ಆ್ಯಪ್ನಗರ

ಚಿಕ್ಕಮಗಳೂರು ಎಸ್‌ಪಿ ಅಣ್ಣಾಮಲೈ ಬೆಂಗಳೂರಿಗೆ ವರ್ಗ

ಖಡಕ್‌ ಪೊಲೀಸ್‌ ಅಧಿಕಾರಿಗಳು ಎಂದು ಹೆಸರು ಮಾಡಿದ್ದವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಎಸ್‌ಪಿ ಅಣ್ಣಾಮಲೈ ಸೇರಿ ಐವರು ಅಧಿಕಾರಿಗಳನ್ನು ಸರಕಾರ ವರ್ಗಾವಣೆ ಮಾಡಿದೆ.

Vijaya Karnataka Web 16 Oct 2018, 3:44 pm
ಬೆಂಗಳೂರು: ಕರ್ನಾಟಕ ಸಿಂಗಂ ಎಂದೇ ಹೆಸರು ಗಳಿಸಿದ್ದ ಕೆ. ಅಣ್ಣಾಮಲೈ ಅವರನ್ನು ಸರಕಾರ ಬೆಂಗಳೂರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
Vijaya Karnataka Web annamalai


ಚಿಕ್ಕಮಗಳೂರು ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹರಿಶೇಖರನ್‌, ಅಜಯ್ ಹಿಲೋರಿ, ರಾಹುಲ್‌ ಕುಮಾರ್‌ ಹಾಗೂ ಹರೀಶ್‌ ಪಾಂಡೆ ಅವರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ಪ್ರಧಾನ ಕಚೇರಿಯಲ್ಲಿ ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹರಿಶೇಖರನ್‌ ಅವರನ್ನು ಟ್ರಾಫಿಕ್‌ ವಿಭಾಗದ ಐಜಿಪಿ ಹಾಗೂ ಹೆಚ್ಚುವರಿಯಾಗಿ ಎಸಿಪಿಯಾಗಿ ಜವಾಬ್ದಾರಿ ನೀಡಲಾಗಿದೆ. ಈ ಹುದ್ದೆಯಲ್ಲಿ ಈ ವರೆಗೆ ಕಾರ್ಯನಿರ್ವಹಿಸುತ್ತಿದ್ದ ಆರ್‌. ಹಿತೇಂದ್ರ ಅವರು ವರ್ಗಾವಣೆಯಾಗಿದ್ದರು.

ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿದ್ದ ಅಜಯ್‌ ಹಿಲೋರಿ ಅವರನ್ನು ಕೆಎಸ್‌ಆರ್‌ಪಿಯ 1ನೇ ಬೆಟಾಲಿಯನ್‌ನ ಕಮಾಂಡೆಂಟ್‌ ಆಗಿ ವರ್ಗಾವಣೆ ಮಾಡಲಾಗಿದೆ. ಅಜಯ್‌ ಹಿಲೋರಿ ಅವರ ಜಾಗಕ್ಕೆ ರಾಹುಲ್‌ ಕುಮಾರ್‌ ಅವರನ್ನು ನೇಮಿಸಲಾಗಿದೆ. ಅಣ್ಣಾಮಲೈ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಸಿಐಡಿಯಲ್ಲಿ ಎಸ್‌ಪಿಯಾಗಿದ್ದ ಹರೀಶ್‌ ಪಾಂಡೆ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಅಧಿಕಾರಿಗಳನ್ನು ಸರಕಾರ ಮನಬಂದಂತೆ ವರ್ಗಾವಣೆ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಕೆಲ ದಿನಗಳ ಹಿಂದೆ ಅನೇಕ ಐಎಎಸ್‌ ಅಧಿಕಾರಿಗಳನ್ನೂ ಏಕಾಏಕಿ ವರ್ಗಾವಣೆ ಮಾಡಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ