂಚಿಗಳನ್ನು ಯಾವುದೇ ಉದಾಸೀನ ತೋರದೇ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದೆ.

ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ಕೊರೊನಾ ಸಂಖ್ಯೆ: ಗುರುವಾರ 500ರ ಗಡಿ ಸಮೀಪಿಸಿದ ಸೋಂಕು
ಕೋವಿಡ್ ಹಾವಳಿ ತಪ್ಪಿಸಲು ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವ ನಿರ್ಧಾರ ಮಾಡುವ ಮೊದಲು, ಜನತೆ ಈ ಸಮಸ್ಯೆಯ ಗಂಭೀರತೆಯನ್ನು ಅರಿತು ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಕೋವಿಡ್ ಹಾವಳಿ ನಿಯಂತ್ರಣಕ್ಕೆ ಕೈಜೋಡಿಸಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ