ಆ್ಯಪ್ನಗರ

ಪ್ರವಾಹದ ಎಫೆಕ್ಟ್, ಬೆಳಗಾವಿ ಅಧಿವೇಶನ ಶಿಫ್ಟ್ !

ಪ್ರವಾಹ ಪರಿಹಾರ ಕಾರ್ಯಕ್ಕೆ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಬೆಳಗಾವಿಯಲ್ಲಿ ಈ ಬಾರಿ ನಡೆಯಬೇಕಾಗಿದ್ದ ಅಧಿವೇಶವನ್ನು ಬೆಂಗಳೂರಿಗೆ ಶಿಫ್ಟ್ ಮಾಡುವ ಕುರಿತಾಗಿ ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಹಿರಿಯ ಸಚಿವರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Vijaya Karnataka Web 16 Sep 2019, 8:19 pm
ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ತಲೆಧೋರಿದ್ದ ಪ್ರವಾಹದ ಎಫೆಕ್ಟ್ ಬೆಳಗಾವಿ ಅಧಿವೇಶನಕ್ಕೂ ತಟ್ಟಿದೆ. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಬೇಕಾಗಿದ್ದ ಅಧಿವೇಶ ಅಕ್ಟೋಬರ್ 14 ರಿಂದ 21 ರವರೆಗೆ ಬೆಂಗಳೂರಿನಲ್ಲೇ ನಡೆಯಲಿದೆ.
Vijaya Karnataka Web cm bsy


ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಹಿರಿಯ ಸಚಿವರ ಸಭೆಯಲ್ಲಿಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆ ಪ್ರವಾಹ ಪೀಡಿತವಾಗಿದ್ದು, ಅಧಿವೇಶನ ನಡೆಸಿದರೆ ಪರಿಹಾರ ಕಾರ್ಯಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಬೆಂಗಳೂರಿನಲ್ಲೇ ಅಧಿವೇಶನ ನಡೆಸಲಾಗುತ್ತದೆ. ಹೀಗಾಗಿ ಮುಂದಿನ ವರ್ಷದ ನವೆಂಬರ್‌ ವರೆಗೂ ಬೆಳಗಾವಿ ಸುವರ್ಣಸೌಧ ಸರಕಾರದ ಯಾವುದೇ ಚಟುವಟಿಕೆಗೂ ಬಳಕೆಯಾಗುವುದಿಲ್ಲ.

ಸರಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನವನ್ನು ಸರಕಾರ ಬೆಂಗಳೂರಿಗೆ ವರ್ಗಾಯಿಸಲು ಮುಂದಾಗಿದ್ದು ಆ ಭಾಗದ ಜನರಿಗೆ ಬಗೆದ ದ್ರೋಹವಾಗಿದೆ ಎಂದಿದೆ. ನೆರೆ, ಬರ ಪೀಡಿತ ಜನರ ಪ್ರತಿಭಟನೆ ಎದುರಿಸಲಾಗದೆ ಭಯದಿಂದ ಅಧಿವೇಶವನ್ನು ಬೆಳಗಾವಿಯಲ್ಲಿ ನಡೆಸುತ್ತಿಲ್ಲ ಎಂದು ಸರಕಾರ ನಿರ್ಧಾರವನ್ನು ಕಾಂಗ್ರೆಸ್ ವಿರೋಧಿಸಿದೆ.


ಇನ್ನು, ಈ ಬಾರಿ ಪೂರಕ ಬಜೆಟ್‌ ಮಂಡಿಸಲು ಯಡಿಯೂರಪ್ಪ ನಿರ್ಧರಿಸಿದ ಹಿನ್ನೆಲೆಯಲ್ಲಿ ಹೊಸ ಬಜೆಟ್‌ ನಿರೀಕ್ಷೆ ಹುಸಿಯಾಗಿದೆ. ಸೆ.18ರಂದು ನಡೆಯುವ ಸಂಪುಟ ಸಭೆಯಲ್ಲಿಈ ಬಗ್ಗೆ ಅಧಿಕೃತ ನಿರ್ಧಾರ ಪ್ರಕಟವಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ