ಆ್ಯಪ್ನಗರ

ಆಗಸ್ಟ್‌ 10ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ: ಶಿಕ್ಷಣ ಸಚಿವರ ಸ್ಪಷ್ಟನೆ!

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಆ.7ಕ್ಕೆ ಪ್ರಕಟವಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಸ್ವತಃ ಸಚಿವ ಸುರೇಶ್​ ಕುಮಾರ್​ ಅವರು ಪ್ರತಿಕ್ರಿಯಿಸಿದ್ದು, ಆಗಸ್ಟ್‌ 10ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Vijaya Karnataka Web 7 Aug 2020, 4:18 pm
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಆ.7ಕ್ಕೆ ಪ್ರಕಟವಾಗಲಿದೆ ಎಂಬ ಸುದ್ದಿ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Vijaya Karnataka Web s suresh kumar


ಈ ಕುರಿತು ಸ್ವತಃ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು, ನಾಳೆಯೇ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಆಗಸ್ಟ್‌ 10ರಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಕರೊನಾ ಆತಂಕದ ನಡುವೆಯೂ 2019-20ನೇ ಸಾಲಿನ ಎಸ್ಎಸ್‌ಎಲ್ಸಿ ಪರೀಕ್ಷೆ ಬರೆದಿದ್ದಾರೆ.

ಗುಜರಾತ್ ಆಸ್ಪತ್ರೆ ಅಗ್ನಿ ದುರಂತದಲ್ಲಿ 8 ಮಂದಿ ಸಜೀವ ದಹನ.! ಪ್ರಧಾನಿ ಮೋದಿ ಸಂತಾಪ

ಪ್ರಸ್ತಕ ವರ್ಷದಲ್ಲಿ ಮಂಡಳಿಯು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾರ್ಚ್‌ ಮತ್ತು ಏಪ್ರಿಲ್‌ನಲ್ಲಿ ಪರೀಕ್ಷೆ ನಡೆಸಬೇಕಿತ್ತು. ಆದರೆ ಕೋವಿಡ್ ಪರಿಣಾಮ ಪರೀಕ್ಷೆ ನಡೆಸಲು ತೊಂದರೆ ಉಂಟಾಗಿತ್ತು. ನಂತರದಲ್ಲಿ ಪರೀಕ್ಷೆಯನ್ನು ಜೂನ್‌ 25 ರಿಂದ ಜುಲೈ 04 ರವರೆಗೆ ನಡೆಸಲಾಗಿತ್ತು. ಕೆಲವು ಕೋವಿಡ್‌-19 ಸೋಂಕಿತ ವಿದ್ಯಾರ್ಥಿಗಳು ಸಹ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದಿದ್ದರು. ಇವರೆಲ್ಲರೂ ಫಲಿತಾಂಶಕ್ಕಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಆ.7 ರಂದು ಬಿಡುಗಡೆ ಸಾಧ್ಯತೆ

ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್‌ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ಇತ್ತೀಚಿಗಷ್ಟೇ ಹೇಳಿದ್ದರು. ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ರಾಜ್ಯದ ಎಲ್ಲ ಕೇಂದ್ರಗಳಲ್ಲೂ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟವಷ್ಟೇ ಬಾಕಿ ಇದೆ.

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ಫಲಿತಾಂಶ ಪ್ರಕಟಿಸಿದ ನಂತರ, ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ಅನ್ನು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಚೆಕ್‌ ಮಾಡಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ